ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಹಿರಿಯ ನಾಗರಿಕರನ್ನು ಗೌರವಿಸುವುದು ಪ್ರತಿಯೊಬ್ಬರ ಜವಾಬ್ದಾರಿ: ನ್ಯಾಯಾಧೀಶ ಲೋಕೇಶ್ ಧನಪಾಲ್ ಹವಳೆ

Tumkur News: ಮಕ್ಕಳು ತಮ್ಮ ವಯಸ್ಸಾದ ತಂದೆ-ತಾಯಿಯನ್ನು ಪ್ರೀತಿಯಿಂದ ಆರೈಕೆ ಮಾಡಬೇಕು. ಹಿರಿಯರನ್ನು ಗೌರವಿಸುವ ಸಂಸ್ಕಾರವನ್ನು ಬಾಲ್ಯದಿಂದಲೇ ಮಕ್ಕಳಿಗೆ ಕಲಿಸುವುದರ ಮೂಲಕ ನಮ್ಮ ದೇಶದ ಸಂಪ್ರದಾಯ, ಸಂಸ್ಕೃತಿ ಮತ್ತು ನೈತಿಕ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸಬೇಕಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಲೋಕೇಶ್ ಧನಪಾಲ್ ಹವಳೆ ತಿಳಿಸಿದ್ದಾರೆ.

ಹಿರಿಯ ನಾಗರಿಕರನ್ನು ಗೌರವಿಸುವುದು ಪ್ರತಿಯೊಬ್ಬರ ಜವಾಬ್ದಾರಿ

-

Profile
Siddalinga Swamy Sep 28, 2026 9:32 PM

ತುಮಕೂರು, ಸೆ,28: ಹಿರಿಯ ನಾಗರಿಕರನ್ನು ಗೌರವಿಸುವುದು ಹಾಗೂ ಅವರ ರಕ್ಷಣೆ ಮಾಡುವುದು ಪ್ರತಿಯೊಬ್ಬರ ಪ್ರಮುಖ ಜವಾಬ್ದಾರಿಯಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಲೋಕೇಶ್ ಧನಪಾಲ್ ಹವಳೆ ತಿಳಿಸಿದರು. ನಗರದ (Tumkur News) ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಹಯೋಗದಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಒಂದು ದಿನದ ಅರಿವು ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕೇಂದ್ರ ಸರ್ಕಾರದ 'ಸ್ಟೇಟ್ ಆಕ್ಷನ್ ಪ್ಲಾನ್ ಫಾರ್ ಸೀನಿಯರ್ ಸಿಟಿಜೆನ್ಸ್' ಯೋಜನೆಯಡಿ 'ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ-2007'ರ ಕುರಿತು ಅಧಿಕಾರಿಗಳು ಸಂಪೂರ್ಣ ಮಾಹಿತಿ ಪಡೆದು, ಸರ್ಕಾರದ ಸೌಲಭ್ಯಗಳು ಅರ್ಹರಿಗೆ ತಲುಪುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ಮಕ್ಕಳು ತಮ್ಮ ವಯಸ್ಸಾದ ತಂದೆ-ತಾಯಿಯನ್ನು ಪ್ರೀತಿಯಿಂದ ಆರೈಕೆ ಮಾಡಬೇಕು. ಹಿರಿಯರನ್ನು ಗೌರವಿಸುವ ಸಂಸ್ಕಾರವನ್ನು ಬಾಲ್ಯದಿಂದಲೇ ಮಕ್ಕಳಿಗೆ ಕಲಿಸುವುದರ ಮೂಲಕ ನಮ್ಮ ದೇಶದ ಸಂಪ್ರದಾಯ, ಸಂಸ್ಕೃತಿ ಮತ್ತು ನೈತಿಕ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸಬೇಕಿದೆ ಎಂದರು.

ಸಮನ್ವಯತೆ ಅತ್ಯವಶ್ಯಕ

ಹಿರಿಯ ನಾಗರಿಕರ ಸಮಸ್ಯೆಗಳಿಗೆ ಕಾನೂನುಬದ್ಧ ಪರಿಹಾರ ದೊರೆಯಲು ಸಂಬಂಧಪಟ್ಟ ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳು ಒಗ್ಗಟ್ಟಾಗಿ ಕೆಲಸ ಮಾಡಿದರೆ ಮಾತ್ರ ಹಿರಿಯರಿಗೆ ಹೆಚ್ಚಿನ ನೆರವು ನೀಡಲು ಸಾಧ್ಯ ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಡಾ: ಸಿದ್ದರಾಮಣ್ಣ ಮಾತನಾಡಿ, ಹಿರಿಯ ನಾಗರಿಕರಿಗೆ ಸಮಸ್ಯೆಗಳಿಗಿಂತ ಸವಾಲುಗಳೇ ಹೆಚ್ಚಾಗಿದ್ದು, ಅವುಗಳಿಗೆ ಸ್ಪಂದಿಸಲು ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕು ಎಂದು ತಿಳಿಸಿದರು. ‌

ಸಿದ್ಧಿವಿನಾಯಕ ಸೇವಾ ಸಮಿತಿಯ 50ನೇ ವರ್ಷದ ಗಣಪತಿ ಪೂಜೆ; ಮುತ್ತೈದೆಯರಿಗೆ ಬಾಗಿನ ನೀಡಿ ಗೌರವ

ಕಾರ್ಯಾಗಾರದಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಶಿಲ್ಪಾ ಎಂ. ದೊಡ್ಡಮನಿ, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಜಿಲ್ಲಾ ಅಧ್ಯಕ್ಷೆ ಬಾ.ಹ. ರಮಾಕುಮಾರಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.