ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

K N Rajanna: ಕೆ.ಎನ್. ರಾಜಣ್ಣ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವಂತೆ ಪ್ರತಿಭಟನೆ

ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರನ್ನು ಸಂಪುಟದಿಂದ ವಜಾ ಮಾಡಿರುವುದನ್ನು ಖಂಡಿಸಿ, ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವಂತೆ ಒತ್ತಾಯಿಸಿ ಕೆ.ಎನ್.ಆರ್. ಅಭಿಮಾನಿಗಳು ಮತ್ತು ವಿವಿಧ ಸಂಘಟನೆಗಳ ಮುಖಂಡರು ಚಿಕ್ಕನಾಯಕನಹಳ್ಳಿ ಯಲ್ಲಿ ಪ್ರತಿಭಟನೆ ನಡೆಸಿದರು.

ಕೆ.ಎನ್. ರಾಜಣ್ಣ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವಂತೆ ಪ್ರತಿಭಟನೆ

-

Ashok Nayak Ashok Nayak Sep 9, 2025 12:09 AM

​ಚಿಕ್ಕನಾಯಕನಹಳ್ಳಿ: ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರನ್ನು ಸಂಪುಟದಿಂದ ವಜಾ ಮಾಡಿರುವುದನ್ನು ಖಂಡಿಸಿ, ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವಂತೆ ಒತ್ತಾಯಿಸಿ ಕೆ.ಎನ್.ಆರ್. ಅಭಿಮಾನಿಗಳು ಮತ್ತು ವಿವಿಧ ಸಂಘಟನೆಗಳ ಮುಖಂಡರು ಚಿಕ್ಕನಾಯಕನಹಳ್ಳಿ ಯಲ್ಲಿ ಪ್ರತಿಭಟನೆ ನಡೆಸಿದರು.

​ಪಟ್ಟಣದ ನೆಹರೂ ವೃತ್ತದಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಸಿಂಗದಹಳ್ಳಿ ರಾಜಕುಮಾರ್ ಅವರ ನೇತೃತ್ವದಲ್ಲಿ ತಾಲ್ಲೂಕು ದಲಿತ, ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ಕ್ರಿಯಾ ಸಮಿತಿ, ಕೆ.ಎನ್.ಆರ್. ಅಭಿಮಾನಿ ಬಳಗ ಮತ್ತು ಸಹಕಾರಿ ಬಂಧುಗಳ ಸಂಯುಕ್ತಾಶ್ರಯದಲ್ಲಿ ಈ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರು ತಾಲ್ಲೂಕು ಕಚೇರಿಯವರೆಗೆ ಮೆರವಣಿಗೆ ನಡೆಸಿದರು.

ಇದನ್ನೂ ಓದಿ: KN Rajanna: ಸಿದ್ದರಾಮಯ್ಯ ಇರುವವರೆಗೂ ನಾನು ಕಾಂಗ್ರೆಸ್‌ನಲ್ಲೇ: ಕೆಎನ್‌ ರಾಜಣ್ಣ

​ಈ ಸಂದರ್ಭದಲ್ಲಿ ಮಾತನಾಡಿದ ಸಿಂಗದಹಳ್ಳಿ ರಾಜಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಯಡಿಯೂರಪ್ಪ ಅವರನ್ನು ಹೊರತುಪಡಿಸಿ, ಇಡೀ ರಾಜ್ಯದಲ್ಲಿ ಕೆ.ಎನ್. ರಾಜಣ್ಣ ಅವರ ಪರವಾಗಿ ಜನರು ಸ್ವಯಂಪ್ರೇರಿತವಾಗಿ ಬೆಂಬಲಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಈ ಬಗ್ಗೆ ಯೋಚಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಲಗೈ ಬಂಟನಂತಿರುವ ರಾಜಣ್ಣ ಅವರನ್ನು ದೂರ ಮಾಡಲು ಪ್ರಯತ್ನಿಸುತ್ತಿರುವುದು ಸರಿಯಲ್ಲ ಎಂದು ದೂರಿದರು. ಕಾಂಗ್ರೆಸ್ ಪಕ್ಷಕ್ಕೆ ರಾಜಣ್ಣ ಅವರ ಕೊಡುಗೆ ಅಪಾರವಾಗಿದ್ದು, ಈಗಾಗಲೇ ಪಕ್ಷಾತೀತವಾಗಿ ಮತ್ತು ಜಾತ್ಯತೀತವಾಗಿ ರಾಜ್ಯಾದ್ಯಂತ ರಾಜಣ್ಣ ಪರ ಹೋರಾಟದ ಅಲೆ ಎದ್ದಿದೆ ಎಂದು ಹೇಳಿದರು.

​ರಾಜಣ್ಣ ಅವರನ್ನು ಸಂಪುಟದಿಂದ ಕೈಬಿಟ್ಟಿರುವುದು ಅವರಿಗೆ ಮಾತ್ರವಲ್ಲ, ರಾಜ್ಯದ ದಲಿತರು, ಅಲ್ಪಸಂಖ್ಯಾತರು ಮತ್ತು ಹಿಂದುಳಿದ ವರ್ಗದ ಜನರಿಗೆ ಮಾಡಿದ ಅವಮಾನ ಎಂದು ಅವರು ಬಣ್ಣಿಸಿದರು. ರಾಜ್ಯದ ಜನರೆಲ್ಲರೂ ಒಟ್ಟಾಗಿ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂದು ಒತ್ತಾಯಿಸಿದರು.

​ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯೆ ಲೋಹಿತಬಾಯಿ ಮಾತನಾಡಿ, ರಾಜಣ್ಣ ಅವರು ಜಿಲ್ಲೆಗೆ ಬಡವರ ಪರವಾಗಿರುವ ಧ್ವನಿಯಾಗಿದ್ದು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಎಲ್ಲರೂ ಅವರ ಪರವಾಗಿದ್ದಾರೆ ಎಂದು ತಿಳಿಸಿದರು.