ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಕೊನೆಯ ಶ್ರಾವಣ ಶನಿವಾರ; ಮಧುಗಿರಿಯ ಶ್ರೀ ಲಕ್ಷ್ಮಿ ವೆಂಕಟರಮಣ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ, ಅನ್ನಪ್ರಸಾದ ವಿನಿಯೋಗ

Madhugiri News: ಕೊನೆಯ ಶ್ರಾವಣ ಶನಿವಾರದ ಅಂಗವಾಗಿ ಮಧುಗಿರಿ ಶ್ರೀ ಲಕ್ಷ್ಮಿ ವೆಂಕಟರಮಣ ಸ್ವಾಮಿ ದೇವಾಲಯದಲ್ಲಿ ದೇವರಿಗೆ ವಿಶೇಷ ಪೂಜೆ, ಅಭಿಷೇಕ ಹಾಗೂ ಅಲಂಕಾರ ಮಾಡಲಾಗಿತ್ತು. ಭಕ್ತಾದಿಗಳಿಗೆ ದೇವಾಲಯದ ಮುಂಭಾಗ 'ಅನ್ನಪ್ರಸಾದʼ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಮಧುಗಿರಿ, ಸೆ.05: ಪಟ್ಟಣದಲ್ಲಿ ಕೊನೆಯ ಶ್ರಾವಣ ಶನಿವಾರದ ಅಂಗವಾಗಿ ಮಧುಗಿರಿ ಶ್ರೀ ಲಕ್ಷ್ಮಿ ವೆಂಕಟರಮಣ ಸ್ವಾಮಿ ದೇವಾಲಯದಲ್ಲಿ ದೇವರಿಗೆ ವಿಶೇಷ ಪೂಜೆ, ಅಭಿಷೇಕ ಹಾಗೂ ಅಲಂಕಾರ ಮಾಡಲಾಗಿತ್ತು. (Madhugiri News) ಭಕ್ತಾದಿಗಳಿಗೆ ದೇವಾಲಯದ ಮುಂಭಾಗ 'ಅನ್ನಪ್ರಸಾದʼ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಲೋಕ ಕಲ್ಯಾಣಾರ್ಥ ಮತ್ತು ನಾಡಿನಲ್ಲಿ ಉತ್ತಮ ಮಳೆ, ಬೆಳೆಗಾಗಿ ಪ್ರಾರ್ಥಿಸಲಾಯಿತು. 'ಅನ್ನಪ್ರಸಾದʼ ಕಾರ್ಯಕ್ರಮಕ್ಕೆ ಸಿದ್ದರಬೆಟ್ಟ ಶ್ರೀಗಳಾದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಚಾಲನೆ ನೀಡಿದರು. ಬೆಳಗ್ಗೆ 11 ಗಂಟೆಗೆ ಆರಂಭವಾದ 'ಅನ್ನಪ್ರಸಾದʼ ಕಾರ್ಯಕ್ರಮವು ಸಂಜೆಯವರೆಗೂ ಜರುಗಿತು.

Madhugiri News 1

ಈ ಸಂದರ್ಭದಲ್ಲಿ ಧಾರ್ಮಿಕ ಮುಖಂಡರಾದ ಡಾ.ಎಂ.ಜಿ. ಶ್ರೀನಿವಾಸ್ ಮೂರ್ತಿ, ಪುರಸಭೆ ಮಾಜಿ ಅಧ್ಯಕ್ಷ ಎಂ.ವಿ. ಗೋವಿಂದರಾಜು, ಮಾಜಿ ಸದಸ್ಯ ಆರ್‌.ಎಲ್.ಎಸ್. ರಮೇಶ್, ಭಕ್ತ ಮಂಡಳಿಯ ಜಿ. ನಾರಾಯಣ ರಾಜು, ದೋಲಿಬಾಬು, ಕಿಶೋರ್ ಶೆಟ್ಟಿ, ಪಾಂಡುರಂಗಯ್ಯ, ರಘು ಯಾದವ್, ರವಿ, ನರಸಿಂಹ, ಹೋಟೆಲ್ ಬಸವರಾಜು, ಪ್ರಧಾನ ಅರ್ಚಕ ಅನಂತಪದ್ಮನಾಭ ಭಟ್ಟರು ಮತ್ತಿತರರು ಉಪಸ್ಥಿತರಿದ್ದರು.