ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Ram Navami 2025: ಕಲ್ಪತರು ನಾಡಲ್ಲಿ ಮೊಳಗಿದ ರಾಮ ನಾಮ ಜಪ; ದೇವಾಲಯಗಳಲ್ಲಿ ವಿಶೇಷ ಪೂಜೆ

Ram Navami 2025: ತುಮಕೂರು ಜಿಲ್ಲೆಯ ಶ್ರೀರಾಮ ಹಾಗೂ ಆಂಜನೇಯಸ್ವಾಮಿ ದೇವಾಲಯಗಳಲ್ಲಿ ಭಾನುವಾರ ಮುಂಜಾನೆಯಿಂದಲೇ ಅಭಿಷೇಕ, ವಿಶೇಷ ಪೂಜೆಗಳು ನಡೆದವು. ಹಬ್ಬದ ಹಿನ್ನೆಲೆಯಲ್ಲಿ ದೇವಾಲಯಗಳಿಗೆ ಸಾವಿರಾರು ಭಕ್ತರು ಆಗಮಿಸಿ ದರ್ಶನ ಪಡೆದು, ಪೂಜೆ ಸಲ್ಲಿಸಿದ್ದಾರೆ.

ಕಲ್ಪತರು ನಾಡಲ್ಲಿ ಮೊಳಗಿದ ರಾಮ ನಾಮ ಜಪ; ದೇವಾಲಯಗಳಲ್ಲಿ ವಿಶೇಷ ಪೂಜೆ

Profile Prabhakara R Apr 6, 2025 5:26 PM

ತುಮಕೂರು: ಕಲ್ಪತರುನಾಡು ತುಮಕೂರು ಜಿಲ್ಲೆಯ ಶ್ರೀರಾಮ, ಆಂಜನೇಯಸ್ವಾಮಿ ಸೇರಿ ವಿವಿಧ ದೇವಾಲಯಗಳಲ್ಲಿ ಶ್ರೀರಾಮ ನವಮಿಯನ್ನು (Ram Navami 2025:) ಭಾನುವಾರ ವಿವಿಧ ಧಾರ್ಮಿಕ ಕೈಂಕರ್ಯಗಳೊಂದಿಗೆ ಅತ್ಯಂತ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ದೇವಾಲಯಗಳಲ್ಲಿ ಮುಂಜಾನೆಯಿಂದಲೇ ಶ್ರೀ ರಾಮನಿಗೆ ಅಭಿಷೇಕ, ವಿಶೇಷ ಪೂಜೆ ನಡೆಯಿತು. ಹಬ್ಬದ ಹಿನ್ನೆಲೆಯಲ್ಲಿ ದೇವಾಲಯಗಳಿಗೆ ಸಾವಿರಾರು ಭಕ್ತರು ಆಗಮಿಸಿ ದರ್ಶನ ಪಡೆದಿದ್ದು, ಭಕ್ತರಿಗೆ ಮಜ್ಜಿಗೆ, ಪಾನಕ ಹಾಗೂ ಹೆಸರುಬೇಳೆ ಪ್ರಸಾದ ವಿತರಿಸಲಾಯಿತು.

ನಗರದ ಬಾರ್‌ಲೈನ್ ರಸ್ತೆಯಲ್ಲಿರುವ ಶ್ರೀರಾಮ ದೇವಾಲಯದಲ್ಲಿ ಶ್ರೀರಾಮ ನವಮಿ ಅಂಗವಾಗಿ ಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಗಿದ್ದು, ವಿಶೇಷ ಪೂಜೆ ನೆರವೇರಿತು. ಅದೇ ರೀತಿ ಶೆಟ್ಟಿಹಳ್ಳಿ ಆಂಜನೇಯಸ್ವಾಮಿ, ಶೆಟ್ಟಿಹಳ್ಳಿ ಗೇಟ್‌ನಲ್ಲಿರುವ ಅಭಯ ಆಂಜನೇಯಸ್ವಾಮಿ ದೇವಾಲಯ, ಕೋಟೆ ಆಂಜನೇಯಸ್ವಾಮಿ ದೇವಾಲಯ, ಬಟವಾಡಿ ಆಂಜನೇಯ, ಪುಟ್ಟಾಂಜನೇಯ, ಆರ್‌ಟಿಒ ಕಚೇರಿ ಬಳಿ ಇರುವ ಆಂಜನೇಯ ಸ್ವಾಮಿ ದೇವಾಲಯ, ಟೌನ್‌ಹಾಲ್ ವೃತ್ತದಲ್ಲಿರುವ ನಾಗರಕಟ್ಟೆ, ಸೊಂಡೆಕೊಪ್ಪ ಗಾಳಿ ಆಂಜನೇಯ ದೇವಾಲಯ, ಚಿಕ್ಕಪೇಟೆಯ ರಾಘವೇಂದ್ರ ಸ್ವಾಮಿ ದೊಡ್ಡಮಠ ಸೇರಿದಂತೆ ವಿವಿಧೆಡೆ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದ್ದು, ಶ್ರೀರಾಮನಮಮಿಯನ್ನು ಅದ್ಧೂರಿಯಾಗಿ ಆಚರಿಸಲಾಯಿತು.

Ram Navami (1)

ಶ್ರೀರಾಮ ಹಾಗೂ ಆಂಜನೇಯ ದೇವಾಲಯಗಳಿಗೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ತೆರಳಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು. ದೇವಾಲಯಗಳಲ್ಲಿ ಮಾತ್ರವಲ್ಲದೆ ಕೆಲವು ಸಂಘ ಸಂಸ್ಥೆಗಳು, ಯುವಕ ಸಂಘಗಳು ಸಹ ಪ್ರಮುಖ ರಸ್ತೆಗಳಲ್ಲಿ ಜನರಿಗೆ ಪಾನಕ, ಮಜ್ಜಿಗೆ, ಹೆಸರು ಬೇಳೆ ವಿತರಣೆ ಹಾಗೂ ಅನ್ನದಾಸೋಹ ವ್ಯವಸ್ಥೆ ಮಾಡಿದ್ದು ಸಹ ಗಮನ ಸೆಳೆಯಿತು. ನಗರದ ಬಿ.ಎಚ್. ರಸ್ತೆಯುದ್ದಕ್ಕೂ ಭಕ್ತಾದಿಗಳು ಶ್ರೀರಾಮನ ಭಾವಚಿತ್ರವಿಟ್ಟು ಪೆಂಡಾಲ್ ಹಾಕಿ ಪೂಜೆ ಸಲ್ಲಿಸಿ ಭಕ್ತರಿಗೆ ಪ್ರಸಾದ ವಿತರಿಸುತ್ತಿದ್ದ ದೃಶ್ಯಗಳು ಸಾಮಾನ್ಯವಾಗಿದ್ದವು.

ಈ ಸುದ್ದಿಯನ್ನೂ ಓದಿ | Ram Navami 2025: ಕಲಬುರಗಿಯಲ್ಲಿ ಅದ್ಧೂರಿ ರಾಮೋತ್ಸವ; ಮೆರವಣಿಗೆಯಲ್ಲಿ ರಾರಾಜಿಸಿದ ಆರ್‌ಸಿಬಿ ಜೆರ್ಸಿ