ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ವಿಶ್ವಕರ್ಮ ಸಮುದಾಯದವರು ವೃತ್ತಿಯಲ್ಲಿ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳಿ: ಶಾಸಕ ಜಿ.ಬಿ. ಜ್ಯೋತಿಗಣೇಶ್

Tumkur News: ವಿಶ್ವಕರ್ಮ ಜಯಂತಿಯ ದಿನವೇ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನವಿರುವುದು ವಿಶೇಷ. ಕರಕುಶಲ ಕರ್ಮಿಗಳಿಗೆ ಪ್ರೋತ್ಸಾಹ ನೀಡಲು ಪ್ರಧಾನಿ ಮೋದಿ ಅವರು ವಿಶೇಷ ‘ವಿಶ್ವಕರ್ಮ ಯೋಜನೆʼಯನ್ನು ಜಾರಿಗೆ ತಂದಿದ್ದು, ಸಮುದಾಯದವರು ಇದರ ಪ್ರಯೋಜನ ಪಡೆಯಬೇಕು ಎಂದು ಶಾಸಕ ಜಿ.ಬಿ. ಜ್ಯೋತಿಗಣೇಶ್ ತಿಳಿಸಿದ್ದಾರೆ.

ವಿಶ್ವಕರ್ಮ ಸಮುದಾಯದವರು ವೃತ್ತಿಯಲ್ಲಿ ತಂತ್ರಜ್ಞಾನ ಬಳಸಿ: ಜ್ಯೋತಿಗಣೇಶ್

-

Profile
Siddalinga Swamy Sep 18, 2026 6:28 PM

ತುಮಕೂರು, ಸೆ.18: ಕಲಾಕೌಶಲ್ಯ ವೃತ್ತಿಯಲ್ಲಿ ತೊಡಗಿಸಿಕೊಂಡಿರುವ ವಿಶ್ವಕರ್ಮ ಸಮುದಾಯದವರು ತಮ್ಮ ವೃತ್ತಿಯಲ್ಲಿ ಆಧುನಿಕ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಬೇಕು ಎಂದು ಶಾಸಕ ಜಿ.ಬಿ. ಜ್ಯೋತಿಗಣೇಶ್ ಕರೆ ನೀಡಿದರು. ನಗರದ (Tumkur News) ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಹಿಂದುಳಿದ ಮೋರ್ಚಾದಿಂದ ಹಮ್ಮಿಕೊಳ್ಳಲಾಗಿದ್ದ ‘ವಿಶ್ವಕರ್ಮ ಜಯಂತಿ’ ಆಚರಣೆ ಸಮಾರಂಭದಲ್ಲಿ ಮಹರ್ಷಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.

ವಿಶ್ವಕರ್ಮ ಜಯಂತಿಯ ದಿನವೇ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನವಿರುವುದು ವಿಶೇಷ ಎಂದ ಅವರು, ಕರಕುಶಲ ಕರ್ಮಿಗಳಿಗೆ ಪ್ರೋತ್ಸಾಹ ನೀಡಲು ಪ್ರಧಾನಿ ಮೋದಿ ಅವರು ವಿಶೇಷ ‘ವಿಶ್ವಕರ್ಮ ಯೋಜನೆʼ ಯನ್ನು ಜಾರಿಗೆ ತಂದಿದ್ದು, ಸಮುದಾಯದವರು ಇದರ ಪ್ರಯೋಜನ ಪಡೆಯುವಂತೆ ತಿಳಿಸಿದರು.

ಹೊಸತನಕ್ಕೆ ಹೆಸರಾದ ವಿಶ್ವಕರ್ಮ ಸಮುದಾಯದವರು ಹಳೆ ಕಾಲದ ವೃತ್ತಿ ಬದಲಿಗೆ ಇಂದಿನ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಬೇಕು. ವಿಶ್ವಕರ್ಮ ಯೋಜನೆಯಡಿ ಕೌಶಲ್ಯ ತರಬೇತಿ ನೀಡಲಾಗುತ್ತಿದ್ದು, ಬ್ಯಾಂಕ್‌ಗಳಲ್ಲಿ ಸಾಲ ಸೌಲಭ್ಯದ ಜೊತೆಗೆ ಉತ್ಪನ್ನಗಳ ಮಾರಾಟಕ್ಕೆ ಮಾರುಕಟ್ಟೆ ನೆರವು ನೀಡಲಾಗುತ್ತಿದೆ. ಇದರ ಸದುಪಯೋಗ ಪಡೆದು ಆರ್ಥಿಕವಾಗಿ ಸದೃಢರಾಗಬೇಕು ಎಂದು ಅವರು ಆಶಿಸಿದರು.

ಜಿಲ್ಲಾ ವಿಶ್ವಕರ್ಮ ಸೇವಾ ಸಮಿತಿ ಅಧ್ಯಕ್ಷ ಎಚ್.ಪಿ. ನಾಗರಾಜಾಚಾರ್ ಮಾತನಾಡಿ, ವಿಶ್ವಕರ್ಮ ಸಮುದಾಯದವರು ಎಲ್ಲಾ ಸಮಾಜಗಳೊಂದಿಗೆ ಸಹೃದಯತೆಯಿಂದ ಬೆರೆಯುತ್ತಾರೆ. ಶ್ರಮ ಜೀವಿಗಳಾದ ನಾವು ಕಲೆ, ಸಂಸ್ಕೃತಿಯ ವೃತ್ತಿ ಆರಾಧಕರಾಗಿದ್ದು, ಇತರೆ ಸಮಾಜದವರೂ ಸಹ ವಿಶ್ವಕರ್ಮ ಸಮುದಾಯಕ್ಕೆ ಬೆಂಬಲ ನೀಡಿ ಸಹಕರಿಸಬೇಕು ಎಂದು ಕೋರಿದರು.

ಕಾರ್ಯಕ್ರಮದಲ್ಲಿ ವಿಶ್ವಕರ್ಮ ಸಮುದಾಯದ ಸಾಧಕರಾದ ಸಮಾಜ ಸೇವಾ ಸಮಿತಿ ಜಿಲ್ಲಾಧ್ಯಕ್ಷ ನಾಗರಾಜಾಚಾರ್, ಟಿ.ಜೆ. ಉಷಾ ಭಾಸ್ಕರ್, ಎನ್.ಹೆಚ್. ಶಕುಂತಲಾ ಚನ್ನಪ್ಪಾಚಾರ್, ಆರ್. ಚಂದ್ರಾಚಾರ್, ಪುಟ್ಟಾಚಾರ್ ಮತ್ತು ಆನಂದ್‌ಕುಮಾರ್ ಅವರನ್ನು ಶಾಸಕ ಜ್ಯೋತಿಗಣೇಶ್ ಸನ್ಮಾನಿಸಿ ಗೌರವಿಸಿದರು.

ಪ್ರಾಥಮಿಕ ಶಾಲೆ ಶಿಕ್ಷಕರಿಗಿನ್ನು 6 ತಿಂಗಳ ವಿಶೇಷ ಬ್ರಿಡ್ಜ್ ಕೋರ್ಸ್; ತಳಮಟ್ಟದಿಂದಲೇ ಶೈಕ್ಷಣಿಕ ಗುಣಮಟ್ಟ ವೃದ್ಧಿಗೆ ಸಚಿವ ಪ್ರಲ್ಹಾದ್‌ ಜೋಶಿ ಮಹತ್ತರ ಹೆಜ್ಜೆ

ನಗರ ಬಿಜೆಪಿ ಅಧ್ಯಕ್ಷ ಧನುಷ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ನಗರ ಒಬಿಸಿ ಮೋರ್ಚಾ ಅಧ್ಯಕ್ಷ ಭರತ್, ಉಪಾಧ್ಯಕ್ಷ ವೆಂಕಟೇಶಾಚಾರ್, ಚಿನ್ನಬೆಳ್ಳಿ ಕೆಲಸಗಾರರ ಸಂಘದ ಅಧ್ಯಕ್ಷ ಟಿ.ಎ. ರವಿಕುಮಾರ್, ನಗರ ಮಂಡಳ ಸ್ವಾಮಿ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಕೆ. ವೇದಮೂರ್ತಿ, ಮುಖಂಡರಾದ ಬಂಬೂ ಮೋಹನ್, ನಿಸರ್ಗ ರಮೇಶ್, ಪ್ರೀತಮ್ ಜೈನ್, ಚೇತನ್‌ಕುಮಾರ್, ರೇಖಾ ಕುಮಾರ್, ಮಂಜುಳಾ ಲೋಕೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.