ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Tumkur News: ಪರಿಶ್ರಮದಿಂದ ಯಶಸ್ಸು ಸಾಧ್ಯ: ಡಾ. ನಾಗಲಕ್ಷ್ಮಿ ಚೌಧರಿ

Tumkur News: ತುಮಕೂರಿನ ಸದಾಶಿವ ನಗರದ ರಸ್ತೆಯಲ್ಲಿರುವ ಶ್ರೀ ಮಾರುತಿ ಮಹಾರಾಜ್ ಕನ್ವೆನ್ಷನ್ ಹಾಲ್‌ನಲ್ಲಿ ಕರ್ನಾಟಕ ಪ್ರದೇಶ ಯುವ ಕುರುಬರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭಾಗಿಯಾಗಿ, ಮಾತನಾಡಿದ್ದಾರೆ.

ಪರಿಶ್ರಮದಿಂದ ಯಶಸ್ಸು ಸಾಧ್ಯ: ಡಾ. ನಾಗಲಕ್ಷ್ಮಿ ಚೌಧರಿ

ತುಮಕೂರಿನಲ್ಲಿ ಕುರುಬರ ಸಂಘದಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ. -

Profile
Siddalinga Swamy Jun 16, 2026 8:27 PM

ತುಮಕೂರು, ಜೂ.16: ವಿದ್ಯಾರ್ಥಿಗಳು ಪ್ರರಿಶ್ರಮ ಪಟ್ಟರೆ ಯಶಸ್ಸು ಸಾಧ್ಯ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ (Dr. Nagalakshmi Choudhary) ಕರೆ ನೀಡಿದರು. ತುಮಕೂರಿನ (Tumkur News) ಸದಾಶಿವ ನಗರದ ರಸ್ತೆಯಲ್ಲಿರುವ ಶ್ರೀ ಮಾರುತಿ ಮಹಾರಾಜ್ ಕನ್ವೆನ್ಷನ್ ಹಾಲ್‌ನಲ್ಲಿ ಕರ್ನಾಟಕ ಪ್ರದೇಶ ಯುವ ಕುರುಬರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಹೋರಾಟ ನಡೆಯುತ್ತಿದ್ದು, ವಿದ್ಯಾರ್ಥಿಗಳು ಉನ್ನತ ಹುದ್ದೆಗಳನ್ನು ಪಡೆದುಕೊಳ್ಳಲು ಸಾರ್ಥಕವಾಗಲಿದೆ ಎಂದು ತಿಳಿಸಿದರು.

ಕರ್ನಾಟಕ ಯುವ ಪ್ರದೇಶ ಕುರುಬರ ಸಂಘದ ಜಿಲ್ಲಾಧ್ಯಕ್ಷ ಮಾತನಾಡಿ, ಪ್ರತಿ ವರ್ಷದಂತೆ ಈ ಬಾರಿಯೂ 102 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ನೀಡಲಾಗುತ್ತಿದೆ. ಕನ್ನಡದಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದಿಸಲಾಯಿತು ಎಂದು ಹೇಳಿದರು.

ಧಾರವಾಡದ ಮನಸೂರು ಶ್ರೀ ರೇವಣ್ಣ ಸಿದ್ದೇಶ್ವರ ಮಹಾಮಠದ ಬಸವರಾಜದೇವರು ಮಹಾಸ್ವಾಮೀಜಿ ಮಾತನಾಡಿ, ಕರ್ನಾಟಕ ಪ್ರದೇಶ ಯುವ ಕುರುಬರ ಸಂಘದ ವತಿಯಿಂದ ಆಯೋಜಿಸಿರುವ ಕುರುಬ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವು ರಾಜ್ಯದಲ್ಲೇ ಇತಿಹಾಸ ಸೃಷ್ಟಿಸುವಂತಹ ಕಾರ್ಯವಾಗಿದೆ ಎಂದು ತಿಳಿಸಿದರು.

ದೋಹಾದಲ್ಲಿ 'ಸಂಭ್ರಮ 2026' ಕನ್ನಡ ಗಾಯನ ಸುಧೆ: ಕತಾರ್ ಕನ್ನಡಿಗರ ಮನಗೆದ್ದ ಗಾಯಕ ರಾಜೇಶ್ ಕೃಷ್ಣನ್

ಈ ಸಂದರ್ಭದಲ್ಲಿ ಪತ್ರಿಕೋದ್ಯಮಿ ಎಸ್. ನಾಗಣ್ಣ, ಕಾಳಿದಾಸ ವಿದ್ಯಾವರ್ಧಕ ‌ಸಂಘದ ಅಧ್ಯಕ್ಷ ‌ಮೈಲಪ್ಪ, ಮಹಿಳಾ ಕಾರ್ಯಾಧ್ಯಕ್ಷೆ ಪಲ್ಲವಿ ಹೊನ್ನಪ್ಪ, ಹಿರಿಯ ನೋಂದಣಾಧಿಕಾರಿ ನಂಜೇಶ್ ಕೆ.ಪಿ., ಜಂಟಿ ಕೃಷಿ ನಿರ್ದೇಶಕ ಲಕ್ಷ್ಮಣ್ ಎಸ್. ಕಳ್ಳಣ್ಣನವರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಸ್. ಸಿದ್ದರಾಮಯ್ಯ, ನಿವೃತ್ತ ಎಂಜಿನಿಯರ್ ಹರೀಶ್, ಎಂ. ಧರ್ಮರಾಜು, ಲಕ್ಷ್ಮಿ ನರಸಿಂಹರಾಜು, ಡಾ. ದರ್ಶನ್, ಕರ್ನಾಟಕ ಪ್ರದೇಶ ಯುವ ಕುರುಬರ ಸಂಘ ಕಾರ್ಯಧ್ಯಕ್ಷ ಬಸವರಾಜು, ಬೀರಲಿಂಗಪ್ಪ ಹಾಗೂ ಇತರರು ಉಪಸ್ಥಿತರಿದ್ದರು.