KAS Exam: ಕೆಎಎಸ್ ಪರೀಕ್ಷೆ ಅನ್ಯಾಯ ಸರಿಪಡಿಸುವಂತೆ ಸಿಎಂಗೆ ಸಿದ್ದಲಿಂಗ ಸ್ವಾಮೀಜಿ ಪತ್ರ
KAS Exam: ಕೆಎಎಸ್ ಪರೀಕ್ಷೆಯನ್ನು ಕನ್ನಡ ಮಾಧ್ಯಮದಲ್ಲಿ ಬರೆದ ಗ್ರಾಮೀಣ ಭಾಗದ ಅಭ್ಯರ್ಥಿಗಳಿಗೆ ಆಗಿರುವ ಅನ್ಯಾಯವಾಗಿದೆ. ಇಂತಹ ಪರಿಸ್ಥಿತಿ ಮುಂದುವರಿದರೆ ಗ್ರಾಮೀಣ ಮಕ್ಕಳ ಭವಿಷ್ಯ ಹಾಳಾಗಲಿದೆ. ಹೀಗಾಗಿ ಸಮಸ್ಯೆ ಸರಿಪಡಿಸುವಂತೆ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.


ತುಮಕೂರು: ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ಕೆಎಎಸ್ ಪರೀಕ್ಷೆಯನ್ನು (KAS Exam) ಕನ್ನಡ ಮಾಧ್ಯಮದಲ್ಲಿ ಬರೆದ ಗ್ರಾಮೀಣ ಭಾಗದ ಅಭ್ಯರ್ಥಿಗಳಿಗೆ ಆಗಿರುವ ಅನ್ಯಾಯ ಸರಿಪಡಿಸುವಂತೆ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಅನುವಾದದಲ್ಲಿ ತಜ್ಞರಾದವರು ಹಾಗೂ ಕನ್ನಡ ಭಾಷೆಯಲ್ಲಿ ಪ್ರಾವೀಣ್ಯ ಹೊಂದಿದ ತಜ್ಞರ ಸಮಿತಿ ರಚಿಸಿ ಗ್ರಾಮೀಣ ವಿದ್ಯಾರ್ಥಿಗಳ ಹಿತ ಕಾಪಾಡಬೇಕು. ಪ್ರಶ್ನೆಗಳನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ಅನುವಾದ ಮಾಡುವಾಗ ಆಗಿರುವ ತಪ್ಪಿನಿಂದ ಕನ್ನಡ ಮಾಧ್ಯಮದಲ್ಲಿ ಪರೀಕ್ಷೆ ಬರೆದಿರುವ ಗ್ರಾಮೀಣ ಭಾಗದ ಅಭ್ಯರ್ಥಿಗಳಿಗೆ ತೊಂದರೆಯಾಗಿದ್ದು, ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸುವಂತೆ ಕೋರಿದ್ದಾರೆ.
ಪ್ರಶ್ನೆ ಪತ್ರಿಕೆಗಳಲ್ಲಿ ಅನೇಕ ದೋಷಗಳು ಉಂಟಾಗಿವೆ. ಅಭ್ಯರ್ಥಿಗಳು ಪ್ರಶ್ನೆಗಳು ಅರ್ಥವಾಗದೆ ಅನುತ್ತೀರ್ಣರಾಗಿ ಭವಿಷ್ಯ ಹಾಳು ಮಾಡಿಕೊಳ್ಳುತ್ತಿದ್ದಾರೆ. ಇಂತಹ ಪರಿಸ್ಥಿತಿ ಮುಂದುವರಿದರೆ ಗ್ರಾಮೀಣ ಮಕ್ಕಳ ಭವಿಷ್ಯ ಹಾಳಾಗಲಿದೆ. ಮುಂದಿನ ದಿನಗಳಲ್ಲಿ ಇಂತಹವರಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.
ಈ ಸುದ್ದಿಯನ್ನೂ ಓದಿ | Chamarajanagar News: ಮಲೆ ಮಹದೇಶ್ವರ ದೇಗುಲದ ಹುಂಡಿ ಎಣಿಕೆ: 28 ದಿನಗಳಲ್ಲಿ 1.94 ಕೋಟಿ ರೂ. ಸಂಗ್ರಹ
ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ವಾರ್ಷಿಕ ಮಹಾಸಭೆ

ತುಮಕೂರು: ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ 2023-24ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಮಹಾಸಭೆ ನಗರದ ಹೊರವಲಯದ ಗೊಲ್ಲಹಳ್ಳಿ ಶ್ರೀ ಸಿದ್ಧಾರ್ಥ ಶಿಕ್ಷಕ ತರಬೇತಿ ಕೇಂದ್ರ ಸಭಾಂಗಣದಲ್ಲಿ ನಡೆಯಿತು.
ಸಂಸ್ಥೆಯ ಕಾರ್ಯದರ್ಶಿ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಆಯವ್ಯಯ ಲೆಕ್ಕಪತ್ರ ಮಂಡನೆ, ಶಿಕ್ಷಣ ಸಂಸ್ಥೆ ಪ್ರಗತಿ ಹಾದಿ ಸೇರಿದಂತೆ ಹಲವು ವಿಚಾರಗಳನ್ನು ಚರ್ಚಿಸಲಾಯಿತು. ನಂತರ ಮಾತನಾಡಿ ಶಿಕ್ಷಣ ಸಂಸ್ಥೆಯ ಅಭಿವೃದ್ಧಿಗೆ ಶ್ರಮಿಸಬೇಕೆಂದು ಆಡಳಿತ ಮಂಡಳಿ ಹಾಗೂ ಸಂಸ್ಥೆಯ ವಿವಿಧ ಶಾಲಾ-ಕಾಲೇಜುಗಳ ಘಟಕದ ಮುಖ್ಯಸ್ಥರಿಗೆ ಸೂಚಿಸಿದರು.
ಇದಕ್ಕೂ ಮುನ್ನ ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ, ಸಾಹೇ ವಿವಿಯ ಕುಲಾಧಿಪತಿ ಆದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಶಿಕ್ಷಕ ತರಬೇತಿಯ ಪ್ರಕ್ಷಣಾರ್ಥಿ ಸೇರಿದಂತೆ ಶಾಲಾ ಮಕ್ಕಳೊಂದಿಗೆ ಸಂವಾದ ನಡೆಸಿ ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ತಮವಾದ ಸಾಧನೆ ಮಾಡಬೇಕೆಂದು ಹುರಿದುಂಬಿಸಿ ಆರ್ಶೀವದಿಸಿದರು.
ಈ ಸಂದರ್ಭದಲ್ಲಿ ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಸದಸ್ಯರಾದ ಮಾಜಿ ಸಚಿವರಾದ ಎಚ್.ಕೆ.ಕುಮಾರಸ್ವಾಮಿ, ವಕೀಲರಾದ ಅಮರನಾಥ್, ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಬಿ ನಂಜುಂಡಪ್ಪ, ಸಾಹೇ ವಿವಿಯ ಉಪಕುಲಪತಿಗಳಾದ ಡಾ.ಬಿ.ಕೆ.ಲಿಂಗೇಗೌಡ, ರಿಜಿಸ್ಟರ್ ಡಾ. ಅಶೋಕ್ ಮೆಹ್ತಾ, ಕುಲಾಧಿಪತಿಗಳ ಸಲಹೆಗಾರರಾದ ಡಾ. ವಿವೇಕ್ ವೀರಯ್ಯ, ಮೆಡಿಕಲ್ ಕಾಲೇಜು, ಪ್ರಾಂಶುಪಾಲರಾದ ಸಾಣಿಕೊಪ್ಪ, ದಂತ ವೈದ್ಯಕೀಯ ಕಾಲೇಜಿನ ಡಾ. ಪ್ರವೀಣ್ ಕುಡುವ, ಉಪ ಪ್ರಾಂಶುಪಾಲರಾದ ಡಾ. ಪ್ರಭಾಕರ್, ಎಂಜಿನಿಯರಿಂಗ್ ಕಾಲೇಜು ವಿಭಾಗದ ಪ್ರಾಂಶುಪಾಲರಾದ ಡಾ. ರವಿಪ್ರಕಾಶ್, ನೆಲಮಂಗಲ ವೈದ್ಯಕೀಯ ಕಾಲೇಜು ಪ್ರಾಂಶುಪಾಲರಾದ ದಿವಾಕರ್ ಸೇರಿದಂತೆ ಶಿಕ್ಷಣ ಸಂಸ್ಥೆಗಳ ವಿವಿಧ ವಿಭಾಗದ ಮುಖ್ಯಸ್ಥರುಗಳು, ಪ್ರಾಧ್ಯಾಪಕ ವರ್ಗ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.