ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Tumkur News: ಕಡಬ ಗ್ರಾಪಂ ಉಪಾಧ್ಯಕ್ಷರಾಗಿ ಪೂರ್ಣಿಮಾ ಶಿವಕುಮಾರ್ ಅವಿರೋಧ ಆಯ್ಕೆ

ಸರ್ವ ಸದಸ್ಯರ ಸಹಕಾರದಿಂದ ಅವಿರೋಧವಾಗಿ ಆಯ್ಕೆಯಾಗಿದ್ದೇನೆ. ಎಲ್ಲಾ ಸದಸ್ಯರ ಸಹಕಾರ ದೊಂದಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳಿಗೆ ಕುಡಿಯುವ ನೀರು, ಚರಂಡಿ ಸ್ವಚ್ಛತೆ, ರಸ್ತೆ ನಿರ್ಮಾಣ, ಬೀದಿದೀಪ ಸೇರಿದಂತೆ ಗ್ರಾಮ ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತೇನೆ. ಇನ್ನೂ ಬೇಸಿಗೆ ಇರುವುದರಿಂದ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಲಾಗುವುದು

ಕಡಬ ಗ್ರಾಪಂ ಉಪಾಧ್ಯಕ್ಷರಾಗಿ ಪೂರ್ಣಿಮಾ ಶಿವಕುಮಾರ್ ಅವಿರೋಧ ಆಯ್ಕೆ

Profile Ashok Nayak May 15, 2025 1:01 PM

ಗುಬ್ಬಿ: ತಾಲ್ಲೂಕಿನ ಕಡಬ ಗ್ರಾಮ ಪಂಚಾಯಿತಿಯಲ್ಲಿ ನಡೆದ ಉಪಾಧ್ಯಕ್ಷರ ಚುನಾವಣೆಯಲ್ಲಿ ಉಪಾಧ್ಯಕ್ಷರಾಗಿ ಕಡಬ-1 ಸದಸ್ಯೆ ಪೂರ್ಣಿಮಾ ಶಿವಕುಮಾರ್ ಅವಿರೋಧವಾಗಿ ಆಯ್ಕೆಯಾದರು.  ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯನ್ನು ಕಂದಾಯ ನಿರೀಕ್ಷಕ ಮೋಹನ್ ನಡೆಸಿಕೊಟ್ಟರು. ಈ ಹಿಂದೆ ಉಪಾಧ್ಯಕ್ಷ ಸ್ಥಾನಕ್ಕೆ ಕಲ್ಪನಾ ರಾಜೀನಾಮೆ ಸಲ್ಲಿಸಿ ತೆರ ವಾದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಏಕೈಕ ನಾಮಪತ್ರ ಸಲ್ಲಿಸಿದ್ದ ಹಿನ್ನಲೆ ಪೂರ್ಣಿಮಾ ಶಿವಕುಮಾರ್ ಅವಿರೋಧ ಆಯ್ಕೆ ಘೋಷಣೆ ಮಾಡಲಾಯಿತು.

ಇದನ್ನೂ ಓದಿ: Chikkanayakanahalli (Tumkur) News: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ನಿರಂತರ ಅಧ್ಯಯನದಿಂದ ಸಾಧನೆ ಸಾಧ್ಯ: ಶಾಸಕ ಸಿ.ಬಿ.ಸುರೇಶ್ ಬಾಬು

ನೂತನ ಉಪಾಧ್ಯಕ್ಷೆ ಪೂರ್ಣಿಮಾ ಮಾತನಾಡಿ, ಸರ್ವ ಸದಸ್ಯರ ಸಹಕಾರದಿಂದ ಅವಿರೋಧವಾಗಿ ಆಯ್ಕೆಯಾಗಿದ್ದೇನೆ. ಎಲ್ಲಾ ಸದಸ್ಯರ ಸಹಕಾರದೊಂದಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳಿಗೆ ಕುಡಿಯುವ ನೀರು, ಚರಂಡಿ ಸ್ವಚ್ಛತೆ, ರಸ್ತೆ ನಿರ್ಮಾಣ, ಬೀದಿದೀಪ ಸೇರಿದಂತೆ ಗ್ರಾಮ ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತೇನೆ. ಇನ್ನೂ ಬೇಸಿಗೆ ಇರುವುದರಿಂದ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಲಾಗುವುದು. ನರೇಗಾ ಕಾಮಗಾರಿಯನ್ನು ಸಮರ್ಪಕ ವಾಗಿ ಅನುಷ್ಠಾನಗೊಳಿಸುವ ಮೂಲಕ ತಾಲ್ಲೂಕಿನಲ್ಲಿ ಮಾದರಿ ಗ್ರಾಮ ಪಂಚಾಯಿತಿಯನ್ನಾಗಿ ಮಾಡುತ್ತೇನೆ ಎಂದರು‌.

ಇದೇ ಸಂದರ್ಭದಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಶ್ರೀ, ಸದಸ್ಯರಾದ ಕಲ್ಪನಾ, ರಂಗನಾಥ್, ಶಿಲ್ಪ, ಲೋಕೇಶ್, ನಾಗರತ್ನ, ಪುಟ್ಟತಾಯಮ್ಮ, ಭರತ್ ಗೌಡ, ಗಿರೀಶ್, ಪುರುಷೋತ್ತಮ, ಕೆ.ಎಸ್.ಸತೀಶ್, ವೆಂಕಟರಂಗಯ್ಯ, ಪೂರ್ಣಲಕ್ಷ್ಮಿ, ಕವಿತ, ಸಿ.ಕೆ.ಗೌಡ, ಮುಖಂಡರಾದ ಚಿಕ್ಕ ತಿಮ್ಮಯ್ಯ, ರಾಜೇಶ್ ಗೌಡ, ಕಡಬ ಶಂಕರ್, ಮಂಜುನಾಥ್,ಕೆ.ಎಸ್.ರಮೇಶ್, ಪಾಂಡುರಂಗಯ್ಯ, ಪಿಡಿಓ ನಟರಾಜ್ ಸೇರಿದಂತೆ ಇತರರು ನೂತನ ಉಪಾಧ್ಯಕ್ಷೆ ಪೂರ್ಣಿಮಾ ಅವರಿಗೆ ಅಭಿನಂದಿಸಿದರು.