Chikkanayakanahalli News: ಸ್ನೇಹಿತೆಯನ್ನು ಕರೆಸಿ ಗೆಳೆಯರೊಂದಿಗೆ ಸಾಮೂಹಿಕ ಅತ್ಯಾಚಾರ ಎಸಗಿದ ಧೂರ್ತ!
Chikkanayakanahalli News: ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಕಂದಿಕೆರೆ ಹೋಬಳಿಯ ಆಶ್ರೀಹಾಲ್ ಗ್ರಾಮದಲ್ಲಿ ಘಟನೆ ನಡೆದಿದೆ. ಈ ಸಂಬಂಧ ಚಿಕ್ಕನಾಯಕನಹಳ್ಳಿ ಪೋಲೀಸ್ ಠಾಣೆ ಪೋಲೀಸರು ಪ್ರಕರಣ ದಾಖಲಿಸಿಕೊಂಡು, ಮೂವರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.


ಚಿಕ್ಕನಾಯಕನಹಳ್ಳಿ: 19 ವರ್ಷದ ಯವತಿಯೊಬ್ಬಳನ್ನು ಆಕೆಯ ಸ್ನೇಹಿತನೇ ಕರೆಸಿ, ತನ್ನ ಗೆಳೆಯರ ಜತೆ ಸೇರಿ ಸಾಮೂಹಿಕ ಅತ್ಯಾಚಾರ ಎಸಗಿರುವುದು ತಾಲೂಕಿನ (Chikkanayakanahalli News) ಕಂದಿಕೆರೆ ಹೋಬಳಿಯ ಆಶ್ರೀಹಾಲ್ ಗ್ರಾಮದಲ್ಲಿ ನಡೆದಿದೆ. ಜೂನ್ 9ರ ರಾತ್ರಿ 10.30 ರ ಸುಮಾರಿಗೆ, ಆರೋಪಿಯು ಪೋನ್ ಕರೆ ಮಾಡಿ ಯುವತಿಯನ್ನು ಮಾತನಾಡಬೇಕು ಎಂದು ಆಚೆ ಕರೆಸಿಕೊಂಡಿದ್ದಾನೆ. ಆಕೆ ಬಂದಾಗ ಆಕೆಯ ಬಾಯಿಗೆ ವೇಲ್ ಕಟ್ಟಿ ತನ್ನ ಸ್ನೇಹಿತರೊಂದಿಗೆ ನಿರ್ಜನ ಪ್ರದೇಶಕ್ಕೆ ಎಳೆದೊಯ್ದಿದ್ದಾನೆ. ಅಲ್ಲಿ ಆತ ಮೊದಲು ಆತ್ಯಾಚಾರ ಮಾಡಿ, ನಂತರ ತನ್ನ ಸ್ನೇಹಿತರಿಂದಲೂ ಆತ್ಯಾಚಾರ ಮಾಡಿಸಿದ್ದಾನೆ.
ಅತ್ಯಾಚಾರದ ನಂತರ ಯುವತಿಯು ತೀವ್ರ ಅಸ್ವಸ್ಥಳಾಗಿದ್ದಳು. ಆರೋಪಿಗಳು ಈ ವಿಷಯವನ್ನು ಯಾರಿಗಾದರೂ ಹೇಳಿದರೆ ನಿನ್ನನ್ನು ಮತ್ತು ನಿನ್ನ ಹೆತ್ತವರನ್ನು ಸಾಯಿಸುತ್ತೇವೆ ಎಂದು ಬೆದರಿಸಿ ಅಲ್ಲಿಂದ ಓಡಿಹೋಗಿದ್ದಾರೆ. ಯುವತಿ ಹೇಗೋ ಮನೆಗೆ ಬಂದು ತನಗಾದ ಅನ್ಯಾಯವನ್ನು ತಾಯಿಗೆ ತಿಳಿಸಿದ್ದಾಳೆ. ಆದರೆ ಆರೋಪಿಗಳ ಬೆದರಿಕೆಯಿಂದ ಹೆದರಿ ತಾಯಿ ಮತ್ತು ಮಗಳು ಕೃತ್ಯ ಎಸಗಿದ ಆರೋಪಿಗಳ ಬಗ್ಗೆ ಏನನ್ನೂ ಹೇಳದೆ ಸುಮ್ಮನಾಗಿದ್ದಾರೆ. ಕೆಲವು ದಿನಗಳ ನಂತರ ಹುಡುಗಿಯ ತಾಯಿ ವಿಷಯವನ್ನು ಬಹಿರಂಗಪಡಿಸಿದ್ದಾರೆ.
ಸಂತ್ರಸ್ತೆಯ ತಂದೆಗೆ ಈ ವಿಚಾರ ತಿಳಿದಾಗ ಮತ್ತೊಬ್ಬರ ಸಹಾಯದಿಂದ ಚಿಕ್ಕನಾಯಕನಹಳ್ಳಿ ಪೋಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಪೋಲೀಸರು ಪ್ರಕರಣ ದಾಖಲಿಸಿಕೊಂಡು ಮೂವರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಈ ಸುದ್ದಿಯನ್ನೂ ಓದಿ | Murder Case: ಶಾಪಿಂಗ್ ಹೋಗಿದ್ದಕ್ಕೆ ಪತ್ನಿಯ ಕುತ್ತಿಗೆ ತುಳಿದು, ಉಸಿರುಗಟ್ಟಿಸಿ ಕೊಂದ ಪತಿ!
ಸ್ನೇಹಿತನ ಮನೆಗೆ ಹೋಗಿದ್ದ ಮಹಿಳೆ ಮೇಲೆ ಗ್ಯಾಂಗ್ ರೇಪ್
ಆನೇಕಲ್: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಹೀನ ಕೃತ್ಯ ನಡೆದಿದೆ. ಸ್ನೇಹಿತನ ಮನೆಗೆ ಬಂದಿದ್ದ ಮಹಿಳೆ ಮೇಲೆ ಇಬ್ಬರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಬೆಂಗಳೂರಿನ ದೊಡ್ಡ ನಾಗಮಂಗಲದ ಸಾಯಿ ಲೇಔಟ್ನಲ್ಲಿ ಈ ಘಟನೆ ನಡೆದಿದ್ದು, ಈ ಸಂಬಂಧ ದೂರು ದಾಖಲಾಗಿದೆ. ಮೂರು ದಿನಗಳ ಹಿಂದೆ ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಸಂತ್ರಸ್ತೆ ದೊಡ್ಡ ನಾಗಮಂಗಲ ಸಾಯಿ ಲೇಔಟ್ನಲ್ಲಿರುವ ಸ್ನೇಹಿತನ ಮನೆಗೆ ಹೋಗಿದ್ದರು. ಈ ವೇಳೆ ಮನೆಯೊಳಗೆ ಬಂದ ಇಬ್ಬರು ವ್ಯಕ್ತಿಗಳು, ಪೊಲೀಸರಿಗೆ ದೂರು ನೀಡುವುದಾಗಿ ಹೆದರಿಸಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಹೇಳಲಾಗಿದೆ.
ಹಣಕ್ಕೂ ಡಿಮ್ಯಾಂಡ್
ದುಷ್ಕರ್ಮಿಗಳು ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಬಳಿಕ ಆಕೆಯ ಬಳಿ ಹಣಕ್ಕೂ ಡಿಮ್ಯಾಂಡ್ ಮಾಡಿದ್ದಾರೆ. ಆಗ, ಸಂತ್ರಸ್ತೆ ತನ್ನ ಸ್ನೇಹಿತೆಯ ಅಕೌಂಟ್ನಿಂದ ಹಣ ನೀಡಿದ್ದಾಳೆ. ಆರೋಪಿಗಳು, ಈ ಹಣವನ್ನು ಬೆಟ್ಟಿಂಗ್ ಆ್ಯಪ್ ಅಕೌಂಟ್ಗೆ ಹಾಕಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಅಲ್ಲದೆ ಸಂತ್ರಸ್ತೆ ಮತ್ತು ಆಕೆಯ ಸ್ನೇಹಿತನ ಮೊಬೈಲ್ ಅನ್ನು ಕಿಡಿಗೇಡಿಗಳು ಕಸಿದುಕೊಂಡಿದ್ದಾರೆ. ಸಾಲದಕ್ಕೆ ಮನೆಯಲ್ಲಿದ್ದ ಪ್ರಿಡ್ಜ್, ವಾಷಿಂಗ್ ಮಷಿನ್ ಹೊತ್ತೊಯ್ದಿದ್ದಾರೆ.
ಘಟನೆ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಿಸಿ ಕ್ಯಾಮೆರಾ ದೃಶ್ಯ ಆಧರಿಸಿ ಪೊಲೀಸರು ಮೂವರು ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಈ ಸುದ್ದಿಯನ್ನೂ ಓದಿ | Murder Case: ಮಹಿಳೆಯ ಮೈಮೇಲಿನ ದೆವ್ವ ಬಿಡಿಸಲು ಯದ್ವಾತದ್ವಾ ಹೊಡೆತ, ಸಾವು