ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

M L A T B Jayachandra: ನಿವೇಶನ ಹಂಚಿಕೆಯಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರ ನಡೆಯಬಾರದು

ಸೆಪ್ಟಂಬರ್ ತಿಂಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶಿರಾ ಕ್ಷೇತ್ರಕ್ಕೆ ಭೇಟಿ ಕೊಡುವು ದರಿಂದ ನಾವು ಕನಿಷ್ಠ 10 ರಿಂದ 15 ಸಾವಿರ ನಿವೇಶನಗಳನ್ನು ಬಡವರಿಗೆ ಹಂಚುವ ಕಾರ್ಯ ಕೈಗೊಳ್ಳಬೇಕಾಗಿದೆ. ನಿವೇಶನ ಹಂಚಿಕೆಯಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರ ನಡೆಯಬಾರದು, ಅರ್ಹ ಫಲಾನುಭವಿ ಗಳಿಗೆ ಮಾತ್ರ ನಿವೇಶನ ಸಿಗಬೇಕು

ನಿವೇಶನ ಹಂಚಿಕೆಯಲ್ಲಿ ಭ್ರಷ್ಟಾಚಾರ ನಡೆಯಬಾರದು

Ashok Nayak Ashok Nayak Aug 5, 2025 12:07 AM

ಶಿರಾ: ಸೆಪ್ಟಂಬರ್ ತಿಂಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶಿರಾ ಕ್ಷೇತ್ರಕ್ಕೆ ಭೇಟಿ ಕೊಡುವು ದರಿಂದ ನಾವು ಕನಿಷ್ಠ 10 ರಿಂದ 15 ಸಾವಿರ ನಿವೇಶನಗಳನ್ನು ಬಡವರಿಗೆ ಹಂಚುವ ಕಾರ್ಯ ಕೈಗೊಳ್ಳಬೇಕಾಗಿದೆ. ನಿವೇಶನ ಹಂಚಿಕೆಯಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರ ನಡೆಯಬಾರದು, ಅರ್ಹ ಫಲಾನುಭವಿಗಳಿಗೆ ಮಾತ್ರ ನಿವೇಶನ ಸಿಗಬೇಕು ಎಂದು ಶಾಸಕ ಹಾಗೂ ಕರ್ನಾಟಕ ಸರ್ಕಾರದ ದೆಹಲಿಯ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ (M L A T B Jayachandra) ತಿಳಿಸಿದರು.

ಅವರು ದಿನಾಂಕ  5 8 2025ರ ಸೋಮವಾರದಂದು ತಾಲೂಕು ಪಂಚಾಯಿತಿ ಕಚೇರಿಯಲ್ಲಿ ನವೀಕರಿಸಿದ ಶಾಸಕರ ಕೊಠಡಿಯನ್ನು ಉದ್ಘಾಟಿಸಿ ಮಾತನಾಡಿದರು.

ಈಗಾಗಲೇ ಎರಡು ವರ್ಷ ಅಧಿಕಾರವನ್ನು ನಾವು ಪೂರೈಸಿದ್ದೇವೆ, 2 ವರ್ಷದ ಅವಧಿಯಲ್ಲಿ ನಾವು ಕೈಗೊಂಡ ಕಾರ್ಯಗಳು ಹಾಗೂ ಮುಂದೆ ಕೈಗೊಳ್ಳಬೇಕಾದ ಕಾರ್ಯಗಳ ಬಗ್ಗೆ ಅಧಿಕಾರಿಗಳೊಡನೆ ಚರ್ಚಿಸಲಿದ್ದೇವೆ.

ಇದನ್ನೂ ಓದಿ: Tumkur news: ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪರ ಸರಕಾರಿ ನೌಕರರ ಅಭಿಯಾನ

ತಾಲೂಕಿನಲ್ಲಿ ಈ ಬಾರಿ ನಿರೀಕ್ಷಿಸಿದ ಮಟ್ಟದಲ್ಲಿ ಮಳೆಯಾಗಲಿಲ್ಲ, ಆದರೂ ಕೂಡ ಕಳೆದ ಒಂದು ತಿಂಗಳಿಂದ ನಮ್ಮ ಕೆರೆಗೆ ಹೇಮಾವತಿ ನೀರು ಹರಿದಿದೆ, ಕೆರೆ ತುಂಬಲು ಇನ್ನು ನಾಲ್ಕು ಅಡಿ ಮಾತ್ರ ಬಾಕಿ ಇದೆ. ಮಳೆ ಬರುವ ನಿರೀಕ್ಷೆ ಇದ್ದು ಎಲ್ಲಾ  ಕೆರೆಗಳು ತುಂಬುವ ಭರವಸೆ ಇದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ನಗರ ಸಭೆ ಅಧ್ಯಕ್ಷ ಜೀಶನ್ ಮೊಹಮ್ಮದ್, ಉಪಾಧ್ಯಕ್ಷ ಲಕ್ಷ್ಮಿಕಾಂತ್,ನಗರಸಭೆ ಆಯುಕ್ತ ರುದ್ರೇಶ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಹರೀಶ್, ಕಾಂಗ್ರೆಸ್ ಗ್ರಾಮಾಂತರ ಅಧ್ಯಕ್ಷ ನಟರಾಜ್, ನಗರಸಭೆ ಸ್ಥಾಯಿ ಸಮಿತಿಯ ಅಧ್ಯಕ್ಷ ಅಜಯ್ ಕುಮಾರ್, ಯೂಥ್ ಕಾಂಗ್ರೆಸ್ ಅಧ್ಯಕ್ಷ ಅಂಜನ್ ಕುಮಾರ್, ನಗರ ಸಭೆ ಸದಸ್ಯರುಗಳಾದ ಶಂಕ್ರಪ್ಪ ರಾಧಾಕೃಷ್ಣ, ಮುಖಂಡರುಗಳಾದ ಶೋಭಾ ನಾಗರಾಜ್, ಲಕ್ಷ್ಮಿದೇವಮ್ಮ, ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.