Teachers Recruitment: 15 ಸಾವಿರ ಶಿಕ್ಷಕರ ನೇಮಕಕ್ಕೆ ಕ್ರಮ: ಸಚಿವ ಮಧು ಬಂಗಾರಪ್ಪ

Teachers Recruitment: ತುಮಕೂರಿನಲ್ಲಿ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಸಚಿವ ಮಧು ಬಂಗಾರಪ್ಪ ಮಾತನಾಡಿದ್ದಾರೆ. ಶಿಕ್ಷಕರ ಕೊರತೆ ನೀಗಿಸಲು ಹೊಸದಾಗಿ ಶಿಕ್ಷಕರ ನೇಮಕಾತಿಗೆ ಸರ್ಕಾರ ಮುಂದಾಗಿದೆ. ಖಾಲಿಯಿರುವ ಶಿಕ್ಷಕರ ಹುದ್ದೆಗಳನ್ನು ಹಂತ-ಹಂತವಾಗಿ ಭರ್ತಿ ಮಾಡಲು ಕ್ರಮಕೈಗೊಳ್ಳಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.

Madhu Bangarappa
Profile Prabhakara R Feb 1, 2025 9:50 PM

ತುಮಕೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಶಿಕ್ಷಣ ಇಲಾಖೆಯಲ್ಲಿ ಖಾಲಿಯಿದ್ದ 13,500 ಶಾಲಾ ಶಿಕ್ಷಕರ ನೇಮಕಾತಿ ಮಾಡಲಾಗಿದೆಯಲ್ಲದೆ, ಹೊಸದಾಗಿ 15 ಸಾವಿರ ಶಾಲಾ ಶಿಕ್ಷಕರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎನ್. ಮಧು ಬಂಗಾರಪ್ಪ ತಿಳಿಸಿದರು.

ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ನಂತರ ಮಾತನಾಡಿದ ಅವರು, ಶಿಕ್ಷಕರ ಕೊರತೆ ನೀಗಿಸಲು ಹೊಸದಾಗಿ ಶಿಕ್ಷಕರ ನೇಮಕಾತಿಗೆ ಸರ್ಕಾರ ಮುಂದಾಗಿದೆ. ಖಾಲಿಯಿರುವ ಶಿಕ್ಷಕರ ಹುದ್ದೆಗಳನ್ನು ಹಂತ-ಹಂತವಾಗಿ ಭರ್ತಿ ಮಾಡಲು ಕ್ರಮಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಸರ್ಕಾರಿ ಶಾಲೆಗಳಲ್ಲಿ ಕ್ಷೀಣಿಸುತ್ತಿರುವ ಮಕ್ಕಳ ಸಂಖ್ಯೆ ಹೆಚ್ಚಿಸಲು ಹಲವಾರು ವಿನೂತನ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಕ್ಕೆ ತರಲಾಗಿದೆ. ಶಾಲೆಗಳಲ್ಲಿದ್ದ ನ್ಯೂನ್ಯತೆಗಳನ್ನು ಸರಿಪಡಿಸಲಾಗಿದೆ. ಶಾಲೆಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ವಿಜ್ಞಾನ ಲ್ಯಾಬ್‌ಗಳನ್ನು ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು.

ಸರ್ಕಾರಿ ಶಾಲೆಗಳಲ್ಲಿ ಖಾಲಿಯಿರುವ ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು. ಇದರಿಂದ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತದೆ. ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ ನೀಡಲು ಮಧ್ಯಾಹ್ನದ ಬಿಸಿಯೂಟ, ಉಚಿತ ಸಮವಸ್ತ್ರ, ಪುಸ್ತಕ ಶೂ ಮತ್ತಿತರ ಸೌಲಭ್ಯಗಳನ್ನು ನೀಡಲಾಗುತ್ತಿದೆಯಲ್ಲದೆ ಈಗಿರುವ ಶಾಲೆಗಳನ್ನು ಕೆಪಿಎನ್ ಶಾಲೆಗಳನ್ನಾಗಿ ಮೇಲ್ದರ್ಜೆಗೇರಿಸಲಾಗುವುದು. ಇದರಿಂದ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಲು ಆಸಕ್ತಿ ತೋರುತ್ತಿದ್ದಾರೆ ಎಂದರು.

ಜಿಲ್ಲೆಯಲ್ಲಿ ಶತಮಾನ ಕಂಡ ಶಾಲೆಗಳನ್ನೂ ಅಭಿವೃದ್ಧಿಪಡಿಸಲಾಗುವುದು. ವಿಶೇಷ ಅನುದಾನದಡಿ ಶತಮಾನ ಕಂಡ ಶಾಲೆಗಳು ಮುಂದಿನ ಪೀಳಿಗೆಗೆ ಮಾದರಿಯಾಗುವಂತೆ ಉಳಿಸಿಕೊಂಡು ಅಭಿವೃದ್ಧಿಪಡಿಸಲಾಗುವುದು ಎಂದು ಹೇಳಿದರು.

“ನಮ್ಮ ಶಾಲೆ ನಮ್ಮ ಜವಾಬ್ದಾರಿ” ಕಾರ್ಯಕ್ರಮದಡಿ ತಾವು ಓದಿದ ಶಾಲೆಗಳ ಅಭಿವೃದ್ಧಿಗೆ ಹಲವಾರು ದಾನಿಗಳು ಆರ್ಥಿಕ ನೆರವು ನೀಡಲು ಮುಂದೆ ಬರುತ್ತಿದ್ದಾರೆ. ಶಾಲಾ ಪೀಠೋಪಕರಣ, ಲೇಖನ ಸಾಮಗ್ರಿ, ಸ್ಮಾರ್ಟ್ ತರಗತಿ ನಿರ್ಮಾಣಕ್ಕೆ ಸಹಾಯಹಸ್ತ ನೀಡುತ್ತಿದ್ದಾರೆ. ಅಲ್ಲದೆ ಈ ಕಾರ್ಯಕ್ರಮಕ್ಕೆ ಸಿಎಸ್‌ಆರ್ ನಿಧಿಯಿಂದ 1591 ಕೋಟಿ ರೂ.ಗಳನ್ನು ಸದ್ವಿನಿಯೋಗಿಸಲಾಗುತ್ತಿದೆ. ಜನಪ್ರತಿನಿಧಿಗಳು, ಅಧಿಕಾರಿಗಳೂ ಸಹ ತಾವು ಓದಿದ ಶಾಲೆಗಳ ಅಭಿವೃದ್ಧಿಗಾಗಿ ಕೊಡುಗೆಯನ್ನು ನೀಡಲು ಸಂಕಲ್ಪ ಮಾಡಬೇಕು ಎಂದು ತಿಳಿಸಿದರು.

ಜಿಲ್ಲೆಯು ಎಸ್‌ಎಸ್ಎಲ್‌ಸಿ ಫಲಿತಾಂಶದಲ್ಲಿ ಹಿಂದುಳಿದಿದೆ

ಜಿಲ್ಲೆಯು ಎಸ್.ಎಸ್.ಎಲ್.ಸಿ. ಫಲಿತಾಂಶದಲ್ಲಿ ಹಿಂದುಳಿದಿದ್ದು, ಫಲಿತಾಂಶದ ಶೇಕಡಾ ಪ್ರಮಾಣವನ್ನು ಉನ್ನತ ಮಟ್ಟಕ್ಕೆ ಏರಿಸಲು ಶಿಕ್ಷಕರು, ಅಧಿಕಾರಿಗಳು ಶ್ರಮಿಸಬೇಕೆಂದು ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಶಾಲೆ ಹಾಗೂ ಶಿಕ್ಷಕರ ಕಾರ್ಯಕ್ಷಮತೆ ಹೆಚ್ಚಿಸುವ, ಅನುಭವಾತ್ಮಕ ಕಲಿಕೆಗಾಗಿ ರೂಪಿಸಿರುವ ವಿನೂತನ ಕಾರ್ಯಕ್ರಮಗಳ ಮೂಲಕ ಜಿಲ್ಲೆಯು ಇತರ ಜಿಲ್ಲೆಗಳಿಗೆ ಮಾದರಿಯಾಗಿದೆ. ಈ ಕಾರ್ಯಕ್ರಮಗಳನ್ನು ಇತರೆ ಜಿಲ್ಲೆಗಳಿಗೆ ವಿನೂತನ ಕಾರ್ಯಕ್ರಮಗಳನ್ನು ವಿಸ್ತರಿಸಲಾಗುವುದೆಂದರು.

ಇದಕ್ಕೂ ಮುನ್ನ ನಡೆದ ಇಲಾಖಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಮಾತನಾಡಿ, ತುಮಕೂರು ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಗಳ ಪ್ರಗತಿ ಮಾಹಿತಿಯನ್ನು ಸಚಿವರಿಗೆ ತಿಳಿಸುತ್ತಾ, ಜಿಲ್ಲೆಯಲ್ಲಿ ಸರ್ಕಾರಿ, ಅನುದಾನಿತ ಹಾಗೂ ವಸತಿ ಶಾಲೆ ಸೇರಿದಂತೆ ಒಟ್ಟು 3873 ಶಾಲೆಗಳಿದ್ದು, 2,10,183 ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ, ಜಿಲ್ಲೆಗೆ ಮಂಜೂರಾದ ಶಿಕ್ಷಕರ, ಕಾರ್ಯನಿರ್ವಹಿಸುತ್ತಿರುವ ಹಾಗೂ ಖಾಲಿ ಹುದ್ದೆಗಳ ಅಂಕಿ-ಅಂಶಗಳ ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ 435 ಶಾಲೆಗಳಿಗೆ ಆವರಣ ಗೋಡೆ, 550 ಶೌಚಾಲಯ, 247 ಶಾಲಾ ಆಟದ ಮೈದಾನಗಳನ್ನು ನಿರ್ಮಿಸಲಾಗಿದ್ದು, 1347 ನಿರ್ಮಾಣ ಕಾಮಗಾರಿಗಳು ಪ್ರಗತಿಯಲ್ಲಿವೆ. ಜಿಲ್ಲೆಯಲ್ಲಿ 2024-25ನೇ ಸಾಲಿನಲ್ಲಿ 479 ಹೊಸ ಶಾಲಾ ಕೊಠಡಿಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದ್ದು, ಸರ್ಕಾರದಿಂದ 71 ಕೋಟಿ ರೂ.ಗಳ ಅನುದಾನವನ್ನು ನಿರೀಕ್ಷಿಸಲಾಗಿದೆ ಎಂದು ಸಚಿವರ ಗಮನಕ್ಕೆ ತಂದರು.

ನರೇಗಾ ಯೋಜನೆಯಡಿ ಶಾಲೆಗಳಲ್ಲಿ ವಿದ್ಯಾರ್ಥಿನಿಯರಿಗಾಗಿ ಗುಲಾಬಿ ಬಣ್ಣದ ಹಾಗೂ ವಿದ್ಯಾರ್ಥಿಗಳಿಗಾಗಿ ನೀಲಿ ಬಣ್ಣದ ಪ್ರತ್ಯೇಕ ಶೌಚಾಲಯಗಳನ್ನು ನಿರ್ಮಾಣ ಮಾಡಿ 24*7 ನೀರು ಪೂರೈಕೆ ಇರುವಂತೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಶಾಸಕ ಸುರೇಶ್ ಗೌಡ, ಡಿಡಿಪಿಐಗಳಾದ ಮನಮೋಹನ ಹಾಗೂ ಗಿರಿಜಾ, ಡಯಟ್ ಪ್ರಾಂಶುಪಾಲ ಮಂಜುನಾಥ, ಡಿಡಿಪಿಯು ಬಾಲಗುರುಮೂರ್ತಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಈ ಸುದ್ದಿಯನ್ನೂ ಓದಿ | Union Budget 2025: ಬಜೆಟ್‌ನಲ್ಲಿ ಶಾಲಾ ಶಿಕ್ಷಣಕ್ಕೆ ಉತ್ತೇಜನ ಶ್ಲಾಘನೀಯ: ಶಿಕ್ಷಣ ತಜ್ಞ ಪ್ರೊ.ಎಂ.ಆರ್.ದೊರೆಸ್ವಾಮಿ

image

ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷಾ ನಕಲನ್ನು ತಡೆಗಟ್ಟಿ ಕಟ್ಟುನಿಟ್ಟಾಗಿ ಪರೀಕ್ಷೆ ನಡೆಸಲು ವೆಬ್‌ಕಾಸ್ಟಿಂಗ್ ಪದ್ಧತಿಯನ್ನು ಅನುಷ್ಠಾನಕ್ಕೆ ತರಲಾಗಿದೆ. ಪ್ರಾಥಮಿಕ ಹಂತದಲ್ಲಿಯೇ ವಿದ್ಯಾರ್ಥಿಗಳಲ್ಲಿ ಶಿಸ್ತು ಮೂಡಿಸಿದರೆ ಅವರ ಮುಂದಿನ ಭವಿಷ್ಯ ಉತ್ತಮವಾಗಲಿದೆ ಎಂಬ ಉದ್ದೇಶದಿಂದ ಈ ಪದ್ಧತಿಯನ್ನು ಅಳವಡಿಸಿಕೊಳ್ಳಲಾಗಿದೆ. ಮಕ್ಕಳ ದಾಖಲಾತಿಯನ್ನು ಹೆಚ್ಚಿಸಿಕೊಳ್ಳಲು ಶಾಲೆಗಳು ಪರೀಕ್ಷಾ ನಕಲಿಗೆ ಅವಕಾಶ ಮಾಡಿಕೊಡಬಾರದು. ಇದರಿಂದ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ವೆಬ್‌ಕಾಸ್ಟಿಂಗ್ ಪದ್ಧತಿಯಿಂದ ಮಕ್ಕಳಲ್ಲಿಯೂ ಕಲಿಕಾ ಸಾಮರ್ಥ್ಯ ಹೆಚ್ಚಾಗಿದೆಯಲ್ಲದೆ, ಪೋಷಕರಿಗೂ ಸರ್ಕಾರಿ ಶಾಲೆಗಳ ಮೇಲೆ ವಿಶ್ವಾಸ ಮೂಡಿದೆ

ಮಧು ಬಂಗಾರಪ್ಪ, ಶಿಕ್ಷಣ ಸಚಿವ
Kichcha Sudeep and Rajath Kishan
7:31 AM January 29, 2025

Rajath BBK 11: ಫಿನಾಲೆಯಲ್ಲಿ ಯುವನ್​ಗೆ ಸುದೀಪ್ ಗಿಫ್ಟ್ ಕೊಟ್ಟ ಚೈನ್ ಬೆಲೆ ಎಷ್ಟು?, ರಜತ್ ಏನಂದ್ರು?

Bus accident
6:06 PM January 25, 2025

Bus Accident: ಬಸ್‌ನಿಂದ ತಲೆ ಹೊರ ಹಾಕಿದ ಮಹಿಳೆ; ಲಾರಿ ಡಿಕ್ಕಿಯಾಗಿ ತುಂಡಾಗಿ ಬಿದ್ದ ರುಂಡ!

Robbery
3:26 PM January 28, 2025

Robbery: ತಿಪಟೂರು ಎಪಿಎಂಸಿ ಮಾರುಕಟ್ಟೆಯಿಂದ 3,635 ಕೆಜಿ ಕೊಬ್ಬರಿ ಹೊತ್ತೊಯ್ದ ಕಳ್ಳರು

Lokayukta Raid in T.Begur
10:22 PM January 24, 2025

Lokayukta Raid: 5 ಬಾರಿ ಸಸ್ಪೆಂಡ್‌ ಆದ್ರೂ ತೀರದ ಲಂಚದ ದಾಹ; 20 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಟಿ.ಬೇಗೂರು ಪಿಡಿಒ

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

BBK 11 Final Elimination (1)
7:49 PM January 25, 2025

BBK 11 Final: ಬಿಗ್ ಬಾಸ್ ಫಿನಾಲೆಯಲ್ಲಿ ನಡೆಯಿತು ಎರಡು ಶಾಕಿಂಗ್ ಎಲಿಮಿನೇಷನ್: ಔಟ್ ಆಗಿದ್ದು ಇವರೇ

Hanumantha BBK 11 Winner
8:44 PM January 26, 2025

BBK 11 Winner: ಅಧಿಕೃತ ಘೋಷಣೆಗು ಮುನ್ನವೇ ರಿವೀಲ್ ಆಯ್ತು ಬಿಗ್ ಬಾಸ್ ಸೀಸನ್ 11ರ ವಿನ್ನರ್ ಯಾರೆಂದು: ಇವರೇ ನೋಡಿ

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?