ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

M. Eshwar: ತುಮಕೂರಿನ ಹಿರಿಯ ಪತ್ರಕರ್ತ ಎಂ. ಈಶ್ವರ್ ಅನಾರೋಗ್ಯದಿಂದ ನಿಧನ

ತುಮಕೂರು ವಾರ್ತೆ ಪತ್ರಿಕೆಯ ವರದಿಗಾರ ಎಂ. ಈಶ್ವರ್ ಅವರು ಮೆದುಳಿನ ಪಾರ್ಶ್ವವಾಯು ಸಮಸ್ಯೆಯಿಂದಾಗಿ ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ. ಇವರ ನಿಧನಕ್ಕೆ ಡಿಸಿಎಂ ಡಾ.ಜಿ.ಪರಮೇಶ್ವರ್‌ ಸೇರಿ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ತುಮಕೂರಿನ ಹಿರಿಯ ಪತ್ರಕರ್ತ ಎಂ. ಈಶ್ವರ್ ಅನಾರೋಗ್ಯದಿಂದ ನಿಧನ

ಹಿರಿಯ ಪತ್ರಕರ್ತ ಎಂ. ಈಶ್ವರ್. -

Prabhakara R
Prabhakara R Jun 30, 2026 9:31 PM

ತುಮಕೂರು: ಹಿರಿಯ ಪತ್ರಕರ್ತ, ತುಮಕೂರು ವಾರ್ತೆ ಪತ್ರಿಕೆಯ ವರದಿಗಾರ ಎಂ. ಈಶ್ವರ್ (45) (M. Eshwar) ಅವರು ಅನಾರೋಗ್ಯದಿಂದ ಮಂಗಳವಾರ ಬೆಳಗ್ಗೆ ನಿಧನರಾದರು. ಇವರು ಪತ್ನಿ ಅನಿತಾ, ಪುತ್ರಿ ಆಧ್ಯಶ್ರೀ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಇವರು ಮೆದುಳಿನ ಪಾರ್ಶ್ವವಾಯು ಸಮಸ್ಯೆಯಿಂದಾಗಿ ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದರು. ಈಶ್ವರ್ ಅವರ ಸ್ವಗ್ರಾಮ ಆಂಧ್ರಪ್ರದೇಶದ ಹೇಮಾವತಿ ಬಳಿಯ ಕೆಂಕೆರೆಯಲ್ಲಿ ಅಂತ್ಯಸಂಸ್ಕಾರ ನೆರವೇರಿದೆ.

ನಗರದ ಪತ್ರಿಕಾ ಭವನ ಬಳಿ ಸಾರ್ವಜನಿಕ ದರ್ಶನಕ್ಕಾಗಿ ಪಾರ್ಥಿವ ಶರೀರ ಇಡಲಾಗಿತ್ತು. ಶಾಸಕ ಜಿ.ಬಿ. ಜ್ಯೋತಿಗಣೇಶ್, ಜಿಲ್ಲಾಧಿಕಾರಿ ಶುಭಾ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಎಲ್. ಯೋಗೇಶ್, ಪ್ರಧಾನ ಕಾರ್ಯದರ್ಶಿ ಟಿ.ಇ. ರಘುರಾಮ್, ಖಜಾಂಚಿ ಹಾರೋಗೆರೆ ಸತೀಶ್ ಹಾಗೂ ಪದಾಧಿಕಾರಿಗಳು, ಪತ್ರಿಕೋದ್ಯಮಿ ಡಾ.ಎಸ್. ನಾಗಣ್ಣ, ಜಿಲ್ಲಾ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾದ ಆರ್. ಕಾಮರಾಜ್, ಚಿ.ನಿ. ಪುರುಷೋತ್ತಮ್, ಜಿಲ್ಲಾ ಪತ್ರಿಕಾ ಸಂಪಾದಕರ ಸಂಘದ ಅಧ್ಯಕ್ಷ ಕರುಣಾಕರ್, ಪ್ರಧಾನ ಕಾರ್ಯದರ್ಶಿ ಮಂಜುನಾಥಗೌಡ, ತುಮಕೂರು ಪ್ರೆಸ್ ಕ್ಲಬ್ ಅಧ್ಯಕ್ಷ ಶಶಿಧರ್ ದೋಣಿಹಕ್ಲು ಸೇರಿದಂತೆ ಜಿಲ್ಲೆಯ ಹಲವು ಪತ್ರಕರ್ತರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಆಗಮಿಸಿ ಅಂತಿಮ ನಮನ ಸಲ್ಲಿಸಿದರು.

ನೇತ್ರ ದಾನ:

ಮೃತ ಈಶ್ವರ್ ಅವರ ಕಣ್ಣುಗಳನ್ನು ಅವರ ಕುಟುಂಬದವರು ದಾನ ನೀಡಿದರು. ಎಲ್ಲರೊಂದಿಗೆ ಪ್ರೀತಿ ವಿಶ್ವಾಸದಿಂದ ಬೆರೆಯುತ್ತಿದ್ದ ಗೆಳೆಯ ಈಶ್ವರ್ ಅಗಲಿಕೆಗೆ ಪತ್ರಕರ್ತರು ಶೋಕ ವ್ಯಕ್ತಪಡಿಸಿದರು.

ಹಲವು ಗಣ್ಯರಿಂದ ಸಂತಾಪ:

ಪತ್ರಕರ್ತ ಈಶ್ವರ್ ನಿಧನಕ್ಕೆ ಡಿಸಿಎಂ ಪರಮೇಶ್ವರ್, ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಸಂತಾಪ ವ್ಯಕ್ತಪಡಿಸಿದ್ದಾರೆ. ಈಶ್ವರ್ ಅವರು ಪತ್ರಕರ್ತರಾಗಿ ಜಿಲ್ಲೆಯ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಲಭಿಸಲಿ, ಅವರ ಕುಟುಂಬಕ್ಕೆ ನೋವು ಭರಿಸುವ ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.

K.T. Shivaprasad: ರಾಜ್ಯದ ಖ್ಯಾತ ಚಿತ್ರ ಕಲಾವಿದ, ಪ್ರಗತಿಪರ ಚಿಂತಕ ಕೆ.ಟಿ. ಶಿವಪ್ರಸಾದ್ ಇನ್ನಿಲ್ಲ

ಮಾಜಿ ಸಚಿವ ಸೊಗಡು ಶಿವಣ್ಣ, ಮಾಜಿ ಶಾಸಕರಾದ ಗಂಗಹನುಮಯ್ಯ, ಎಂ.ಡಿ. ಲಕ್ಷಿನಾರಾಯಣ, ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿಶಂಕರ್ ಹೆಬ್ಬಾಕ, ಜಿಲ್ಲಾ ವಕ್ತಾರ ಜೆ. ಜಗದೀಶ್ ಮೊದಲಾದವರು ಈಶ್ವರ್ ಆತ್ಮಕ್ಕೆ ಶಾಂತಿ ಕೋರಿ ಸಂತಾಪ ವ್ಯಕ್ತಪಡಿಸಿದ್ದಾರೆ.