ಪಾವಗಡ, ಜು.25: ಜೀವನದಲ್ಲಿ ಉತ್ತಮ ಹುದ್ದೆಗಳನ್ನು ಅಲಂಕರಿಸಿದ ನಂತರ ತಮ್ಮ ಸಾಧನೆಯನ್ನು ಸಮಾಜದ ಸೇವೆಗೆ ಬಳಸಬೇಕು. ಕನಿಷ್ಠ ನಾಲ್ಕು ಜನರಿಗೆ ಸಹಾಯ ಮಾಡುವ ಮನೋಭಾವವನ್ನು ಪ್ರತಿಯೊಬ್ಬರೂ ಜೀವನದಲ್ಲಿ ರೂಢಿಸಿಕೊಳ್ಳಬೇಕು ಎಂದು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಗಾಯತ್ರಿಬಾಯಿ ಹೇಳಿದರು. ಪಟ್ಟಣದ (Pavagada News) ತೇಜಸ್ ಚಾರಿಟೇಬಲ್ ಹಾಗೂ ಎಜುಕೇಶನ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಮಾನವೀಯ ಮೌಲ್ಯಗಳು, ಸಾಮಾಜಿಕ ಜವಾಬ್ದಾರಿ ಮತ್ತು ಸೇವಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಯಶಸ್ಸು ವೈಯಕ್ತಿಕ ಸಾಧನೆಗೆ ಮಾತ್ರ ಸೀಮಿತವಾಗದೆ ಸಮಾಜದ ಅಭಿವೃದ್ಧಿಗೂ ಕಾರಣವಾಗಬೇಕು ಎಂದು ಅವರು ತಿಳಿಸಿದರು.
ಟ್ರಸ್ಟ್ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸುವ ಮೂಲಕ ಅವರ ಸಾಧನೆಯನ್ನು ಪ್ರೋತ್ಸಾಹಿಸಲಾಗುತ್ತಿದೆ. ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸಿ, ಇನ್ನಷ್ಟು ಸಾಧನೆ ಮಾಡಲು ಪ್ರೇರಣೆ ನೀಡುತ್ತವೆ ಎಂದು ಅವರು ಅಭಿಪ್ರಾಯಪಟ್ಟರು.
ತಾಲೂಕಿನಲ್ಲಿ ಪ್ರತಿಯೊಂದು ಸಮುದಾಯದಲ್ಲಿ ಪಿಯುಸಿ ಅತಿಹೆಚ್ಚು ಅಂಕಗಳನ್ನು ಪಡೆದಿರುವ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರನ್ನು ಗುರುತಿಸಿ ತಲ ಮೂರು ಸಾವಿರ ರೂ. ಗಳ ಜತೆಯಲ್ಲಿ ಪಾರಿತೋಷಕ ನೀಡಿ ಸನ್ಮಾನಿಸಿ ಗೌರವಿಸಿದರು.
ಸಬ್ ರಿಜಿಸ್ಟ್ರಾರ್ ಶಂಕರ್ ಮೂರ್ತಿ ನಾಯ್ಕ್ ಮಾತನಾಡಿ, ದಾನದಲ್ಲಿ ಅತಿ ಶ್ರೇಷ್ಠವಾದುದ್ದು ವಿದ್ಯಾದಾನ. ನಮ್ಮ ವಿದ್ಯಾರ್ಥಿ ಜೀವನದಲ್ಲಿ ನಮ್ಮ ಗುರುಗಳು ಉತ್ತಮ ಅಂಕಗಳನ್ನು ಪಡೆದವರಿಗೆ ಪೆನ್ಸಿಲ್ ಹಾಗೂ ಪೆನ್ನುಗಳನ್ನು ನೀಡಲಾಗುತ್ತಿತ್ತು ಅದನ್ನು ಮನವರಿಕೆ ಮಾಡಿಕೊಂಡು ನನ್ನ ಧರ್ಮಪತ್ನಿ ಗಾಯತ್ರಿ ಅವರ ಆಸೆಯಂತೆ ಸುಮಾರು ತೊಂಬುತ್ತು ವಿದ್ಯಾರ್ಥಿಗಳಿಗೆ ಪ್ರತಿಭಾನ್ವಿತ ವಿದ್ಯಾರ್ಥಿಗಳ ಸನ್ಮಾನಿಸಿದ್ದೆವೆ ಎಂದು ಹೇಳಿದರು.
ನಾಳೆ ಬೆಂಗಳೂರಿನಲ್ಲಿ ತುಳುವೆರೆ ಚಾವಡಿಯಿಂದ 28ನೇ ವರ್ಷದ ಪರ್ಬದ ಲೇಸ್ ಕಾರ್ಯಕ್ರಮ
ಕಾರ್ಯಕ್ರಮದಲ್ಲಿ ಟ್ರಸ್ಟ್‌ನ ಅಧ್ಯಕ್ಷ, ಮಾಜಿ ಶಾಸಕ ಸೋಮ್ಲಾನಾಯ್ಕ್, ಶಿಕ್ಷಕ ನಾಗರಾಜ್ ನಾಯ್ಕ್, ಕು.ಹರ್ಷಿತ ಹಾಗೂ ಇತರೆ ಪದಾಧಿಕಾರಿಗಳು, ಶಿಕ್ಷಕರು, ಪೋಷಕರು, ವಿದ್ಯಾರ್ಥಿಗಳು ಹಾಗೂ ವಿವಿಧ ಗಣ್ಯರು ಉಪಸ್ಥಿತರಿದ್ದರು.