ಗುಬ್ಬಿ: ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಆಯೋಜಿಸುವ 6 ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಡಿಸೆಂಬರ್ 22 ರಂದು ನಡೆಸಲು ದಿನಾಂಕ ನಿಗದಿಯಾಗಿದ್ದು ಸಮ್ಮೇಳನ ತಯಾರಿ ಕುರಿತು ಚರ್ಚಿಸಲು ತಾಲ್ಲೂಕು ಕಛೇರಿ ಸಭಾಂಗಣದಲ್ಲಿ ಇದೇ ತಿಂಗಳ 27 ರಂದು ಬೆಳಿಗ್ಗೆ 11 ಗಂಟೆಗೆ ಪೂರ್ವಭಾವಿ ಸಭೆ ಆಯೋಜಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಅಧ್ಯಕ್ಷ ಎಚ್.ಸಿ.ಯತೀಶ್ ತಿಳಿಸಿದರು.
ಇದನ್ನೂ ಓದಿ: Gubbi News: ಪ್ರಜಾ ಸಂಗ್ರಾಮ ಕೋ-ಆಪರೇಟಿವ್ ಸೊಸೈಟಿ ವತಿಯಿಂದ ಷೇರು ಪ್ರಮಾಣ ಪತ್ರ ವಿತರಣೆ
ಪಟ್ಟಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ನಮ್ಮ ಮಾತೃ ಭಾಷೆ ಕನ್ನಡದ ಪರಂಪರೆ, ಸಂಸ್ಕೃತಿ ಸಾರುವ ತಾಲ್ಲೂಕು ಮಟ್ಟದ ಸಾಹಿತ್ಯ ಸಮ್ಮೇಳನಕ್ಕೆ ಶಾಸಕ ಎಸ್.ಆರ್.ಶ್ರೀನಿವಾಸ್ ಅವರು ಸ್ವಾಗತ ಸಮಿತಿ ಅಧ್ಯಕ್ಷರಾಗಿದ್ದಾರೆ. ಇವರ ಮಾರ್ಗದರ್ಶನದಲ್ಲಿ ತಹಶೀಲ್ದಾರ್ ಆರತಿ.ಬಿ ಅವರು ನೇತೃತ್ವ ವಹಿಸಿ ಸಭೆ ನಡೆಸಿ ವಿವಿಧ ಸಮಿತಿ ರಚಿಸಿ ಅದ್ದೂರಿಯಾಗಿ ಸಮ್ಮೇಳನ ನಡೆಸಲು ಚರ್ಚಿಸಲಾಗುವುದು ಎಂದರು.