ಸೆ.5ರಂದು ಸರ್ವಪಲ್ಲಿ ರಾಧಾಕೃಷ್ಣನ್ 138ನೇ ಜಯಂತಿ ಅಂಗವಾಗಿ ಅದ್ದೂರಿ ಶಿಕ್ಷಕರ ದಿನಾಚರಣೆ
5 ರಂದು ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಪಟ್ಟಣದ ಎವಿಕೆ ಸಮುದಾಯ ಭವನದಲ್ಲಿ ಆಯೋಜಿಸಲಾಗಿದೆ ಎಂದು ತಾಲ್ಲೂಕು ಶಿಕ್ಷಕರ ದಿನಾಚರಣೆ ಸಮಿತಿ ತಿಳಿಸಿದೆ. ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಸಮಿತಿ ನಡೆಸುವ ಶಿಕ್ಷಕರ ದಿನಾ ಚರಣೆ ಕಾರ್ಯಕ್ರಮದ ಘನ ಉಪಸ್ಥಿತಿ ಕೇಂದ್ರದ ರೈಲ್ವೆ ಸಚಿವ ವಿ.ಸೋಮಣ್ಣ ವಹಿಸಲಿದ್ದಾರೆ.

-

ಗುಬ್ಬಿ: ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ 138 ನೇ ಜಯಂತೋತ್ಸವ ಅಂಗವಾಗಿ ಇದೇ ತಿಂಗಳ 5 ರಂದು ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಪಟ್ಟಣದ ಎವಿಕೆ ಸಮುದಾಯ ಭವನದಲ್ಲಿ ಆಯೋಜಿಸಲಾಗಿದೆ ಎಂದು ತಾಲ್ಲೂಕು ಶಿಕ್ಷಕರ ದಿನಾಚರಣೆ ಸಮಿತಿ ತಿಳಿಸಿದೆ. ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಸಮಿತಿ ನಡೆಸುವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ಘನ ಉಪಸ್ಥಿತಿ ಕೇಂದ್ರದ ರೈಲ್ವೆ ಸಚಿವ ವಿ.ಸೋಮಣ್ಣ ವಹಿಸಲಿದ್ದಾರೆ.
ಇದನ್ನೂ ಓದಿ: Gubbi News: ಗುಬ್ಬಿಯಲ್ಲಿ ಸೆ.7 ರಂದು ವಿಶ್ವ ಛಾಯಾಗ್ರಹಣ ದಿನಾಚರಣೆ : ಹಿರಿಯ ಛಾಯಾಗ್ರಾಹಕರಿಗೆ ಗೌರವ, ಸರ್ವ ಸದಸ್ಯರ ಸಭೆ
ಉದ್ಘಾಟನೆ ಜಿಲ್ಲಾ ಉಸ್ತುವಾರಿ ಸಚಿವ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ನೆರವೇರಿಸಲಿದ್ದಾರೆ. ರಾಜ್ಯ ರಸ್ತೆ ಸಾರಿಗೆ ನಿಗಮ ಅಧ್ಯಕ್ಷ ಹಾಗೂ ಶಾಸಕ ಎಸ್.ಆರ್.ಶ್ರೀನಿವಾಸ್ ಅಧ್ಯಕ್ಷತೆ ವಹಿಸಲಿದ್ದಾರೆ. ರಾಜ್ಯ ಸರ್ಕಾರದ ವಿಶೇಷ ದೆಹಲಿಯ ಪ್ರತಿನಿಧಿ ಟಿ.ಬಿ.ಜಯಚಂದ್ರ ಗೌರವ ಅತಿಥಿಯಾಗಿ ಭಾಗ ವಹಿಸಲಿದ್ದಾರೆ ಎಂದು ಸಮಿತಿ ತಿಳಿಸಿದೆ.
ಮುಖ್ಯ ಅತಿಥಿಯಾಗಿ ಶಾಸಕರಾದ ಎಂ.ಟಿ.ಕೃಷ್ಣಪ್ಪ, ಚಿದಾನಂದ ಗೌಡ, ಆರ್.ರಾಜೇಂದ್ರ, ಡಿ.ಟಿ. ಶ್ರೀನಿವಾಸ್, ಪಪಂ ಅಧ್ಯಕ್ಷೆ ಆಯಿಷಾ ತಾಸೀನ್ ಸೇರಿದಂತೆ ಎಲ್ಲಾ ಚುನಾಯಿತ ಪ್ರತಿನಿಧಿಗಳು ಹಾಗೂ ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸುವ ಈ ಕಾರ್ಯ ಕ್ರಮದಲ್ಲಿ ನಗೆ ಭಾಷಣಕಾರರಾದ ಸುಧಾ ಬರಗೂರು ಪ್ರಧಾನ ಉಪನ್ಯಾಸ ನೀಡಲಿದ್ದಾರೆ ಎಂದು ಶಿಕ್ಷಕರ ದಿನಾಚರಣೆ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.