ಚಿಕ್ಕನಾಯಕನಹಳ್ಳಿ : ತಾಲ್ಲೂಕು ಒಕ್ಕಲಿಗರ ಸಂಘ ಮತ್ತು ನಾಡಪ್ರಭು ಕೆಂಪೇಗೌಡ ಪತ್ತಿನ ಸಹಕಾರ ಸಂಘ ಜಂಟಿಯಾಗಿ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಉನ್ನತ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆ.31 ರಂದು ಬೆಳಗ್ಗೆ ೧೦.೩೦ ಗಂಟೆಗೆ ನಗರದ ತೀನಂಶ್ರೀ ಭವನದಲ್ಲಿ ಆಯೋಜಿಸಿದೆ.
ಶಾಸಕ ಸಿ.ಬಿ.ಸುರೇಶಬಾಬು ಅವರು ಕಾರ್ಯಕ್ರಮ ಉದ್ಘಾಟಿಸುವರು. ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥಸ್ವಾಮಿಜಿಗಳು ದಿವ್ಯ ಸಾನಿಧ್ಯ ವಹಿಸಲಿದ್ದು, ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ, ಸಮಾಜ ಸೇವಕರು ಕೆ.ಟಿ.ಶಾಂತಕುಮಾರ್, ರಾಜ್ಯ ಒಕ್ಕಲಿಗ ಸಂಘದ ನಿರ್ದೇಶಕರು ಹನುಮಂತರಾಯಪ್ಪ, ಲೋಕೇಶ್, ಹೃದಯ ತಜ್ಞ ಡಾ.ಪರಮೇಶ್ವರಪ್ಪ, ಕೆಪಿಸಿಸಿ ಉಪಾಧ್ಯಕ್ಷ ಮುರುಳೀಧರ ಹಾಲಪ್ಪ, ಹಿರಿಯೂರು ಮನವಿ ಟ್ರಸ್ಟ್ ಅಧ್ಯಕ್ಷೆ ಮಾನಸ ಪಾಲ್ಗೊಳ್ಳಲಿದ್ದಾರೆ.
ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಶ್ರೀಹರ್ಷ ಅಧ್ಯಕ್ಷತೆ ವಹಿಸುವರು.