ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Tumkur News: ಶಾಲೆಯ ಬಾಗಿಲಿಗೆ ಸಿಲುಕಿ ತುಂಡಾದ ವಿದ್ಯಾರ್ಥಿನಿಯ ಕೈ ಬೆರಳು

Tumkur News: ಮಧ್ಯಾಹ್ನದ ಬಿಸಿಯೂಟಕ್ಕೆ ಸರದಿ ಸಾಲಿನಲ್ಲಿ ನಿಂತಿದ್ದಾಗ ಶಾಲೆಯ ಬಾಗಿಲಿಗೆ ಸಿಲುಕಿ 1ನೇ ತರಗತಿಯ ಬಾಲಕಿಯ ಎರಡು ಕೈ ಬೆರಳುಗಳು ತುಂಡಾಗಿರುವ ಘಟನೆಯು ತುಮಕೂರು ತಾಲೂಕಿನ ಗೂಳೂರು ಸರ್ಕಾರಿ ಶಾಲೆಯಲ್ಲಿ ಜರುಗಿದೆ. ಈ ಕುರಿತ ವಿವರ ಇಲ್ಲಿದೆ.

ತುಮಕೂರು, ಫೆ.13: ತಾಲೂಕಿನ ಗೂಳೂರು ಸರ್ಕಾರಿ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟಕ್ಕೆ ಸರದಿ ಸಾಲಿನಲ್ಲಿ ನಿಂತಿದ್ದಾಗ ಶಾಲೆಯ ಬಾಗಿಲಿಗೆ ಸಿಲುಕಿ 1ನೇ ತರಗತಿಯ ಬಾಲಕಿಯ ಎರಡು ಕೈ ಬೆರಳುಗಳು ತುಂಡಾಗಿರುವ ಘಟನೆ (Tumkur News) ನಡೆದಿದೆ.

ಚಿನ್ಮಯಿದೇವಿ ಬೆರಳು ಕಳೆದುಕೊಂಡ ವಿದ್ಯಾರ್ಥಿನಿ. ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ನೀಡುವ ವೇಳೆ ಚಿನ್ಮಯಿದೇವಿ ಎಂಬ ಪುಟ್ಟ ಬಾಲಕಿ ಇತರ ವಿದ್ಯಾರ್ಥಿಗಳಂತೆ ಊಟಕ್ಕಾಗಿ ಸರತಿಯ ಸಾಲಿನಲ್ಲಿ ನಿಂತಿದ್ದ ಸಂದರ್ಭದಲ್ಲಿ ಬಾಲಕಿ ಆಕಸ್ಮಿಕವಾಗಿ ಶಾಲೆಯ ಬಾಗಿಲಿಗೆ ಕೈ ಇಟ್ಟುಕೊಂಡು ನಿಂತಿದ್ದಳು ಎನ್ನಲಾಗಿದೆ. ಅದೇ ಸಮಯದಲ್ಲಿ 3ನೇ ತರಗತಿಯ ವಿದ್ಯಾರ್ಥಿ, ಅಕಸ್ಮಾತ್ ಆಗಿ ಬಾಗಿಲನ್ನು ಜೋರಾಗಿ ತಳ್ಳಿದ ಪರಿಣಾಮ, ಬಾಗಿಲಿನ ಸಂದಿಯಲ್ಲಿ ಸಿಲುಕಿ ಬಾಲಕಿಯ ಎರಡು ಬೆರಳುಗಳು ತುಂಡಾಗಿವೆ ಎನ್ನಲಾಗಿದೆ.

ಘಟನೆ ನಡೆದ ತಕ್ಷಣ ಗಾಬರಿಗೊಂಡ ಶಾಲಾ ಸಿಬ್ಬಂದಿ, ಸರಿಯಾದ ಪ್ರಥಮ ಚಿಕಿತ್ಸೆ ಅಥವಾ ತುರ್ತು ಆಸ್ಪತ್ರೆಗೆ ದಾಖಲಿಸುವ ಬದಲು, ಪೋಷಕರಿಗೆ ಕರೆ ಮಾಡಿ ಮಗುವನ್ನು ಮನೆಗೆ ಕಳುಹಿಸಿಕೊಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಶಾಲೆಗೆ ಕಳುಹಿಸಿದ ಮಗು ಸುರಕ್ಷಿತವಾಗಿ ಇರಬೇಕಿತ್ತು, ಆದರೆ ಶಾಲೆಯ ಅಸಡ್ಡೆಯಿಂದಾಗಿ ನಮ್ಮ ಮಗು ಬೆರಳು ಕಳೆದುಕೊಂಡಿದೆ ಎಂದು ಪೋಷಕರು ಅಳಲು ತೋಡಿಕೊಂಡಿದ್ದಾರೆ. ಅಲ್ಲದೇ ತುಂಡಾಗಿ ಬಿದ್ದಿದ್ದ ಬೆರಳನ್ನು ಶಾಲೆಯ ಸಿಬ್ಬಂದಿ ಗುಡಿಸಿ ಬಿಸಾಡಿದ್ದಾರೆ ಎಂದು ಆರೋಪಿಸಿಲಾಗಿದೆ. ಬೆರಳುಗಳು ಇದ್ದಿದ್ದರೆ ಜೋಡಿಸಬಹುದಿತ್ತು ಎಂದು ವೈದ್ಯರು ಹೇಳಿದ್ದಾರೆ.

SSLC exam: ಎಸ್ಸೆಸ್ಸೆಲ್ಸಿ, ದ್ವಿತೀಯ PUC ವಿದ್ಯಾರ್ಥಿಗಳಿಗೆ ಪರೀಕ್ಷೆ ದಿನ ಬಿಎಂಟಿಸಿ ಬಸ್ಸಿನಲ್ಲಿ ಉಚಿತ ಪ್ರಯಾಣ

ಬಾಲಕಿಯ ಕೈ ಬೆರಳುಗಳು ತುಂಡಾಗಲು ಶಾಲೆಯ ಬಾಗಿಲನ್ನು ಮತ್ತೊಬ್ಬ ವಿದ್ಯಾರ್ಥಿ ಜೋರಾಗಿ ತಳ್ಳಿದ್ದೇ ಕಾರಣ ಎಂಬ ಆರೋಪ ಕೇಳಿಬಂದಿದೆ. ಆದರೆ, ಬಿಸಿಯೂಟದ ಸಮಯದಲ್ಲಿ ಶಿಕ್ಷಕರು ಅಥವಾ ಅಡುಗೆ ಸಿಬ್ಬಂದಿ ಸರಿಯಾದ ಉಸ್ತುವಾರಿ ವಹಿಸಿದ್ದರೆ ಈ ಅನಾಹುತವನ್ನು ತಪ್ಪಿಸಬಹುದಿತ್ತು ಎಂದು ಪೋಷಕರು ಕಿಡಿಕಾರಿದ್ದಾರೆ.