ಪಾವಗಡದ ಮಣಪ್ಪುರಂ ಗೋಲ್ಡ್ ಲೋನ್ ಕಚೇರಿಯಲ್ಲಿ ಶಾರ್ಟ್ ಸರ್ಕ್ಯೂಟ್; ದಾಖಲೆಗಳು ಬೆಂಕಿಗಾಹುತಿ
Pavagada News: ಪಾವಗಡ ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪವಿರುವ ಮಣಪ್ಪುರಂ ಗೋಲ್ಡ್ ಲೋನ್ ಕಚೇರಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿರುವ ಘಟನೆ ಮಂಗಳವಾರ ನಡೆದಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಚೇರಿಯಲ್ಲಿದ್ದ ಕೆಲವು ದಾಖಲೆಗಳು ಹಾಗೂ ಕಡತಗಳು ಬೆಂಕಿಗೆ ಆಹುತಿಯಾಗಿವೆ ಎಂದು ತಿಳಿದುಬಂದಿದೆ.
ಪಾವಗಡ ಪಟ್ಟಣದ ಮಣಪ್ಪುರಂ ಗೋಲ್ಡ್ ಲೋನ್ ಕಚೇರಿ. -
ಪಾವಗಡ, ಆ.04: ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪ ಇರುವ (Pavagada News) ಮಣಪ್ಪುರಂ ಗೋಲ್ಡ್ ಲೋನ್ ಕಚೇರಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿರುವ ಘಟನೆ ಮಂಗಳವಾರ ಜರುಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಚೇರಿಯಲ್ಲಿದ್ದ ಕೆಲವು ದಾಖಲೆಗಳು ಹಾಗೂ ಕಡತಗಳು ಬೆಂಕಿಗೆ ಆಹುತಿಯಾಗಿವೆ ಎಂದು ತಿಳಿದುಬಂದಿದೆ. ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.
ಅವಘಡದಲ್ಲಿ ಕಚೇರಿಯ ದಾಖಲೆಗಳಿಗೆ ಹಾನಿಯಾಗಿದ್ದು, ಗೋಲ್ಡ್ ಲೋನ್‌ಗಾಗಿ ಗ್ರಾಹಕರು ಅಡಮಾನ ಇಟ್ಟಿರುವ ಬಂಗಾರ ಹಾಗೂ ಕಚೇರಿಯಲ್ಲಿದ್ದ ಹಣಕ್ಕೆ ಯಾವುದೇ ರೀತಿಯ ಹಾನಿಯಾಗಿಲ್ಲ ಎಂದು ಮಣಪ್ಪುರಂ ಗೋಲ್ಡ್ ಲೋನ್ ಕಚೇರಿಯ ವ್ಯವಸ್ಥಾಪಕರು ಸ್ಪಷ್ಟಪಡಿಸಿದ್ದಾರೆ.
ಏರ್ ಇಂಡಿಯಾ ವಿಮಾನ ಹಾರಾಟದ ವೇಳೆ ಟರ್ಬುಲೆನ್ಸ್: ಏಕಾಏಕಿ 300 ಅಡಿ ಕುಸಿದು 12 ಪ್ರಯಾಣಿಕರಿಗೆ ಗಾಯ; ವಿಡಿಯೊ ವೈರಲ್
ಘಟನೆಯಿಂದ ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಅಗ್ನಿಶಾಮಕ ಸಿಬ್ಬಂದಿಯ ಸಮಯೋಚಿತ ಕಾರ್ಯಾಚರಣೆಯಿಂದ ಹೆಚ್ಚಿನ ಅನಾಹುತ ತಪ್ಪಿದೆ. ಘಟನೆಯ ಕುರಿತು ಸಂಬಂಧಿಸಿದ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.