Self Harming: ಪಾರಿವಾಳ ಬೆಟ್ಟಿಂಗ್ ವಿಚಾರಕ್ಕೆ ಗಲಾಟೆ; ಮನನೊಂದು 13 ವರ್ಷದ ಬಾಲಕ ನೇಣಿಗೆ ಶರಣು
Self Harming: ಪಾರಿವಾಳದ ಬೆಟ್ಟಿಂಗ್ ವಿಚಾರಕ್ಕೆ ಬಾಲಕ ಹಾಗೂ ಸ್ನೇಹಿತರ ನಡುವೆ ಗಲಾಟೆಯಾಗಿದೆ. ಅದೇ ವಿಚಾರಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಹುದು ಎಂದು ಶಂಕಿಸಲಾಗಿದೆ.
Prabhakara R
January 10, 2025
ತುಮಕೂರು: ಕ್ಷುಲ್ಲಕ ಕಾರಣಕ್ಕೆ 7ನೇ ತರಗತಿ ವಿದ್ಯಾರ್ಥಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ (Self Harming) ಶರಣಾಗಿರುವ ದುರ್ಘಟನೆ ಇಲ್ಲಿನ ವಿಜಯನಗರ 2ನೇ ಮುಖ್ಯ ರಸ್ತೆಯಲ್ಲಿ ನಡೆದಿದೆ. ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕಿ ಶಕುಂತಲಾ ನಟರಾಜ್ ಅವರ ಪುತ್ರ ತ್ರಿಶಾಲ್ (13) ಆತ್ಮಹತ್ಯೆಗೆ ಶರಣಾದ ಬಾಲಕ.
ಈತ ವಿಶಾಲ್ ಸರ್ವೋದಯ ಶಾಲೆಯಲ್ಲಿ 7ನೇ ತರಗತಿ ವ್ಯಾಸಂಗ ಮಾಡುತ್ತಿದ್ದ. ಶುಕ್ರವಾರ ಬೆಳಗ್ಗೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಶಾಲಾ ಸಮವಸ್ತ್ರದಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಡೆತ್ ನೋಟ್ ಪತ್ತೆತ್ರಿಶಾಲ್ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾನೆ. ಪಾರಿವಾಳದ ಬೆಟ್ಟಿಂಗ್ ವಿಚಾರಕ್ಕೆ ಸ್ನೇಹಿತರ ನಡುವೆ ಗಲಾಟೆಯಾಗಿದೆ. ಅದೇ ವಿಚಾರಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಹುದು ಎಂದು ಶಂಕಿಸಲಾಗಿದೆ. ಘಟನೆ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಸುದ್ದಿಯನ್ನೂ ಓದಿ | Vaikunta Ekadasi: ಕಲ್ಪತರು ನಾಡಿನಲ್ಲಿ ಅದ್ಧೂರಿ ವೈಕುಂಠ ಏಕಾದಶಿ; ಮೊಳಗಿದ ಗೋವಿಂದ ನಾಮಸ್ಮರಣೆ
ಶಾಸಕ ಚಂದ್ರು ಲಮಾಣಿ ಕಾರು ಚಾಲಕ ಆತ್ಮಹತ್ಯೆ
ಗದಗ: ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ (Gadag News) ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ನಡೆದಿದೆ. ಚಂದ್ರು ಲಮಾಣಿ ಅವರಿಗೆ ಸೇರಿದ ಮನೆಯಲ್ಲಿ ಚಾಲಕ ಸುನೀಲ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಸುನೀಲ್ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಶಾಸಕರಿಗೆ ಹತ್ತಿರದ ಸಂಬಂಧಿಯಾದ ಸುನೀಲ್ ಕಳೆದ ಮೂರು ವರ್ಷಗಳಿಂದ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಸ್ಥಳಕ್ಕೆ ಲಕ್ಷ್ಮೇಶ್ವರ ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ. ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾಲಿಗ್ರಾಮ ಭಾಗದ ಜನರ ನಿದ್ದೆಗೆಡಿಸಿದ್ದ ಚಿರತೆ ಸೆರೆ; ನಾಗರಹೊಳೆ ಅರಣ್ಯಕ್ಕೆ ಶಿಫ್ಟ್
ಮೈಸೂರು: ಕೆಲ ದಿನಗಳಿಂದ ಚುಂಚನಕಟ್ಟೆ ಮಿರ್ಲೆ ಭಾಗದಲ್ಲಿ ಜನರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆಯಾಗಿದೆ. ಸಾಲಿಗ್ರಾಮ ತಾಲೂಕಿನ ಮಾಳನಾಯನಹಳ್ಳಿ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ 2 ವರ್ಷದ ಚಿರತೆ (Leopard Captured) ಬಿದ್ದಿದ್ದು, ಅದನ್ನು ನಾಗರಹೊಳೆ ಅರಣ್ಯಕ್ಕೆ ಶಿಫ್ಟ್ ಮಾಡಲಾಗಿದೆ.