ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ತುಮಕೂರಿನಲ್ಲಿ ಬಸ್ ಹತ್ತಲು ಮುಗಿಬಿದ್ದ ಕಾಲೇಜು ವಿದ್ಯಾರ್ಥಿಗಳು; ಚಕ್ರದಡಿ ಸಿಲುಕಿ ವಿದ್ಯಾರ್ಥಿನಿ ಕಾಲು ನುಜ್ಜುಗುಜ್ಜು!

Tumkur News: ತುಮಕೂರು ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಬುಧವಾರ ಘಟನೆ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಪೊಲೀಸರು ಬಸ್‌ ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

ತುಮಕೂರಿನಲ್ಲಿ ಬಸ್ ಚಕ್ರದಡಿ ಸಿಲುಕಿ ವಿದ್ಯಾರ್ಥಿನಿ ಕಾಲು ನುಜ್ಜುಗುಜ್ಜು

ತುಮಕೂರು ಬಸ್‌ ನಿಲ್ದಾಣದಲ್ಲಿ ಬಸ್‌ ಹತ್ತಲು ಮುಗಿಬಿದ್ದ ವಿದ್ಯಾರ್ಥಿಗಳು. -

Prabhakara R
Prabhakara R Mar 25, 2026 8:09 PM

ತುಮಕೂರು: ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ (Tumkur Bus Stand) ಬಸ್ ಹತ್ತಲು ಕಾಲೇಜು ವಿದ್ಯಾರ್ಥಿಗಳು ಮುಗಿಬಿದ್ದ ವೇಳೆ ದುರ್ಘಟನೆಯೊಂದು ಸಂಭವಿಸಿದೆ. ಸೀಟು ಹಿಡಿಯುವ ತರಾತುರಿಯಲ್ಲಿ ನೂರಾರು ವಿದ್ಯಾರ್ಥಿಗಳು ಒಮ್ಮೆಲೆ ನುಗ್ಗಿದ್ದರಿಂದ ಬಸ್‌ ಚಕ್ರ ಹರಿದು ವಿದ್ಯಾರ್ಥಿನಿಯ ಕಾಲು ನುಜ್ಜುಗುಜ್ಜಾಗಿದೆ.

ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಹರ್ಷಿತ (17) ಗಾಯಾಳು. ತುಮಕೂರಿನಿಂದ ಪಾವಗಡಕ್ಕೆ ತೆರಳುವ ಕೆಎಸ್‌ಆರ್‌ಟಿಸಿ ಬಸ್, ನಿಲ್ದಾಣಕ್ಕೆ ಬರುತ್ತಿದ್ದಂತೆಯೇ ಅಲ್ಲಿದ್ದ ನೂರಾರು ಕಾಲೇಜು ವಿದ್ಯಾರ್ಥಿಗಳು ಸೀಟು ಹಿಡಿಯುವ ತರಾತುರಿಯಲ್ಲಿ ಒಮ್ಮೆಲೇ ಬಸ್‌ ಕಡೆ ನುಗ್ಗಿದ್ದಾರೆ. ಈ ನಡುವೆ, ವಿದ್ಯಾರ್ಥಿನಿ ಹರ್ಷಿತ ಆಯತಪ್ಪಿ ಕೆಳಗೆ ಬಿದ್ದಿದ್ದಾಳೆ. ದುರದೃಷ್ಟವಶಾತ್ ಆಕೆಯ ಕಾಲು ಬಸ್‌ನ ಹಿಂದಿನ ಚಕ್ರದ ಕೆಳಗೆ ಸಿಲುಕಿ ನುಜ್ಜುಗುಜ್ಜಾಗಿದ್ದು, ತೀವ್ರವಾಗಿ ಗಾಯಗೊಂಡಿದ್ದಾಳೆ.

ತಕ್ಷಣವೇ ಅಲ್ಲಿದ್ದವರು ಮತ್ತು ಬಸ್ ನಿಲ್ದಾಣದ ಸಿಬ್ಬಂದಿ ಗಾಯಾಳು ವಿದ್ಯಾರ್ಥಿನಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಸ್ತುತ ಆಕೆಗೆ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. ಬಸ್ ನಿಲ್ದಾಣದಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಅಪಘಾತದ ದೃಶ್ಯ ಸೆರೆಯಾಗಿದೆ.



ʻಹಳ್ಳಿ ಹೈದ ಪ್ಯಾಟೆಗೆ ಬಂದ’ ಖ್ಯಾತಿಯ ಬಾವತೀಶ್ ರಸ್ತೆ ಅಪಘಾತಕ್ಕೆ ಬಲಿ; ನಿಂತಿದ್ದ ಬಸ್ಸಿಗೆ ಗುದ್ದಿದ ಬೈಕ್!‌

ಘಟನೆಯ ಬಳಿಕ ಸ್ಥಳಕ್ಕೆ ಆಗಮಿಸಿದ ನಗರ ಠಾಣೆಯ ಪೊಲೀಸರು, ಅಪಘಾತಕ್ಕೆ ಕಾರಣವಾದ ಕೆಎಸ್‌ಆರ್‌ಟಿಸಿ ಬಸ್ಸನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ಮುಂದುವರಿಸಿದ್ದಾರೆ. ಬಸ್ ನಿಲ್ದಾಣಗಳಲ್ಲಿ ವಿದ್ಯಾರ್ಥಿಗಳ ನೂಕುನುಗ್ಗಲು ನಿಯಂತ್ರಿಸಲು ಸೂಕ್ತ ವ್ಯವಸ್ಥೆ ಇಲ್ಲದಿರುವುದೇ ಇಂತಹ ಘಟನೆಗಳಿಗೆ ಕಾರಣ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.