ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Pavagada News: ಪಾವಗಡ ಪಟ್ಟಣದಲ್ಲಿ ಶ್ರದ್ಧಾ ಭಕ್ತಿಯಿಂದ ಈದ್ ಮಿಲಾದ್ ಆಚರಣೆ

Pavagada News: ಪಾವಗಡ ಪಟ್ಟಣದಾದ್ಯಂತ ಬುಧವಾರ ಪ್ರವಾದಿ ಮುಹಮ್ಮದ್‌ ಅವರ ಜನ್ಮದಿನದ ಅಂಗವಾಗಿ ಪವಿತ್ರ ಈದ್ ಮಿಲಾದ್ ಹಬ್ಬವನ್ನು ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಈದ್ ಮಿಲಾದ್ ಅಂಗವಾಗಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯಿತು.

ಪಾವಗಡ ಪಟ್ಟಣದಲ್ಲಿ ಶ್ರದ್ಧಾ ಭಕ್ತಿಯಿಂದ ಈದ್ ಮಿಲಾದ್ ಆಚರಣೆ

-

Profile
Siddalinga Swamy Aug 26, 2026 9:35 PM

ಪಾವಗಡ, ಆ.26: ಪಾವಗಡ ಪಟ್ಟಣದಾದ್ಯಂತ ಬುಧವಾರ ಪ್ರವಾದಿ ಮುಹಮ್ಮದ್‌ ಅವರ ಜನ್ಮದಿನದ ಅಂಗವಾಗಿ ಪವಿತ್ರ ಈದ್ ಮಿಲಾದ್ ಹಬ್ಬವನ್ನು ಶ್ರದ್ಧಾ-ಭಕ್ತಿ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಈದ್ ಮಿಲಾದ್ ಅಂಗವಾಗಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ (Pavagada News) ಮೆರವಣಿಗೆ ನಡೆಯಿತು.

ಮುಸ್ಲಿಂ ಸಮುದಾಯದ ಪ್ರಮುಖ ಧಾರ್ಮಿಕ ಆಚರಣೆಗಳಲ್ಲಿ ಒಂದಾದ ಈದ್ ಮಿಲಾದ್ ಹಬ್ಬವನ್ನು ಪ್ರವಾದಿ ಮುಹಮ್ಮದ್ ಅವರ ಜನ್ಮದಿನದ ಸ್ಮರಣಾರ್ಥವಾಗಿ ಭಕ್ತಿಭಾವದಿಂದ ಆಚರಿಸಲಾಗುತ್ತದೆ. ಈ ದಿನವು ಪ್ರವಾದಿ ಮುಹಮ್ಮದ್ ಅವರ ಜೀವನ, ಸರಳತೆ, ದಯೆ, ಮಾನವೀಯತೆ, ಸಹೋದರತ್ವ ಹಾಗೂ ಶಾಂತಿಯ ಸಂದೇಶಗಳನ್ನು ಸ್ಮರಿಸುವ ವಿಶೇಷ ದಿನವಾಗಿದೆ.

ಈದ್ ಮಿಲಾದ್ ಹಬ್ಬದ ಅಂಗವಾಗಿ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯಿತು. ಮಕ್ಕಳಿಂದ ಹಿಡಿದು ಹಿರಿಯರವರೆಗೆ ಎಲ್ಲರೂ ಹೊಸ ಬಟ್ಟೆಗಳನ್ನು ಧರಿಸಿ ಮೆರವಣಿಗೆಯಲ್ಲಿ ಸಂಭ್ರಮದಿಂದ ಭಾಗವಹಿಸಿದ್ದರು.

ಈದ್ ಮಿಲಾದ್ ಹಬ್ಬದ ಅಂಗವಾಗಿ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ, ಧಾರ್ಮಿಕ ಪ್ರವಚನ ಜರುಗಿದವು. ಮುಸ್ಲಿಂ ಸಮುದಾಯದ ಬಾಂಧವರು ಪರಸ್ಪರ ಈದ್ ಮಿಲಾದ್ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.

ಈ ಸಂದರ್ಭದಲ್ಲಿ ಜಾಮೀಯ ಮಸೀದಿಯ ಮುತ್ತವಲ್ಲಿ ಲತೀಪ್ ಸಾಬ್, ಫಜ್ಲು ಸಾಬ್, ಅನ್ವರ್ ಸಾಬ್, ರಿಜ್ವಾನ್ ಉಲ್ಲಾ, ಉನುಸ್, ಅಫಜಲ್ ಅಹಮದ್, ರಾಖಿಬ್, ದಾದಾಪಿರ್, ಹೋಟೆಲ್ ಶಫಿ, ಫಯಾಜ್ ಅಹಮದ್, ರಿಯಾಜ್, ಫಯಾಜ್ ಸೇರಿದಂತೆ ಅನೇಕ ಮಂದಿ ಮುಖಂಡರು ಪಾಲ್ಗೊಂಡಿದ್ದರು.