ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

Republic Day 2025: ಸಂವಿಧಾನದ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸುವ ಕೆಲಸವಾಗಲಿ: ಶಾಸಕ ಎಚ್.ವಿ. ವೆಂಕಟೇಶ್

Republic Day 2025: ಸಂವಿಧಾನದ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸಬೇಕು. ಏಕೆಂದರೆ ಇತ್ತೀಚಿನ ದಿನಗಳಲ್ಲಿ ಸಂವಿಧಾನ ಬದಲಾವಣೆ ಮಾಡಲು ಕುತಂತ್ರಗಳು ನಡೆಯುತ್ತಿವೆ. ಎಸ್ಸಿ ಎಸ್ಟಿ ಸಮುದಾಯಕ್ಕೆ ರಿಸರ್ವೇಶನ್ ಇಲ್ಲದಿದ್ದರೆ ಉತ್ತಮ ವಿದ್ಯಾಭ್ಯಾಸ ಮಾಡಲು ಸಹ ಆಗುತ್ತಿರಲಿಲ್ಲ ಎಂದು ಶಾಸಕ ಎಚ್.ವಿ. ವೆಂಕಟೇಶ್ ಹೇಳಿದ್ದಾರೆ.

ಸಂವಿಧಾನದ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸುವ ಕೆಲಸವಾಗಲಿ: ಶಾಸಕ ಎಚ್.ವಿ. ವೆಂಕಟೇಶ್

Profile Prabhakara R Jan 26, 2025 5:18 PM

ಪಾವಗಡ: ಪ್ರತಿ ಶಾಲೆಗಳಲ್ಲಿ ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸುವ ಕೆಲಸವಾಗಬೇಕು ಎಂದು ಸ್ಥಳೀಯ ಶಾಸಕ ಹಾಗೂ ಜಿಲ್ಲಾ ತುಮುಲ್ ಅಧ್ಯಕ್ಷ ಎಚ್.ವಿ. ವೆಂಕಟೇಶ್ ತಿಳಿಸಿದರು. ಪಾವಗಡ ಪಟ್ಟಣದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ 76ನೇ ಗಣರಾಜ್ಯೋತ್ಸವ (Republic Day 2025) ಉದ್ಘಾಟಿಸಿ ಅವರು ಮಾತನಾಡಿದರು.

ಸಂವಿಧಾನದ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸಬೇಕು. ಏಕೆಂದರೆ ಇತ್ತೀಚಿನ ದಿನಗಳಲ್ಲಿ ಸಂವಿಧಾನ ಬದಲಾವಣೆ ಮಾಡಲು ಕುತಂತ್ರಗಳು ನಡೆಯುತ್ತಿವೆ. ಎಸ್ಸಿ ಎಸ್ಟಿ ಸಮುದಾಯಕ್ಕೆ ರಿಸರ್ವೇಶನ್ ಇಲ್ಲದಿದ್ದರೆ ಉತ್ತಮ ವಿದ್ಯಾಭ್ಯಾಸ ಮಾಡಲು ಸಹ ಆಗುತ್ತಿರಲಿಲ್ಲ ಎಂದು ಹೇಳಿದರು.

ದಿನೇ ದಿನೇ ದೇಶ ಬೆಳೆಯುತ್ತಿದೆ. ನಮ್ಮ ದೇಶದ ಮಕ್ಕಳು ವಿದ್ಯಾಭ್ಯಾಸ ಮಾಡಿ ಉನ್ನತ ಸಾಧನೆ ಮಾಡುತ್ತಿದ್ದಾರೆ. ವಿದ್ಯಾಭ್ಯಾಸ ಇಲ್ಲದಿದ್ದರೆ ಯಾವುದೇ ತರಹದ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಹೇಳಿದರು.

ಮಕ್ಕಳಿಗೆ ಪೋಷಕರು ವಿದ್ಯಾಭ್ಯಾಸ ನೀಡಲು ಹೆಚ್ಚು ಒತ್ತು ನೀಡಬೇಕು. ನಮ್ಮ ದೇಶ ವೇಗವಾಗಿ ಅಭಿವೃದ್ಧಿಯಾಗುತ್ತಿದೆ. ಸರ್ಕಾರ ಜನರಿಗೆ ಉತ್ತಮ ಯೋಜನೆಗಳನ್ನು ನೀಡಿ ಉತ್ತಮ ಕೆಲಸಗಳು ಮಾಡುತ್ತಿದೆ. ನಾನು ಸಹ ಪ್ರಮಾಣಿಕವಾಗಿ ಕೆಲಸ ಮಾಡುತ್ತಿದ್ದೇನೆ. ಪಾವಗಡ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡುತ್ತಿದ್ದೇನೆ ಎಂದು ತಿಳಿಸಿದರು.

ತಾಲೂಕಿನಲ್ಲಿ ಬಹಳಷ್ಟು ಅಭಿವೃದ್ಧಿ ಕೆಲಸಗಳು ಆಗುತ್ತಿವೆ. ಮುಂದಿನ ತಿಂಗಳು ಮಾನ್ಯ ಮುಖ್ಯಮಂತ್ರಿಗಳ ಕರೆಸಿ ಬಹಳಷ್ಟು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟನೆ ಮಾಡಲು ಮುಂದಾಗಿದ್ದೇನೆ. ಬೈಪಾಸ್ ವ್ಯವಸ್ಥೆ ಹಾಗೂ ಮುಂದಿನ ದಿನಗಳಲ್ಲಿ ನಾಗಲಮಡಿಕೆ ಸುಬ್ರಹ್ಮಣ್ಯ ದೇವಸ್ಥಾನ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಿದ್ದು, ಸುಮಾರು 12 ಕೋಟಿ ವೆಚ್ಚದಲ್ಲಿ ದೇವಸ್ಥಾನ ಅಭಿವೃದ್ಧಿ ಕಾರ್ಯಕ್ಕೆ ಈಗಾಗಲೇ ಸರ್ವೆ ಕಾರ್ಯ ಹಾಗೂ ಹಣ ಬಿಡುಗಡೆಗೆ ಎಲ್ಲಾ ತರಹದ ಕ್ರಮ ಕೈಗೊಳ್ಳಲಾಗಿದೆ.

ಈ ಭಾಗದ ಬಡವರಿಗಾಗಿ 5 ಎಕರೆ ಖಾಲಿ ನಿವೇಶನ ಪಡೆದು ಮನೆ ನಿರ್ಮಾಣಕ್ಕಾಗಿ ವ್ಯವಸ್ಥೆ ಕಲ್ಪಿಸಿದ್ದೇವೆ. ಇನ್ನೂ ಐದು ಎಕರೆ ಹೆಚ್ಚು ಜಾಗ ಗುರುತಿಸಿ ಅಲ್ಲಿಯೂ ಮನೆಗಳನ್ನು ಕಲ್ಪಿಸಲು ಮುಂದಾಗಿದ್ದೇನೆ. ಆದರೆ ಹೆಚ್ಚು ಜನರಿಗೆ ನಿವೇಶನ ವ್ಯವಸ್ಥೆ ಮಾಡಬೇಕು ಎಂಬುದಾಗಿ 10 ಎಕರೆ ಜಮೀನನ್ನು ಇರುವ ಜಾಗವನ್ನು ವ್ಯವಸ್ಥೆ ಮಾಡಲು ತಹಸೀಲ್ದಾರ್ ರವರಿಗೆ ಸೂಚನೆ ನೀಡಿದ್ದೇನೆ. ಇನ್ನು ಈಗಾಗಲೇ ಕೆಎಸ್ಆರ್ಟಿಸಿ ಬಸ್ ನಿಲ್ದಾಣಕ್ಕೆ ಎಲ್ಲಾ ತರದ ಸಿದ್ಧತೆಗಳು ನಡೆಯುತ್ತಿವೆ ಎಂದರು.

ಈ ಸುದ್ದಿಯನ್ನೂ ಓದಿ | Republic Day: ಧ್ವಜಾರೋಹಣದ ವೇಳೆ ಎಡವಟ್ಟು; ಹಗ್ಗ ತುಂಡಾಗಿ ಕುಸಿದು ಬಿದ್ದ ದೇಶದ ಎರಡನೇ ಬೃಹತ್‌ ರಾಷ್ಟ್ರ ಧ್ವಜ, ಮತ್ತೊಂದೆಡೆ ಕಾಡುಕೋಣ ಎಂಟ್ರಿ!

ಈ ವೇಳೆ ವಿವಿಧ ಶಾಲೆ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು. ತಾಲೂಕು ಆಡಳಿತದಿಂದ ಕೆಲವರಿಗೆ ನಿವೇಶನದ ಹಕ್ಕು ಪತ್ರಗಳು ನೀಡಿದರು.

ಕಾರ್ಯಕ್ರಮದಲ್ಲಿ ತಹಸೀಲ್ದಾರ್ ವರದರಾಜು ಕ್ಷೇತ್ರ ಶಿಕ್ಷಣಾಧಿಕಾರಿಗಳು ಇಂದ್ರಾಣಮ್ಮ, ರೈತ ಸಂಘದ ಮುಖಂಡರು ಹಾಗೂ ಜನಪ್ರತಿಗಳು ಭಾಗವಹಿಸಿದ್ದರು.

ಶ್ರೀ ಸಿದ್ಧಗಂಗಾ ಮಠದಲ್ಲಿ ಗಣರಾಜ್ಯೋತ್ಸವ ಆಚರಣೆ

Siddaganga mutt

ತುಮಕೂರು: ಶ್ರೇಷ್ಠ ಸಂವಿಧಾನದ ಫಲವಾಗಿ ಭಾರತವು ವಿಶ್ವದಲ್ಲಿ 4ನೇ ಆರ್ಥಿಕ ದೇಶವಾಗಿ ಬೆಳೆದಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು. ಶ್ರೀ ಸಿದ್ಧಗಂಗಾ ಮಠದಲ್ಲಿ ಧ್ವಜಾರೋಹಣಾ ನೆರವೇರಿಸಿ ಮಾತನಾಡಿ, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವು ಬಲಿಷ್ಟವಾಗಿದ್ದು, ಎಲ್ಲ ವರ್ಗದ ಜನರ ಸಮಸ್ಯೆಗಳಿಗೆ ಉತ್ತರ ನೀಡುತ್ತದೆ ಎಂದು ಹೇಳಿದರು.

76 ವರ್ಷಗಳಲ್ಲಿ ಭಾರತ ಅನೇಕ ಸಾಧನೆಗಳನ್ನು ಮಾಡಿದೆ. ಬಡತನ, ಹಸಿವು, ಅನಕ್ಷರತೆಯಿಂದ ಬಳಲುತ್ತಿದ್ದ ಅಂದಿನ ಭಾರತ, ಬಲಿಷ್ಠ ಭಾರತವಾಗಿ ಬೆಳೆದಿದೆ. ಪ್ರಪಂಚದಲ್ಲಿ 4ನೇ ಆರ್ಥಿಕತೆಯ ದೇಶವಾಗಿದೆ. ಇದರಲ್ಲಿ ಪ್ರತಿಯೊಬ್ಬ ಭಾರತೀಯನ ಶ್ರಮವಿದೆ. ಪ್ರತಿಯೊಬ್ಬರಿಗೂ ಸ್ವಾಭಿಮಾನದ ಬದುಕು ಸಿಗಲಿ ಎಂದು ಆಶಿಸಿದರು‌.

ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರು ಇಡೀ ದೇಶದಲ್ಲಿ ಯಾವುದೇ ಒಂದು ಧಾರ್ಮಿಕ ಸಂಸ್ಥೆ ನೀಡದಂತಹ ಅನನ್ಯ ಕೊಡುಗೆಯನ್ನು ನೀಡಿದ್ದಾರೆ. ಕೋಟ್ಯಂತರ ಬಡ ಮಕ್ಕಳಿಗೆ ಜಾತಿ, ಮತ, ಬೇದವಿಲ್ಲದೆ ಅನ್ನ, ಆಶ್ರಯ, ಅಕ್ಷರ ಕಲ್ಪಿಸಿದರು. ಪರಮಪೂಜ್ಯ ಶ್ರೀಗಳು ಹಾಕಿಕೊಟ್ಟ ದಾರಿಯಲ್ಲಿ ಇಂದಿನ ಶ್ರೀಗಳು ಸಾಗುತ್ತಿದ್ದಾರೆ ಎಂದು ಹೇಳಿದರು.

ಈ ಸುದ್ದಿಯನ್ನೂ ಓದಿ | Mysore News: ಗಣರಾಜ್ಯೋತ್ಸವ ಭಾರತೀಯರನ್ನು ಭಾವನಾತ್ಮಕವಾಗಿ, ಭಾಷಿಕವಾಗಿ, ಭೌಗೋಳಿಕವಾಗಿ ಹಾಗೂ ಆಡಳಿತಾತ್ಮಕವಾಗಿ ಬೆಸುಗೆ ಹಾಕಿದ ದಿನ: ಎನ್ ಚಲುವರಾಯಸ್ವಾಮಿ

ಇದೇ ಸಂದರ್ಭದಲ್ಲಿ ಸಚಿವರಾದ ಪರಮೇಶ್ವರ್ ಅವರು, ಮಠದ ವಿದ್ಯಾರ್ಥಿಗಳಿಗೆ ಸಂವಿಧಾನದ ಪೂರ್ವಪೀಠಿಕೆಯನ್ನು ಬೋಧಿಸಿದರು. ಶ್ರೀ ಸಿದ್ಧಲಿಂಗೇಶ್ವರ ಸ್ವಾಮೀಜಿ ದಿವ್ಯಸಾನ್ನಿಧ್ಯ ವಹಿಸಿದರು. ಶಾಸಕರಾದ ಜ್ಯೋತಿಗಣೇಶ, ಸುರೇಶ್‌ಗೌಡ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಸಿಇಒ ಜಿ.ಪ್ರಭು, ಎಸ್ಪಿ ಅಶೋಕ್ ಉಪಸ್ಥಿತರಿದ್ದರು.