ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Tumkur News: ನ.22ರಂದು ತುಮಕೂರಿನ ಸಾಹೇ ವಿವಿಯ 14ನೇ ಘಟಿಕೋತ್ಸವ; 15 ಮಂದಿಗೆ ಚಿನ್ನದ ಪದಕ, 1086 ವಿದ್ಯಾರ್ಥಿಗಳಿಗೆ ಪದವಿ

SSAHE 14th Convocation: ತುಮಕೂರು ನಗರದ ಅಗಳಕೋಟೆಯಲ್ಲಿರುವ ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನ ಎಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ನ.22ರಂದು ಶನಿವಾರ ಬೆಳಗ್ಗೆ 10.30ಕ್ಕೆ ಶ್ರೀ ಸಿದ್ಧಾರ್ಥ ಆಕಾಡೆಮಿ ಆಫ್ ಹೈಯರ್ ಎಜುಕೇಷನ್ (ಸಾಹೇ) ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವ ಆಯೋಜಿಸಲಾಗಿದೆ.

ತುಮಕೂರಿನ ಸಾಹೇ ಕುಲಪತಿ ಡಾ.ಕೆ.ಬಿ. ಲಿಂಗೇಗೌಡ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ತುಮಕೂರು, ನ.20: ನಗರದ ಅಗಳಕೋಟೆಯಲ್ಲಿರುವ (Tumkur News) ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನ ಎಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ನ.22ರಂದು ಶನಿವಾರ ಬೆಳಗ್ಗೆ 10.30ಕ್ಕೆ ಶ್ರೀ ಸಿದ್ಧಾರ್ಥ ಆಕಾಡೆಮಿ ಆಫ್ ಹೈಯರ್ ಎಜುಕೇಷನ್ (ಸಾಹೇ) ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವ ಆಯೋಜಿಸಲಾಗಿದೆ ಎಂದು ಸಾಹೇ ವಿಶ್ವವಿದ್ಯಾನಿಲಯದ ಕುಲಪತಿ ಡಾ.ಕೆ.ಬಿ. ಲಿಂಗೇಗೌಡ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 14ನೇ ಸಾಹೇ ಘಟಿಕೋತ್ಸವದಲ್ಲಿ ಪಾವಗಡದ ಶ್ರೀ ರಾಮಕೃಷ್ಣ ವಿವೇಕಾನಂದ ಆಶ್ರಮದ ಸಂಸ್ಥಾಪಕರಾದ ಶ್ರೀ ಸ್ವಾಮಿ ಜಪಾನಂದಜಿ ಮಹಾರಾಜ್ ಹಾಗೂ ಭಾರತೀಯ ವಿಜ್ಞಾನ ಸಂಸ್ಥೆಯ ಏರೋಸ್ಪೇಸ್ ಇಂಜಿನಿಯರಿಂಗ್‌ನ ವಿಶ್ರಾಂತ ಪ್ರಾಧ್ಯಾಪಕ ಡಾ.ಕೆ.ಪಿ.ಜೆ. ರೆಡ್ಡಿ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುತ್ತಿದೆ ಎಂದು ಹೇಳಿದರು.

ಸಂಸದ ಜಯರಾಮ್ ರಮೇಶ್ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ಸಾಹೇ ವಿಶ್ವವಿದ್ಯಾಲಯದ ಕುಲಾಧಿಪತಿ ಜಿ. ಪರಮೇಶ್ವರ್ ಘಟಿಕೋತ್ಸವದಲ್ಲಿ ಪದವಿ ಪ್ರಮಾಣ ಗೌಪ್ಯತೆಯನ್ನು ಬೋಧಿಸಿ, ಪ್ರಮಾಣ ಪತ್ರಗಳನ್ನು ವಿತರಿಸಲಿದ್ದಾರೆ ಹಾಗೂ ಘಟಿಕೋತ್ಸವದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಟ್ರಸ್ಟಿಗಳಾದ ಕನ್ನಿಕಾ ಪರಮೇಶ್ವರಿ ಮತ್ತು ಡಾ.ಜಿ.ಎಸ್.ಆನಂದ್ ಗೌರವಾನ್ವಿತ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.

ಸಾಹೇ ವಿಶ್ವವಿದ್ಯಾನಿಲಯದ ಕುಲಪತಿ ಡಾ.ಕೆ.ಬಿ. ಲಿಂಗೇಗೌಡ, ಕುಲಸಚಿವ ಡಾ. ಅಶೋಕ್ ಮೆಹತಾ, ಸಾಹೇ ವಿಶ್ವವಿದ್ಯಾನಿಲಯದ ಪರೀಕ್ಷಾಂಗ ವಿಭಾಗದ ನಿಯಂತ್ರಕ ಡಾ.ಗುರುಶಂಕರ್ ಸಿ, ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ. ಸಾಣಿಕೊಪ್ಪ, ಡೆಂಟಲ್ ಕಾಲೇಜಿನ ಪ್ರಾಂಶುಪಾಲ ಡಾ. ಬಿ. ಪ್ರವೀಣ್ ಕುಡುವ, ವೈದ್ಯಕೀಯ ಕಾಲೇಜಿನ ಉಪ ಪ್ರಾಂಶುಪಾಲ ಡಾ.ಪ್ರಭಾಕರ್ ಜಿ.ಎನ್., ಉಪ ಕುಲಸಚಿವ ಡಾ. ಸುದೀಪ್ ಕುಮಾರ್, ಟಿ. ಬೇಗೂರಿನ ಶ್ರೀ ಸಿದ್ಧಾರ್ಥ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರದ ಪ್ರಾಂಶುಪಾಲ ಡಾ. ದಿವಾಕರ್, ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಎಂ.ಎಸ್. ರವಿಪ್ರಕಾಶ ಸೇರಿದಂತೆ ಎಲ್ಲಾ ವಿಭಾಗಗಳ ಮುಖ್ಯಸ್ಥರುಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಮತ್ತು ಪೋಷಕರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಸಾಹೇ ವಿಶ್ವವಿದ್ಯಾನಿಲಯದ ಕುಲಸಚಿವ ಡಾ. ಅಶೋಕ್ ಮೆಹತಾ, ಪರೀಕ್ಷಾಂಗ ವಿಭಾಗದ ನಿಯಂತ್ರಕ ಡಾ. ಗುರುಶಂಕರ್, ಡೆಂಟಲ್ ಕಾಲೇಜಿನ ಪ್ರಾಂಶುಪಾಲ ಡಾ. ಬಿ. ಪ್ರವೀಣ್ ಕುಡುವ, ವೈದ್ಯಕೀಯ ಕಾಲೇಜಿನ ಉಪ ಪ್ರಾಂಶುಪಾಲ ಡಾ. ಪ್ರಭಾಕರ್ ಜಿ.ಎನ್., ಉಪ ಕುಲಸಚಿವ ಡಾ. ಸುದೀಪ್ ಕುಮಾರ್ ಮತ್ತು ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಎಂ.ಎಸ್. ರವಿಪ್ರಕಾಶ ಉಪಸ್ಥಿತರಿದ್ದರು. ‌

ಈ ಸುದ್ದಿಯನ್ನೂ ಓದಿ | BWSSB Recruitment 2025: ಬೆಂಗಳೂರು ಜಲಮಂಡಳಿಯ 224 ಹುದ್ದೆಗೆ ಅರ್ಜಿ ಆಹ್ವಾನ; ಕೆಇಎ ಅಧಿಸೂಚನೆ

ರ‍್ಯಾಂಕ್ ವಿವರಗಳು

ಎಂಜಿನಿಯರಿಂಗ್, ವೈದ್ಯಕೀಯ, ದಂತ ವೈದ್ಯಕೀಯ, ಪಿಎಚ್‌ಡಿ ಸೇರಿದಂತೆ ಒಟ್ಟು 1086 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು. ಒಟ್ಟು ಸ್ನಾತಕ ಮತ್ತು ಸ್ನಾತಕೋತ್ತರ ಪದವಿಗಳು: 1086, ಡಾಕ್ಟರೇಟ್ ಪದವಿ-14 ಸೇರಿದಂತೆ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಚಿನ್ನದ ಪದಕವನ್ನು ವಿತರಿಸಲಾಗುತ್ತದೆ.