ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Kannada Sahitya Sammelan: ಡಿ.20 ರಂದು ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ : ಕನ್ನಡ ಹಬ್ಬಕ್ಕೆ ಸಜ್ಜುಗೊಳಿಸಿದ ಪರಿಷತ್ತು

ಬೆಳಿಗ್ಗೆ 7.30 ಕ್ಕೆ ತಹಶೀಲ್ದಾರ್ ಆರತಿ.ಬಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಿದ್ದಾರೆ. ತಾಪಂ ಆಡಳಿತಾಧಿಕಾರಿ ಬಿ.ಎಲ್.ಕೃಷ್ಣಪ್ಪ ನಾಡ ಧ್ವಜಾರೋಹಣ ನಡೆಸಲಿದ್ದಾರೆ. ಕಸಾಪ ತಾಲ್ಲೂಕು ಅಧ್ಯಕ್ಷ ಎಚ್.ಸಿ.ಯತೀಶ್ ಪರಿಷತ್ತಿನ ಧ್ವಜಾರೋಹಣ ನೆರವೇರಿಸಲಿದ್ದಾರೆ. ನಂತರ ಬೆಳಿಗ್ಗೆ 8.30 ಕ್ಕೆ ಸಮ್ಮೇಳನಾಧ್ಯಕ್ಷ ನಂಜುಂಡಸ್ವಾಮಿ ಅವರನ್ನು ವಿವಿಧ ಸಾಂಸ್ಕೃತಿಕ ಕಲಾ ತಂಡದೊಂದಿಗೆ ಭವ್ಯ ಮೆರವಣಿಗೆ ಮೂಲಕ ವೇದಿಕೆಗೆ ಬರ ಮಾಡಿಕೊಳ್ಳಲಾಗುವುದು.

ಗುಬ್ಬಿ: ಆರನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಡಿ.20 ರಂದು ಅದ್ಧೂರಿಯಾಗಿ ನಡೆಸಲು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಸಹಯೋಗದಲ್ಲಿ ಸಕಲ ಸಿದ್ಧತೆ ನಡೆಸಿದೆ. ಸಮ್ಮೇಳನಾಧ್ಯಕ್ಷರಾಗಿ ಆಯ್ಕೆಯಾದ ಡಾ.ಬಿ.ನಂಜುಂಡಸ್ವಾಮಿ ಅವರ ಭವ್ಯ ಮೆರವಣಿಗೆ ಪಟ್ಟಣದಲ್ಲಿ ವಿವಿಧ ಸಾಂಸ್ಕೃತಿಕ ಕಲಾ ತಂಡದೊಂದಿಗೆ ನಡೆಸಿ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಸಜ್ಜಾದ ಡಾ.ಗುಬ್ಬಿ ವೀರಣ್ಣ ಸಭಾಂಗಣದ ಗುಬ್ಬಿ ಮಲ್ಲಣಾರ್ಯ ವೇದಿಕೆಯಲ್ಲಿ ವಿವಿಧ ಸಾಹಿತ್ಯಕ ಕಾರ್ಯಕ್ರಮ ಜರುಗಲಿದೆ.

ಬೆಳಿಗ್ಗೆ 7.30 ಕ್ಕೆ ತಹಶೀಲ್ದಾರ್ ಆರತಿ.ಬಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಿದ್ದಾರೆ. ತಾಪಂ ಆಡಳಿತಾಧಿಕಾರಿ ಬಿ.ಎಲ್.ಕೃಷ್ಣಪ್ಪ ನಾಡ ಧ್ವಜಾರೋಹಣ ನಡೆಸಲಿದ್ದಾರೆ. ಕಸಾಪ ತಾಲ್ಲೂಕು ಅಧ್ಯಕ್ಷ ಎಚ್.ಸಿ.ಯತೀಶ್ ಪರಿಷತ್ತಿನ ಧ್ವಜಾರೋಹಣ ನೆರವೇರಿಸಲಿದ್ದಾರೆ. ನಂತರ ಬೆಳಿಗ್ಗೆ 8.30 ಕ್ಕೆ ಸಮ್ಮೇಳಾಧ್ಯಕ್ಷ ನಂಜುಂಡಸ್ವಾಮಿ ಅವರನ್ನು ವಿವಿಧ ಸಾಂಸ್ಕೃತಿಕ ಕಲಾ ತಂಡದೊಂದಿಗೆ ಭವ್ಯ ಮೆರವಣಿಗೆ ಮೂಲಕ ವೇದಿಕೆಗೆ ಬರ ಮಾಡಿಕೊಳ್ಳಲಾಗುವುದು.

ಬೆಳಿಗ್ಗೆ 10 ಗಂಟೆಗೆ ನಡೆಯುವ ಸಮ್ಮೇಳನ ಉದ್ಘಾಟನಾ ಸಮಾರಂಭದ ದಿವ್ಯ ಸಾನಿಧ್ಯವನ್ನು ಬಿ.ಕೋಡಿಹಳ್ಳಿ ಮಠದ ಶ್ರೀ ಬಸವ ಭೃಂಗೇಶ್ವರ ಸ್ವಾಮೀಜಿ ವಹಿಸಲಿದ್ದಾರೆ.

ಇದನ್ನೂ ಓದಿ: Kannada Sahitya Sammelana 2025: 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಲೇಖಕಿ ಬಾನು ಮುಷ್ತಾಕ್‌ ಆಯ್ಕೆ

ಶಾಸಕ ಎಸ್.ಆರ್. ಶ್ರೀನಿವಾಸ್ ಅಧ್ಯಕ್ಷತೆ ವಹಿಸಿ ಕೇಂದ್ರ ಸಚಿವ ವಿ.ಸೋಮಣ್ಣ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್, ಶಾಸಕ ಎಂ.ಟಿ.ಕೃಷ್ಣಪ್ಪ ಘನ ಉಪಸ್ಥಿತಿ ವಹಿಸಲಿದ್ದಾರೆ. ಹಂಪಿ ವಿವಿಯ ಉಪ ಕುಲಪತಿ ಡಾ.ಡಿ.ವಿ.ಪರಶಿವಮೂರ್ತಿ ಉದ್ಘಾಟನೆ ಮಾಡಲಿದ್ದು ಕಸಾಪ ಜಿಲ್ಲಾಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪ ಆಶಯ ನುಡಿ ನುಡಿದು, ಸಮ್ಮೇಳನದ ನೆನಪಿನ ಸಂಚಿಕೆ ಕಲ್ಪ ನುಡಿ ಪುಸ್ತಕವನ್ನು ಪತ್ರಕರ್ತ ಎಂ.ಎಸ್.ರಾಘವೇಂದ್ರ ಬಿಡುಗಡೆ ಮಾಡಲಿದ್ದಾರೆ. ನಂತರ ಡಾ.ಚಿಕ್ಕಣ್ಣ ಯಣ್ಣೆಕಟ್ಟೆ ಧ್ವಜ ಹಸ್ತಾಂತರ ಮಾಡಲಿದ್ದು ನಂತರ ಸಮ್ಮೇಳನಾಧ್ಯಕ್ಷರ ನುಡಿಗಳು ಪ್ರಸ್ತುತ ವಾಗಲಿದೆ.

ಮಧ್ಯಾಹ್ನ 12.30 ಕ್ಕೆ ವಿಚಾರಗೋಷ್ಠಿ ನಡೆಯಲಿದೆ. ಗುಬ್ಬಿ ಕಂಪನಿ ರಂಗಭೂಮಿ, ಪ್ರಚಲಿತ ವಿದ್ಯಮಾನದಲ್ಲಿ ಮಹಿಳೆಯರ ಪಾತ್ರ ಹಾಗೂ ಗುಬ್ಬಿ ತಾಲ್ಲೂಕಿನ ನೀರಾವರಿ ಒಂದು ಮುನ್ನೋಟ ಎಂಬ ವಿಚಾರ ಮಂಡನೆ ನಡೆಯಲಿದೆ. ನಂತರ ಮಧ್ಯಾಹ್ನ 3 ಗಂಟೆಗೆ ಕವಿಗೋಷ್ಠಿ ನಡೆಯಲಿದೆ.

ಸಾಹಿತ್ಯ ಕೃಷಿ ಆರಂಭಿಸಿದ ನವ ಕವಿಗಳಿಗೆ ಇಲ್ಲಿ ಅವಕಾಶ ನೀಡಲಾಗಿದೆ. ನಂತರ ಸಂಜೆ 4 ಗಂಟೆಗೆ ಸಮಾರೋಪ ಹಾಗೂ 16 ಮಂದಿ ಗಣ್ಯರಿಗೆ ಸನ್ಮಾನ ಕಾರ್ಯಕ್ರಮವನ್ನು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸಿ.ಸೋಮಶೇಖರ್ ನಡೆಸಿಕೊಡಲಿದ್ದಾರೆ.