Actor Raana: ಅನುಮತಿಯಿಲ್ಲದೆ ಶೂಟಿಂಗ್; ರಕ್ಷಿತಾ ಸಹೋದರನ ಸಿನಿಮಾ ಚಿತ್ರೀಕರಣ ಬಂದ್
Actor Raana: ತುಮಕೂರಿನ ನಾಮದಚಿಲುಮೆಯಲ್ಲಿ ಅನುಮತಿ ಇಲ್ಲದೇ ಚಿತ್ರೀಕರಣ ನಡೆಸಿದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ನಟಿ ರಕ್ಷಿತಾ ಪ್ರೇಮ್ ಅವರ ಸಹೋದರನ ಸಿನಿಮಾದ ಶೂಟಿಂಗ್ ನಿಲ್ಲಿಸಿದ್ದಾರೆ. ಅಲ್ಲದೇ ಶೂಟಿಂಗ್‌ಗೆ ಬಳಸಿದ್ದ ಕೆಲ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.


ತುಮಕೂರು: ನಗರದ ಮೀಸಲು ಅರಣ್ಯ ಪ್ರದೇಶವಾದ ನಾಮದಚಿಲುಮೆಯಲ್ಲಿ ಅನುಮತಿ ಇಲ್ಲದೇ ಚಿತ್ರೀಕರಣ ನಡೆಸಿದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ನಟಿ ರಕ್ಷಿತಾ ಪ್ರೇಮ್ ಅವರ ಸಹೋದರನ ಸಿನಿಮಾದ ಶೂಟಿಂಗ್ ನಿಲ್ಲಿಸಿದ್ದಾರೆ. ಹೆಸರಿಡದ ಸಿನಿಮಾದ ಶೂಟಿಂಗ್ ಕಳೆದ ಐದು ದಿನಗಳಿಂದ ನಾಮದಚಿಲುಮೆಯಲ್ಲಿ ನಡೆಯುತ್ತಿತ್ತು. ನಟಿ ರಕ್ಷಿತಾ ಪ್ರೇಮ್ ಸಹೋದರ ರಾಣಾ (Actor Raana) ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ಹೊಸ ಸಿನಿಮಾದ ಚಿತ್ರೀಕರಣ ಅನುಮತಿ ಇಲ್ಲದೆ ನಾಮದಚಿಲುಮೆಯಲ್ಲಿ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಅರಣ್ಯ ಅಧಿಕಾರಿಗಳು ಶೂಟಿಂಗ್ ನಿಲ್ಲಿಸಿದ್ದಾರೆ.
ಶೂಟಿಂಗ್ ಕುರಿತು ಮಾಹಿತಿ ಪಡೆದ ಅರಣ್ಯ ಇಲಾಖೆ ಎಸಿಎಫ್ ಪವಿತ್ರಾ ನೇತೃತ್ವದ ಸಿಬ್ಬಂದಿ ಚಿತ್ರೀಕರಣ ನಡೆಯುತ್ತಿದ್ದ ಸ್ಥಳಕ್ಕೆ ತೆರಳಿ ಚಿತ್ರೀಕರಣವನ್ನು ಬಂದ್ ಮಾಡಿಸಿ, ಶೂಟಿಂಗ್‌ಗೆ ಬಳಸಿದ್ದ ಕೆಲ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಕಳೆದ 5 ದಿನದಿಂದ ನಾಮದಚಿಲುಮೆಯಲ್ಲಿ ಶೂಟಿಂಗ್ ನಡೆಯುತ್ತಿತ್ತು. ನಟಿ ರಕ್ಷಿತಾ ಸಹೋದರ ರಾಣಾ, ಪ್ರಿಯಾಂಕಾ ಈ ಸಿನಿಮಾದಲ್ಲಿ ನಟಿಸುತ್ತಿದ್ದರು. ಸುಮಾರು 70-100 ಜನ ಈ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಅರಣ್ಯ ಇಲಾಖೆ ದಾಳಿ ವೇಳೆ ಸಿನಿಮಾ ಚಿತ್ರೀಕರಣಕ್ಕೆ ಬಳಸಲಾಗಿರುವ ಕ್ಯಾರವಾನ್, ಕ್ಯಾಮೆರಾ ಲೈಟ್, ಕೆಲ ಸಾಮಗ್ರಿ, ಲೈಟ್, ಅಡುಗೆ ಸಾಮಗ್ರಿ, ಚೇರ್ಗಳು, ಟೆಂಪೊ ಟ್ರಾವೆಲರ್ ಅನ್ನು ವಶಕ್ಕೆ ಪಡೆಯಲಾಗಿದೆ.

ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು ದಾಳಿ ನಡೆಸಿ ಚಿತ್ರತಂಡದವರನ್ನು ವಿಚಾರಣೆ ನಡೆಸಿ ಸಿನಿಮಾದ ಶೂಟಿಂಗ್ ನಿಲ್ಲಿಸಿದ್ದಾರೆ. ನಾವು ಊಟಕ್ಕೆ ಮಾತ್ರ ನಿಲ್ಲಿಸಿದ್ದೆವು, ಸಿನಿಮಾದ ಶೂಟಿಂಗ್ ಮಾಡಿಲ್ಲ ಎಂದು ಚಿತ್ರತಂಡ ಸ್ಪಷ್ಟನೆ ನೀಡಿದೆ.
ಈ ಸುದ್ದಿಯನ್ನೂ ಓದಿ | Satya Naidu Marriage: ಅದ್ಧೂರಿಯಾಗಿ ನಡೆಯಿತು ಚೈತ್ರಾ ವಾಸುದೇವನ್ ಮಾಜಿ ಪತಿಯ ಎರಡನೇ ಮದುವೆ: ವಿಡಿಯೋ ನೋಡಿ

ಚಿತ್ರತಂಡ ತರುಣ್ ಸುಧೀರ್ ಪ್ರೊಡಕ್ಷನ್ಸ್ ಹೆಸರಲ್ಲಿ ಸಿನಿಮಾ ಚಿತ್ರೀಕರಣಕ್ಕೆ ಅನುಮತಿ ಕೋರಿ ಈ ಮೊದಲೇ ಅರ್ಜಿ ಸಲ್ಲಿಸಿತ್ತು. ಆದರೆ ಅರಣ್ಯ ಇಲಾಖೆ ಅನುಮತಿ ನೀಡಿರಲಿಲ್ಲ. ಅನುಮತಿ ನೀಡದ ಹೊರತಾಗಿಯೂ ಚಿತ್ರತಂಡ ಚಿತ್ರೀಕರಣ ಶುರು ಮಾಡಿತ್ತು. ಇದೇ ಕಾರಣಕ್ಕೆ ಅರಣ್ಯ ಇಲಾಖೆಯವರು ಈಗ ಚಿತ್ರೀಕರಣ ಬಂದ್ ಮಾಡಿಸಿ, ಶೂಟಿಂಗ್‌ಗೆ ಬಳಸಿದ್ದ ವಸ್ತುಗಳನ್ನು ಸೀಜ್ ಮಾಡಿದೆ.
'ಮಹಾನಟಿ' ಶೋ ವಿನ್ನರ್ ಪ್ರಿಯಾಂಕಾಗೆ ಒಲಿದ ಬಂಪರ್ ಚಾನ್ಸ್

ಬೆಂಗಳೂರು: ʼಏಳುಮಲೆಯ ಮಡಿಲಲ್ಲಿ ಎದೆ ನಡುಗಿಸಿದ ಪ್ರೇಮಕಥೆʼಯ ನಾಯಕನಾಗಿ ಕ್ರೇಜಿ ಕ್ವೀನ್ ರಕ್ಷಿತಾ ತಮ್ಮ ರಾಣಾ (Rana) ಅವರನ್ನು ಪರಿಚಯಿಸಿದ್ದ ಸ್ಟಾರ್ ಡೈರೆಕ್ಟರ್ ತರುಣ್ ಸುಧೀರ್ (Tharun Sudhir) ಇತ್ತೀಚೆಗೆ ನಾಯಕಿಯನ್ನು ಘೋಷಿಸಿದ್ದರು. ʼಗುರು ಶಿಷ್ಯರುʼ ಸಿನಿಮಾ ನಿರ್ಮಿಸಿ ಯಶಸ್ಸು ಪಡೆದ ಬಳಿಕ ತರುಣ್, ಅಟ್ಲಾಂಟಾ ನಾಗೇಂದ್ರ ಎಂಬುವವರ ಜತೆಗೂಡಿ ನಿರ್ಮಿಸುತ್ತಿರುವ ಹೊಸ ಕಥೆಗೆ ಹೊಸ ನಾಯಕಿಯನ್ನು ಕರೆ ತಂದಿದ್ದಾರೆ.
ತರುಣ್ ಸುಧೀರ್ ಬಳಗದಲ್ಲಿ ಕೆಲಸ ಮಾಡಿರುವ ಪುನೀತ್ ರಂಗಸ್ವಾಮಿ ಎಂಬುವವರ ಚೊಚ್ಚಲ ನಿರ್ದೇಶನದಲ್ಲಿ ಮೂಡಿ ಬರ್ತಿರುವ ನೈಜ ಘಟನೆಯ ಪ್ರೇಮಕಥೆಯಲ್ಲಿ ಮೈಸೂರಿನ ಪ್ರಿಯಾಂಕಾ ಆಚಾರ್ (Priyanka Achar) ನಾಯಕಿಯಾಗಿ ನಟಿಸುತ್ತಿದ್ದಾರೆ. ಝೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾದ ʼಮಹಾನಟಿʼ ಶೋ ವಿನ್ನರ್ ಆಗಿದ್ದ ಪ್ರಿಯಾಂಕಾ ಅವರು ತರುಣ್ ನಿರ್ಮಾಣದ ಚಿತ್ರದಲ್ಲಿ ನಾಯಕಿಯಾಗಿ ಚಿತ್ರರಂಗಕ್ಕೆ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಮಹಾನಟಿ ಶೋ ಜಡ್ಜ್ ಆಗಿದ್ದಾಗಲೇ ಪ್ರಿಯಾಂಕಾ ಅಭಿನಯವನ್ನು ತರುಣ್ ಸುಧೀರ್ ಮೆಚ್ಚಿಕೊಂಡಿದ್ದರು. ಇದೀಗ ಅವರದ್ದೇ ನಿರ್ಮಾಣದ ಚಿತ್ರದಲ್ಲಿ ಹೀರೋಯಿನ್ ಆಗಿ ನಟಿಸುವ ಬೊಂಬಾಟ್ ಚಾನ್ಸ್ ಪ್ರಿಯಾಂಕಾಗೆ ಸಿಕ್ಕಿದೆ. ಮೂಲತಃ ಮೈಸೂರಿನವರಾದ ಪ್ರಿಯಾಂಕಾ ನಟಿಯಬೇಕು ಎಂಬ ಕನಸಿತ್ತು. ಆ ಕನಸಿಗೆ ತರುಣ್ ಸಾಥ್ ಕೊಡುತ್ತಿದ್ದಾರೆ.
ತರುಣ್ ಸುಧೀರ್ ಹೊಸ ನಾಯಕಿಯರನ್ನು ಪರಿಚಯಿಸುವುದರಲ್ಲಿ ನಿಸ್ಸಿಮರು. ʼರಾಬರ್ಟ್ʼ ಚಿತ್ರದ ಮೂಲಕ ಆಶಾ ಭಟ್, ʼಕಾಟೇರʼ ಸಿನಿಮಾ ಮೂಲಕ ಮಾಲಾಶ್ರೀ ಪುತ್ರಿ ಆರಾಧನ ರಾಮ್ ಅವರನ್ನು ನಾಯಕಿ ಆಗಿ ಕನ್ನಡ ಸಿನಿಮಾಪ್ರೇಮಿಗಳ ಎದುರು ತಂದಿದ್ದ ತರುಣ್ ಈಗ ಪ್ರಿಯಾಂಕಾ ಆಚಾರ್ ಅವರನ್ನು ತಮ್ಮದೇ ನಿರ್ಮಾಣದ ಚಿತ್ರದಲ್ಲಿ ರಾಣಾಗೆ ಜೋಡಿಯಾಗಿ ಆಯ್ಕೆ ಮಾಡಿದ್ದಾರೆ. ಅದ್ವೈತ್ ಗುರುಮೂರ್ತಿ ಈ ಚಿತ್ರಕ್ಕೆ ಕ್ಯಾಮೆರಾವರ್ಕ್ ಮಾಡುತ್ತಿದ್ದಾರೆ. ಸದ್ಯ ಈ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ.
ಈ ಸುದ್ದಿಯನ್ನೂ ಓದಿ: Mr Rani Movie: ‘ಲಕ್ಷ್ಮಿ ನಿವಾಸ’ ಖ್ಯಾತಿಯ ದೀಪಕ್ ಸುಬ್ರಹ್ಮಣ್ಯ ಅಭಿನಯದ ‘ಮಿಸ್ಟರ್ ರಾಣಿ’ ಚಿತ್ರ ಫೆ.7ಕ್ಕೆ ರಿಲೀಸ್
2023ರಲ್ಲಿ ತೆರೆಕಂಡ ತರುಣ್ ನಿರ್ದೇಶನದ, ದರ್ಶನ್ ಅಭಿನಯದ ʼಕಾಟೇರʼ ಬಾಕ್ಸ್ ಆಫೀಸ್‌ನಲ್ಲಿ ಕಮಾಲ್ ಮಾಡಿತ್ತು. ಸದ್ಯ ತರುಣ್ ಯಾವ ಚಿತ್ರಕ್ಕೂ ಆ್ಯಕ್ಷನ್ ಕಟ್ ಹೇಳುತ್ತಿಲ್ಲ. ಅವರ ಮುಂದಿನ ಚಿತ್ರಕ್ಕಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ.