ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Tumkur (Chikkanayakahalli) News: ಖಾಸಗಿ ಶಾಲೆಗಳಲ್ಲಿ ಪ್ರವೇಶ ಶುಲ್ಕದ ವಿವರ ಪ್ರಕಟಿಸಿ

ವರ್ಗವಾರು ಸೀಟು ಲಭ್ಯತೆ, ಮೀಸಲಾತಿ ವಿವರಗಳು, ಪಠ್ಯಕ್ರಮ, ಭೋದನ ಮಾಧ್ಯಮ, ಮತ್ತು ಶುಲ್ಕ ರಚನೆ ಒಳಗೊಂಡಿರಬೇಕು. ಶುಲ್ಕ ವಸೂಲಾತಿ ಮತ್ತು ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆಗೆ ಸಂಬಂಧಿ ಸಿದಂತೆ ಈ ಎಲ್ಲಾ ಅಂಶಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸಂಸ್ಥೆಗಳ ಮುಖ್ಯಸ್ಥರ ಸಭೆ ಕರೆದು ತಿಳಿಸಿದೆ

ಖಾಸಗಿ ಶಾಲೆಗಳಲ್ಲಿ ಪ್ರವೇಶ ಶುಲ್ಕದ ವಿವರ ಪ್ರಕಟಿಸಿ

Profile Ashok Nayak May 28, 2025 12:21 PM

ಚಿಕ್ಕನಾಯಕನಹಳ್ಳಿ: ಖಾಸಗಿ ಶಾಲೆಗಳಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿಗೆ ವಿದ್ಯಾರ್ಥಿಗಳ ಪ್ರವೇಶಕ್ಕಾಗಿ ಪಡೆಯುವ ದಾಖಲಾತಿ ಶುಲ್ಕ ಮತ್ತು ಇನ್ನಿತರೆ ಶುಲ್ಕವನ್ನು ಕಡ್ಡಾಯವಾಗಿ ಪ್ರಕಟಿಸುವಂತೆ ಶಿಕ್ಷಣ ಇಲಾಖೆಯು ಎಲ್ಲಾ ಶಾಲೆಗಳಿಗೆ ಸೂಚನೆ ನೀಡಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕಾಂತರಾಜು ತಿಳಿಸಿದರು. ಈ ಸಂಬಂಧ ಪತ್ರಿಕೆಯೊಂದಿಗೆ ಮಾತನಾಡಿದ ಅವರು ತಾಲ್ಲೂಕಿನ ಎಲ್ಲಾ ಖಾಸಗಿ ಶಾಲೆಗಳು ತಾವು ಅಧಿಸೂಚಿಸಿದ ಶುಲ್ಕವನ್ನು ತಮ್ಮ ಶಾಲಾ ವೆಬ್ ಸೈಟ್ ನಲ್ಲಿ ಶಾಲೆಯ ಸೂಚನಾ ಫಲಕದಲ್ಲಿ, ಇಲಾಖಾ ಜಾಲ ತಾಣದಲ್ಲಿ ಸಾರ್ವಜನಿಕರಿಗೆ ಮತ್ತು ಪಾಲಕರಿಗೆ ಲಭ್ಯವಾಗುವಂತೆ ಪ್ರಕಟಿಸಬೇಕು.

ಇದನ್ನೂ ಓದಿ: IPL 2025: ಲಖನೌ ಎದುರು ಆರ್‌ಸಿಬಿ ಸೋತರೆ ಏನು ಕಥೆ? 4 ತಂಡಗಳ ಅಗ್ರ 2ರ ಲೆಕ್ಕಾಚಾರ!

ಇದರಲ್ಲಿ ವರ್ಗವಾರು ಸೀಟು ಲಭ್ಯತೆ, ಮೀಸಲಾತಿ ವಿವರಗಳು, ಪಠ್ಯಕ್ರಮ, ಭೋದನ ಮಾಧ್ಯಮ, ಮತ್ತು ಶುಲ್ಕ ರಚನೆ ಒಳಗೊಂಡಿರಬೇಕು. ಶುಲ್ಕ ವಸೂಲಾತಿ ಮತ್ತು ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಈ ಎಲ್ಲಾ ಅಂಶಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸಂಸ್ಥೆಗಳ ಮುಖ್ಯಸ್ಥರ ಸಭೆ ಕರೆದು ತಿಳಿಸಿದೆ.

ಈ ಘೋಷಿತ ಮೊತ್ತವನ್ನು ಮೀರಿದ ಯಾವುದೇ ಶುಲ್ಕವನ್ನು ಸಂಗ್ರಹಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಯಾವುದೇ ಶಾಲೆಗಳು ನಿಯಮ ಉಲ್ಲಂಘಿಸಿರುವ ಬಗ್ಗೆ ದೂರುಗಳು ದಾಖಲಾ ದಲ್ಲಿ ತ್ವರಿತವಾಗಿ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕಾಂತರಾಜು ತಿಳಿಸಿದರು.