ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Chikkanayakanahalli News: ಬೀದಿ ನಾಟಕದ ಮೂಲಕ ಸಾರ್ವಜನಿಕರಿಗೆ ಜಾಗೃತಿ

ಏಡ್ಸ್‌ನಂತಹ ಮಾರಕ ರೋಗವನ್ನು ನಿರ್ಮೂಲನೆ ಮಾಡಲು ಪ್ರತಿಯೊಬ್ಬ ವ್ಯಕ್ತಿಯೂ ಜವಾಬ್ದಾರಿ ಯನ್ನು ಹೊತ್ತುಕೊಳ್ಳಬೇಕು ಮತ್ತು ಸಮುದಾಯವು ಅದರಲ್ಲಿ ಪಾಲ್ಗೊಂಡಾಗ ಮಾತ್ರ ಸದೃಢ ಸಮಾಜವನ್ನು ಕಟ್ಟಲು ಸಾಧ್ಯ ಎಂದು ಪಟ್ಟಣದ ನವೋದಯ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಗಳು ಬೀದಿ ನಾಟಕದ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು.

ಚಿಕ್ಕನಾಯಕನಹಳ್ಳಿ: ಏಡ್ಸ್‌ನಂತಹ ಮಾರಕ ರೋಗವನ್ನು ನಿರ್ಮೂಲನೆ ಮಾಡಲು ಪ್ರತಿಯೊಬ್ಬ ವ್ಯಕ್ತಿಯೂ ಜವಾಬ್ದಾರಿಯನ್ನು ಹೊತ್ತುಕೊಳ್ಳಬೇಕು ಮತ್ತು ಸಮುದಾಯವು ಅದರಲ್ಲಿ ಪಾಲ್ಗೊಂಡಾಗ ಮಾತ್ರ ಸದೃಢ ಸಮಾಜವನ್ನು ಕಟ್ಟಲು ಸಾಧ್ಯ ಎಂದು ಪಟ್ಟಣದ ನವೋದಯ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಬೀದಿ ನಾಟಕದ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು.

​ಪಟ್ಟಣದ ನವೋದಯ ಪ್ರಥಮ ದರ್ಜೆ ಕಾಲೇಜಿನ ರೆಡ್ ರಿಬ್ಬನ್ ಕ್ಲಬ್ ಮತ್ತು ಸಾರ್ವಜನಿಕ ಆಸ್ಪತ್ರೆಯ ಐ. ಸಿ. ಟಿ. ಸಿ ವತಿಯಿಂದ, ಏಡ್ಸ್ ಮುಕ್ತ ಸಮಾಜ ಕಟ್ಟುವ ಆಶಯದೊಂದಿಗೆ ಪಟ್ಟಣದ ಮಾರುಕಟ್ಟೆಯಲ್ಲಿ ಬೀದಿ ನಾಟಕವನ್ನು ಆಯೋಜಿಸಲಾಗಿತ್ತು.

ಇದನ್ನೂ ಓದಿ: Chikkanayakanahalli News: ಶಿಕ್ಷಣದಿಂದ ಯಾರೂ ವಂಚಿತರಾಗಬಾರದು: ಸಿಎಸ್ ಕಾಂತರಾಜು

ವಿದ್ಯಾರ್ಥಿಗಳು ಈ ನಾಟಕದಲ್ಲಿ ಕ್ರಿಯಾಶೀಲರಾಗಿ ಭಾಗವಹಿಸಿ, ಉತ್ತಮ ಸಂಭಾಷಣೆ, ಹಾಡು ಮತ್ತು ಅಭಿನಯದ ಮೂಲಕ ಏಡ್ಸ್ ರೋಗದ ಕುರಿತು ಜನಸಾಮಾನ್ಯರಿಗೆ ಸುಲಭವಾಗಿ ತಿಳಿಸಿದರು. ಅವರ ಈ ಪ್ರಯತ್ನ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಯಿತು.

​ಈ ಕಾರ್ಯಕ್ರಮದಲ್ಲಿ ಐಸಿಟಿಸಿ ಆಪ್ತ ಸಮಾಲೋಚಕರಾದ ಎಸ್.ಟಿ.ನವೀನ್, ಕಾಲೇಜಿನ ಪ್ರಾಂಶು ಪಾಲರಾದ ಡಾ. ರವಿಕುಮಾರ್ ಸಿ, ಆಸ್ಪತ್ರೆಯ ಸಿಬ್ಬಂದಿಯಾದ ವೆಂಕಟರಾಮಯ್ಯ, ನಿರೂಪ ರಾವತ್, ಮುರುಳಿ, ಉಮಾಶಂಕರ್ ಹಾಗೂ ಕುಮಾರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತ ರಿದ್ದರು.

ಈ ರೀತಿಯ ಜನಜಾಗೃತಿ ಕಾರ್ಯಕ್ರಮಗಳು ಏಡ್ಸ್ ತಡೆಗಟ್ಟುವಲ್ಲಿ ಸಮುದಾಯದ ಪಾತ್ರ ಎಷ್ಟು ಮುಖ್ಯ ಎಂಬುದನ್ನು ಒತ್ತಿಹೇಳುತ್ತವೆ.