ಗುಬ್ಬಿ: ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಕೇವಲ ಪಠ್ಯ ಜ್ಞಾನವಷ್ಟೇ ಅಲ್ಲದೆ, ವ್ಯಕ್ತಿತ್ವ ವಿಕಸನ, ಸ್ವಾವಲಂಬನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಅರಿವು ಮೂಡಿಸಲಾಗುತ್ತದೆ ಎಂದು ಪ್ರಾಂಶು ಪಾಲರಾದ ಡಾ.ಓ.ನಾಗರಾಜು ತಿಳಿಸಿದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜು(ಸ್ವಾಯತ್ತ) ಪ್ರಥಮ ವರ್ಷಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಪರಿಚಯಾತ್ಮಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಸಮಯದ ಸದ್ಬಳಕೆ ಮಾಡಿಕೊಂಡು ತಮ್ಮ ಕನಸುಗಳನ್ನು ನನಸಾಗಿಸಿಕೊಳ್ಳಬೇಕು.
ಶಿಕ್ಷಣವು ಕೇವಲ ಪದವಿ ಪಡೆಯುವ ಸಾಧನವಲ್ಲ, ಅದು ಉತ್ತಮ ವ್ಯಕ್ತಿತ್ವ, ಸಂಸ್ಕಾರ ಮತ್ತು ಸಮಾಜಮುಖಿ ಬದುಕಿನ ಅಡಿಪಾಯವಾಗಿದೆ. ವಿದ್ಯಾರ್ಥಿಗಳು ಶಿಸ್ತು, ಸಮಯಪಾಲನೆ, ಪರಿಶ್ರಮ ಮತ್ತು ಪ್ರಾಮಾಣಿಕತೆಯನ್ನು ಜೀವನದ ಮೌಲ್ಯಗಳಾಗಿ ಅಳವಡಿಸಿಕೊಂಡರೆ ಯಾವುದೇ ಕ್ಷೇತ್ರ ದಲ್ಲೂ ಯಶಸ್ಸು ಸಾಧಿಸಬಹುದು ಎಂದು ತಿಳಿಸಿದರು.
ಇದನ್ನೂ ಓದಿ: Gubbi News: ಕಂದಾಯ ಇಲಾಖೆ ವಿರುದ್ಧ ರೈತರು ದಿಢೀರ್ ಪ್ರತಿಭಟನೆ
ಹೊಸ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಬೆಳೆಸುವುದು, ಶಿಕ್ಷಣದ ಮಹತ್ವ ಅರಿವು ಮೂಡಿಸುವುದು ಹಾಗೂ ಕಾಲೇಜಿನೊಂದಿಗೆ ಉತ್ತಮ ಬಾಂಧವ್ಯ ಬೆಳೆಸುವ ಉದ್ದೇಶದಿಂದ ಆಯೋಜಿಸಿದ್ದ ಪರಿಚಯಾತ್ಮಕ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆಯಿತು.
ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡಿದ್ದು, ಹೊಸ ಶೈಕ್ಷಣಿಕ ಜೀವನಕ್ಕೆ ಆತ್ಮವಿಶ್ವಾಸ ದೊಂದಿಗೆ ಮುನ್ನುಗ್ಗುವ ಸಂಕಲ್ಪ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಶೈಕ್ಷಣಿಕ ಡೀನ್ ಡಿ.ಎನ್. ಮನೋಹರ್ ಬಾಬು, ಗ್ರಂಥಪಾಲಕ ಡಾ. ರಾಘವೇಂದ್ರ, ಸಮಾಜಶಾಸ್ತ್ರ ಮುಖ್ಯಸ್ಥ ಆರ್ ಅಶೋಕ್, ಶ್ರೀಕಾಂತ್, ರಾಜು, ತಿಮ್ಮಣ್ಣ, ಡಾ.ಸುಮುಖ, ಬಿ.ಎಸ್.ಶಿವಕುಮಾರಸ್ವಾಮಿ, ಮಲ್ಲಿಕಾರ್ಜುನ್ ಪ್ರಭು, ಡಾ.ಕೆ.ಸಿ.ಮುದ್ದಗಂಗಯ್ಯ, ಡಾ.ತಿಮ್ಮನಾಯಕ್, ಡಾ.ತಿಮ್ಮೇಗೌಡ, ಡಾ.ಚಂದ್ರಶೇಖರಯ್ಯ ಜಿ , ಶಿವಪ್ಪ, ಮಧು ಹಾಗೂ ಕಾಲೇಜಿನ ಉಪನ್ಯಾಸಕ ವೃಂದ, ಬೋಧಕೇತರ ಸಿಬ್ಬಂದಿ ಹಾಗೂ ನೂರಾರು ನೂತನ ವಿದ್ಯಾರ್ಥಿಗಳು ಇದ್ದರು.