ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Self Harming: ನಿವೃತ್ತಿಗೆ ಒಂದೇ ವಾರ, ಕಚೇರಿಯಲ್ಲೇ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಆತ್ಮಹತ್ಯೆ!

ಪಾವಗಡ ಸಮಾಜ ಕಲ್ಯಾಣ ಇಲಾಖೆಯಲ್ಲಿ ನಿರ್ದೇಶಕರಾಗಿ ಮಲ್ಲಿಕಾರ್ಜುನ್ ಕರ್ತವ್ಯ ನಿರ್ವಹಿಸುತ್ತಿದ್ದರು. ಇನ್ನು ಒಂದೇ ವಾರದಲ್ಲಿ ಇವರ ಸೇವಾವಧಿ ಮುಕ್ತಾಯಗೊಳ್ಳಬೇಕಿತ್ತು. ತುಮಕೂರು ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ನಿರ್ದೇಶಕ ಕೃಷ್ಣಪ್ಪ ನೀಡಿದ ಕಿರುಕುಳವೇ ಈ ನಿರ್ಧಾರಕ್ಕೆ ಕಾರಣ ಎಂದು ವಿಡಿಯೋದಲ್ಲಿ ಹೇಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತ ಮಲ್ಲಿಕಾರ್ಜುನ್

ತುಮಕೂರು, ಮಾ.21: ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಯೊಬ್ಬರು ಕಚೇರಿಯಲ್ಲೇ ದುರಂತ ಅಂತ್ಯ ಕಂಡ ಘಟನೆ ತುಮಕೂರು (Tumkur) ಜಿಲ್ಲೆ ಪಾವಗಡ (Pavagada) ಪಟ್ಟಣದಲ್ಲಿ ನಡೆದಿದೆ. ಸಮಾಜ ಕಲ್ಯಾಣ ಅಧಿಕಾರಿ ಮಲ್ಲಿಕಾರ್ಜುನ ನಿನ್ನೆ (ಮಾ.20) ಕಚೇರಿಯಲ್ಲೇ ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾರೆ. ಮೇಲಧಿಕಾರಿ ಕೃಷ್ಣಪ್ಪ ಎಂಬವರ ಕಿರುಕುಳ ತಾಳಲಾರದೇ ಈ ನಿರ್ಧಾರ ಮಾಡಿರುವುದಾಗಿ ಮಲ್ಲಿಕಾರ್ಜುನ ವಿಡಿಯೋ ಮೂಲಕ ಹೇಳಿದ್ದಾರೆ. ಸಾವಿಗೂ ಮುನ್ನ ಮಾಡಿರುವ ಕೊನೆಯ ವಿಡಿಯೋವನ್ನು ಸ್ವತಃ ಮಲ್ಲಿಕಾರ್ಜುನ ಇತರ ಸಹೋದ್ಯೋಗಿಗಳಿಗೆ ಕಳುಹಿಸಿದ್ದಾರೆ. ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಳೆದ 3 ವರ್ಷಗಳಿಂದ ಪಾವಗಡ ಸಮಾಜ ಕಲ್ಯಾಣ ಇಲಾಖೆಯಲ್ಲಿ ನಿರ್ದೇಶಕರಾಗಿ ಮಲ್ಲಿಕಾರ್ಜುನ್ ಕರ್ತವ್ಯ ನಿರ್ವಹಿಸುತ್ತಿದ್ದರು. ಇನ್ನು ಒಂದೇ ವಾರದಲ್ಲಿ ಇವರ ಸೇವಾವಧಿ ಮುಕ್ತಾಯಗೊಳ್ಳಬೇಕಿತ್ತು. ನಿವೃತ್ತಿಗೆ ಒಂದು ವಾರ ಇರುವಾಗಲೇ ಮಲ್ಲಿಕಾರ್ಜುನ್ ದುರಂತ ಅಂತ್ಯ ಕಂಡಿದ್ದಾರೆ. ತುಮಕೂರು ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ನಿರ್ದೇಶಕ ಕೃಷ್ಣಪ್ಪ ನೀಡಿದ ಕಿರುಕುಳವೇ ಈ ನಿರ್ಧಾರಕ್ಕೆ ಕಾರಣ ಎಂದು ವಿಡಿಯೋದಲ್ಲಿ ಹೇಳಿದ್ದಾರೆ.

ವಿಡಿಯೋದಲ್ಲಿ ಅಧಿಕಾರಿ ಹೇಳಿದ್ದೇನು?

ನಮ್ಮ ತಾಯಿ ಹೆಂಡತಿ ಮಕ್ಕಳು ನಮ್ಮ ಇಡೀ ಸಂಸಾರ ನನ್ನ ಚೆನ್ನಾಗಿ ನೋಡಿಕೊಂಡಿದೆ, ನನಗೆ ಒಳ್ಳೆಯ ಬೆಲೆ ಕೊಟ್ಟಿದ್ದಾರೆ, ನಾನು ಅವರಿಗೆ ಇನ್ನು ಸಹಾಯ ಮಾಡಬೇಕಿತ್ತು. ಆದ್ರೆ ಅದು ಆಗುತ್ತಿಲ್ಲ. ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಕೃಷ್ಣಪ್ಪ ನನಗೆ ತೊಂದರೆ ಕೊಟ್ಟಿರುವುದರಿಂದ ನಾನು ಈ ನಿರ್ಧಾರಕ್ಕೆ ಬಂದಿದ್ದೇನೆ. ಅವರಿಗೆ ದೇವರೇ ಶಿಕ್ಷೆ ನೀಡುತ್ತಾನೆ. ಅವನು ತರ್ಲೆ ಇರುವುದರಿಂದ ನಮ್ ಕುಟುಂಬದವರು ಏನು ಸೇಡು ತೀರಿಸಿಕೊಳ್ಳುವ ಅವಶ್ಯಕತೆ ಇಲ್ಲಾ, ಅವನಿಗೆ ದೇವರು, ಕಾನೂನು ಶಿಕ್ಷೆ ಕೊಟ್ಟೆ ಕೊಡುತ್ತಾನೆ ಎಂದು ವಿಡಿಯೋದಲ್ಲಿ ಹೇಳಿದ್ದಾರೆ.

ಪ್ರೀತಿಯಿಂದ ಸಾಕಿದ್ದ ಬೆಕ್ಕು ಸಾವು; ದುಃಖ ತಡೆಯಲಾರದೆ 20 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ

ಮಲ್ಲಿಕಾರ್ಜುನ ಅವರ ತಂದೆ ಕೂಡ ಸಮಾಜ ಕಲ್ಯಾಣ ಇಲಾಖೆಯಲ್ಲೇ ಕೆಲಸ ಮಾಡುತ್ತಿದ್ದರು. ಮಲ್ಲಿಕಾರ್ಜುನ ತಂದೆ ನಿವೃತ್ತಿಗೆ ಕೆಲವೇ ತಿಂಗಳು ಇರುವಾಗ ಮೃತಪಟ್ಟಿದ್ದರು. ತಂದೆ ಸಾವಿನಿಂದ ಅನುಕಂಪದ ಆಧಾರದ ಮೇಲೆ ಮಲ್ಲಿಕಾರ್ಜುನಗೆ ಕೆಲಸ ಸಿಕ್ಕಿತ್ತು. ಮಲ್ಲಿಕಾರ್ಜನ ಕೂಡ ಸಮಾಜ ಕಲ್ಯಾಣ ಇಲಾಖೆಯಲ್ಲೇ ಕೆಲಸಕ್ಕೆ ಸೇರಿಕೊಂಡಿದ್ದರು. ಇದೀಗ ಇದೀಗ ಮಲ್ಲಿಕಾರ್ಜುನ್ ಗೆ ನಿವೃತ್ತಿ ಕೇವಲ ಒಂದು ವಾರ ಇರುವಾಗ ದುರಂತ ಕಂಡಿರುವುದು ಅನುಮಾನಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ ಹೇಳಿರುವಂತೆ ಮೇಲಧಿಕಾರಿಗಳ ಕಿರುಕುಳಕ್ಕೆ ಈ ನಿರ್ಧಾರ ಮಾಡಿಕೊಂಡ್ರಾ, ಇಲ್ಲ ಮಕ್ಕಳಿಗೆ ಕೆಲಸ ಸಿಗಲಿ ಎಂದು ದುರಂತ ಅಂತ್ಯ ಕಂಡಿದ್ದಾರಾ ಅನ್ನೋ ಅನುಮಾನ ಕಾಡತೊಡಗಿದೆ. ಸದ್ಯ ಪೊಲೀಸರು ಮಲ್ಲಿಕಾರ್ಜುನ್ ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದಾರೆ.

ಹರೀಶ್‌ ಕೇರ

View all posts by this author