ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Self Harming: ಹುಟ್ಟು ಹಬ್ಬದ ದಿನವೇ ನೇಣು ಬಿಗಿದು ಹೆಲ್ತ್‌ ಇನ್‌ಸ್ಪೆಕ್ಟರ್‌ ಆತ್ಮಹತ್ಯೆ

ವರ್ಷದ ಹಿಂದೆ ಸ್ಕ್ಯಾವೆಂಜರ್ ಆಕ್ಟ್ ಅಡಿ ಉಮೇಶ್​ ಅಮಾನತಾಗಿದ್ದರು. ನಾಲ್ಕು ತಿಂಗಳ ಬಳಿಕ ಮತ್ತೆ ಹೆಲ್ತ್ ಆಫೀಸರ್​​ ಆಗಿ ಕರ್ತವ್ಯಕ್ಕೆ ಹಾಜರಾಗಿದ್ದರು. ಪ್ರಸ್ತುತ ಹುಲಿಕುಂಟೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆದರೆ ಇದೀಗ ನೇಣುಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆ ಆಗಿದೆ.

ಸಾಂದರ್ಭಿಕ ಚಿತ್ರ

ತುಮಕೂರು, ಮಾ. 31: ಖಾಸಗಿ ಜಾಗವೊಂದರಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಹೆಲ್ತ್ ಇನ್ಸ್‌ಪೆಕ್ಟರ್ (Food Inspector)​​​ ಶವ ಪತ್ತೆ (Self Harming) ಆಗಿರುವಂತಹ ಘಟನೆ ತುಮಕೂರು (Tumkur) ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ತಾವರೆಕೆರೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಉಮೇಶ್​​ ಮೃತ ಹೆಲ್ತ್ ಇನ್ಸ್‌ಪೆಕ್ಟರ್. ಹುಟ್ಟುಹಬ್ಬದ ದಿನವೇ ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ ಆಗಿದ್ದು, ಸದ್ಯ ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ಸಾವಿನ ಬಗ್ಗೆ ದೂರು ನೀಡಿದ ಬಳಿಕ ಪೊಲೀಸರು ಮುಂದಿನ ತನಿಖೆ ಕೈಗೊಳ್ಳಲಿದ್ದಾರೆ.

ವರ್ಷದ ಹಿಂದೆ ಸ್ಕ್ಯಾವೆಂಜರ್ ಆಕ್ಟ್ ಅಡಿ ಉಮೇಶ್​ ಅಮಾನತಾಗಿದ್ದರು. ನಾಲ್ಕು ತಿಂಗಳ ಬಳಿಕ ಮತ್ತೆ ಹೆಲ್ತ್ ಆಫೀಸರ್​​ ಆಗಿ ಕರ್ತವ್ಯಕ್ಕೆ ಹಾಜರಾಗಿದ್ದರು. ಪ್ರಸ್ತುತ ಹುಲಿಕುಂಟೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆದರೆ ಇದೀಗ ನೇಣುಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆ ಆಗಿದೆ. ಅದರಲ್ಲೂ ಹುಟ್ಟುಹಬ್ಬದ ದಿನದಂದೇ ಹೀಗಾಗಿರುವುದು ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಸದ್ಯ ಸ್ಥಳಕ್ಕೆ ತಾವರೇಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮೃತರ ಕುಟುಂಬಸ್ಥರ ದೂರಿಗಾಗಿ ಕಾಯುತ್ತಿದ್ದಾರೆ. ತಂದೆಯ ಸಾವಿನ ಸಂಗತಿ ತಿಳಿದು ಉತ್ತರ ಭಾರತದಿಂದ ಉಮೇಶ್ ಅವರ ಮಗಳು ಬರುತ್ತಿದ್ದಾರೆ. ಮಗಳು ಬಂದ ನಂತರ ಸಾವಿನ ಬಗ್ಗೆ ದೂರು ನೀಡಿದ ಬಳಿಕ ಪೊಲೀಸರು ಮುಂದಿನ ತನಿಖೆ ಕೈಗೊಳ್ಳಲಿದ್ದಾರೆ.

Murder Attempt: ಗೃಹ ಸಚಿವ ಪರಮೇಶ್ವರ್‌ ಆಪ್ತನ ಕೊಲೆ ಯತ್ನ, ಅಂಕೋಲಾದಲ್ಲಿ ಹಾಡಹಗಲೇ ದಾಳಿ

ಬೈಕ್​ನಿಂದ ಬಿದ್ದು ಇಬ್ಬರು ಸವಾರರ ಸಾವು

ನಿಯಂತ್ರಣ ತಪ್ಪಿ ಬೈಕ್​ನಿಂದ ಬಿದ್ದು ಇಬ್ಬರು ಸವಾರರು ಸಾವನ್ನಪ್ಪಿರುವಂತಹ ಘಟನೆ ತುಮಕೂರು ತಾಲೂಕಿನ ನಾಗವಲ್ಲಿ ಗ್ರಾಮದ ಬಳಿ ನಡೆದಿದೆ. ರಂಗನಾಥಪುರದ ಪ್ರಸಾದ್(20) ಮತ್ತು ವಸಂತ್(22) ಮೃತರು. ರಂಗನಾಥಪುರದಿಂದ ತುಮಕೂರು ಕಡೆಗೆ ಹೋಗುವಾಗ ದುರ್ಘಟನೆ ಸಂಭವಿಸಿದೆ. ತೀವ್ರ ರಕ್ತಸ್ರಾವವಾಗಿ ಪ್ರಸಾದ್, ವಸಂತ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೆಬ್ಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಹರೀಶ್‌ ಕೇರ

View all posts by this author