Pavagada Protest: ಪತ್ರಕರ್ತನ ಮೇಲೆ ಹಲ್ಲೆಗೆ ತೀವ್ರ ಖಂಡನೆ; ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹ
Pavagada Protest: ಅಕ್ರಮ ಸಂಬಂಧದ ಬಗ್ಗೆ ಸುದ್ದಿ ಬಿತ್ತರಿಸಿದ ಹಿನ್ನೆಲೆಯಲ್ಲಿ ಗಡಿನಾಡು ಸ್ಥಳೀಯ ಪತ್ರಿಕೆ ಸಂಪಾದಕರ ಮೇಲೆ ಹಲ್ಲೆ ನಡೆದ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳು ಪಾವಗಡದಲ್ಲಿ ಪ್ರತಿಭಟನೆ ನಡೆಸಿವೆ.
Prabhakara R
January 7, 2025
ಪಾವಗಡ: ಪತ್ರಕರ್ತ ರಾಮಾಂಜಪ್ಪ ಅವರ ಮೇಲಿನ ಹಲ್ಲೆಯನ್ನು ಖಂಡಿಸಿ ಪಾವಗಡ ತಾಲೂಕಿನ ಪತ್ರಕರ್ತರ ಸಂಘಟನೆ, ದಲಿತಪರ ಸಂಘಟನೆ, ಶ್ರೀರಾಮಸೇನೆ ಹಾಗೂ ತಾಲೂಕು ಕುರುಬ ಸಮಾಜ ಸೇರಿ ವಿವಿಧ ಪ್ರಗತಿಪರ ಸಂಘಟನೆಗಳಿಂದ ಪಟ್ಟಣದಲ್ಲಿ ಮಂಗಳವಾರ ಪ್ರತಿಭಟನೆ (Pavagada Protest) ನಡೆಸಲಾಯಿತು.
ಪಟ್ಟಣದ ಐ.ಬಿ.ಯಿಂದ ಪ್ರತಿಭಟನಾ ರ‍್ಯಾಲಿ ನಡೆಸಿದ ಪ್ರತಿಭಟನಾಕಾರರು, ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಪಟ್ಟಣದ ಶನಿಮಹಾತ್ಮ ದೇವಾಲದ ಬಳಿ ಮಾನವ ಸರಪಳಿ ನಿರ್ಮಿಸಿ ನ್ಯಾಯಕ್ಕಾಗಿ ಘೋಷಣೆಗಳನ್ನು ಕೂಗಿದರು.
ಪಟ್ಟಣದ ಪೊಲೀಸ್ ಠಾಣೆ ಬಳಿ ಜಮಾಯಿಸಿದ ನೂರಾರು ಪ್ರತಿಭಟನಾಕಾರರು ಜಮಾಯಿಸಿ, ತಾಲೂಕು ಕಚೇರಿ ಮುಂದೆ ರಸ್ತೆ ತಡೆ ನಡೆಸಿ ಆಕ್ರೋಶ ಹೊರಹಾಕಿದರು. ನಂತರ ಪಾವಗಡ ಪಟ್ಟಣ ಪೊಲೀಸ್ ಠಾಣೆಗೆ ತೆರಳಿ ಪತ್ರಕರ್ತರಿಗೆ ಸೂಕ್ತ ರಕ್ಷಣೆ ಒದಗಿಸಲು ಹಾಗೂ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಪೊಲೀಸ್ ನಿರೀಕ್ಷಕರಿಗೆ ಮನವಿ ಸಲ್ಲಿಸಲಾಯಿತು.
ನಂತರ ತಾಲೂಕು ಕಚೇರಿಗೆ ತೆರಳಿದ ಕುರುಬ ಸಮುದಾಯದ ಮುಖಂಡರು ಹಾಗೂ ಸದಸ್ಯರು ಆರೋಪಿ ನಾರಾಯಣ ರೆಡ್ಡಿ ಕುಟುಂಬವನ್ನು ತಾಲೂಕಿನಿಂದ ಗಡಿಪಾರು ಮಾಡಬೇಕು ಹಾಗೂ ಪತ್ರಕರ್ತರಿಗೆ ಸೂಕ್ತ ರಕ್ಷಣೆಗೆ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಏನಿದು ಪ್ರಕರಣ?ಅಕ್ರಮ ಸಂಬಂಧದ ಬಗ್ಗೆ ಸುದ್ದಿ ಬಿತ್ತರಿಸಿದ ಹಿನ್ನೆಲೆಯಲ್ಲಿ ಗಡಿನಾಡು ಸ್ಥಳೀಯ ಪತ್ರಿಕೆ ಸಂಪಾದಕ ರಾಮಾಂಜಿನಪ್ಪ ಮೇಲೆ ಮೂವರು ಮಹಿಳೆಯರು ಹಲ್ಲೆ ನಡೆಸಿದ್ದ ಘಟನೆ ಪಾವಗಡದಲ್ಲಿ ಸೋಮವಾರ ನಡೆದಿತ್ತು.
ಅನೈತಿಕ ಸಂಬಂಧ ಆರೋಪದಲ್ಲಿ ಕಾಂಗ್ರೆಸ್ ಮುಖಂಡ ನಾರಾಯಣರೆಡ್ಡಿಯನ್ನು ಪೊಲೀಸರು ಬಂಧಿಸುವ ವಿಡಿಯೊ ಮಾಡಿ ಬಿತ್ತರಿಸಿದ ಹಿನ್ನೆಲೆಯಲ್ಲಿ ಸ್ಥಳೀಯ ಪತ್ರಿಕೆ ಸಂಪಾದಕನ ಮೇಲೆ ಮಾರಣಾಂತಿಕ ಹಲ್ಲೆ ಮಾಡಲಾಗಿತ್ತು. ಆರೋಪಿಯನ್ನು ಬಂಧಿಸುವ ವಿಡಿಯೊ ರೆಕಾರ್ಡ್ ಮಾಡಿದ್ದ ಗಡಿನಾಡ ನ್ಯೂಸ್ ಸಂಪಾದಕ ರಾಮಾಂಜಿನಪ್ಪ, ತಮ್ಮ ಯೂಟ್ಯೂಬ್ ಚಾನೆಲ್‌ಗೂ ಅಪ್‌ಲೋಡ್ ಮಾಡಿದ್ದರು. ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಸೋಮವಾರ ಸಂಜೆ ಮೂವರು ಮಹಿಳೆಯರು, ಪತ್ರಕರ್ತನ ಬಟ್ಟೆ ಹರಿದು ಚಪ್ಪಲಿಯಿಂದ ಹೊಡೆದು ಹಲ್ಲೆ ನಡೆಸಿದ್ದರು. ಕಾಂಗ್ರೆಸ್ ಮುಖಂಡ ನಾರಾಯಣರೆಡ್ಡಿ ವಿರುದ್ಧ ಹಲ್ಲೆ ಮಾಡಿಸಿರುವ ಆರೋಪ ಕೇಳಿಬಂದಿದೆ.
ಈ ಸುದ್ದಿಯನ್ನೂ ಓದಿ | Viral Video: ಕೆಳಗೆ ಬಿದ್ದ ಮಗುವಿನ ಶೂ ಎತ್ತಿಕೊಟ್ಟ ಆನೆಯ ಮುದ್ದಾದ ವಿಡಿಯೊ ವೈರಲ್
ಟ್ರ್ಯಾಕ್ಟರ್‌ಗೆ ಬೈಕ್ ಗುದ್ದಿ ಮೂವರು ಬೈಕ್ ಸವಾರರು ಸ್ಥಳದಲ್ಲೇ ಸಾವು
ತುಮಕೂರು: ಟ್ರ್ಯಾಕ್ಟರ್‌ಗೆ ಬೈಕ್ ಗುದ್ದಿ ಮೂವರು ಸವಾರರು ಸ್ಥಳದಲ್ಲಿ ಮೃತಪಟ್ಟ ಘಟನೆ (Bike Accident) ಮಂಗಳವಾರ ಬೆಳ್ಳಂಬೆಳಗ್ಗೆ ಕೋರಾ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಹಮದ್ ಆಸೀಫ್ (12 ) ಮಮ್ತಾಜ್ (38) ಶಾಖೀರ್ ಹುಸೇನ್ (48) ಮೃತರು.
ತಾಲೂಕಿನ ಓಬಳಾಪುರ ಗೇಟ್ ಬಳಿ ಭೀಕರ ದುರಂತ ಸಂಭವಿಸಿದೆ. ಟ್ರ್ಯಾಕ್ಟರ್ ಟ್ರೈಲರ್‌ಗೆ ಬೈಕ್ ಗುದ್ದಿಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತರು ಮಧುಗಿರಿ ತಾಲ್ಲೂಕಿನ ಪುರವರದ ಗುಡ್ಡೇನಹಳ್ಳಿ ಗ್ರಾಮದ ನಿವಾಸಿಗಳು. ಕೋರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಎಸ್‌ಪಿ ಅಶೋಕ್, ಡಿವೈಎಸ್‌ಪಿ ಚಂದ್ರಶೇಖರ್ ಹಾಗೂ ಗ್ರಾಮಾಂತರ ಸಿಪಿಐ ಭೇಟಿ ನೀಡಿ ಪರಿಶೀಲಿಸಿದರು.
ಈ ಸುದ್ದಿಯನ್ನೂ ಓದಿ | Viral News: ಇದು ಓಯೋ ರೂಂ ಅಲ್ಲ… ʻರೋಮ್ಯಾನ್ಸ್ʼ ಮಾಡಿದರೆ ಹುಷಾರ್ ಎಂದ ಆಟೋ ಚಾಲಕ; ತಮಾಷೆ ಮಾಡಿದ ನೆಟ್ಟಿಗರು!