ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ತಿಪಟೂರಿನಲ್ಲಿ ರೋಟರಿ ಗುಲ್ಮೊಹರ್‌ ಸಂಸ್ಥೆಯಿಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಮಾದರಿ ಪ್ರಶ್ನೆ ಪತ್ರಿಕೆ ವಿತರಣೆ

Tiptur News: ಹತ್ತನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ರೋಟರಿ ಗುಲ್ಮೊಹರ್ ಬೆಂಗಳೂರು ಸಂಸ್ಥೆಯ ವತಿಯಿಂದ ಉಚಿತವಾಗಿ ಮಾದರಿ ಪ್ರಶ್ನೆ ಪತ್ರಿಕೆಯ ವಿತರಣೆ ಕಾರ್ಯಕ್ರಮ ತಿಪಟೂರು ತಾಲೂಕಿನ ಕ್ಷೇತ್ರ ಶಿಕ್ಷಣ ಅಧಿಕಾರಿಗಳ ಕಚೇರಿ ಆವರಣದಲ್ಲಿ ಜರುಗಿತು.

ತಿಪಟೂರು, ಸೆ.23: ರೋಟರಿ ಗುಲ್ಮೊಹರ್ ಬೆಂಗಳೂರು ಸಂಸ್ಥೆಯ ವತಿಯಿಂದ ಹತ್ತನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತವಾಗಿ ಮಾದರಿ ಪ್ರಶ್ನೆ ಪತ್ರಿಕೆಯ ವಿತರಣೆ ಕಾರ್ಯಕ್ರಮ ನಗರದ (Tiptur News) ಕ್ಷೇತ್ರ ಶಿಕ್ಷಣ ಅಧಿಕಾರಿಗಳ ಕಚೇರಿ ಆವರಣದಲ್ಲಿ ಜರುಗಿತು.

ಕಳೆದ ಬಾರಿ ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಜಿಲ್ಲೆಯಲ್ಲೇ ಅತಿ ಹೆಚ್ಚು ಫಲಿತಾಂಶ ಪಡೆಯಲು ತಾಲೂಕಿನ ವಿದ್ಯಾರ್ಥಿಗಳಿಗೆ ನೆರವಾದ ಮಾದರಿ ಪ್ರಶ್ನೆ ಪತ್ರಿಕೆಯನ್ನು,ರೋಟರಿ ಗುಲ್ಮೊಹರ್ ಸಂಸ್ಥೆಯು ವಿತರಿಸಿತ್ತು. ಅದೇ ರೀತಿ ಈ ಬಾರಿಯೂ ಮಾದರಿ ಪ್ರಶ್ನೆ ಪತ್ರಿಕೆಯನ್ನು,ತಾಲೂಕಿನ ಸರಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

17 ನಿಮಿಷದಲ್ಲೇ ಡ್ರೋನ್ ಜೋಡಿಸಿ ʼಇಂಟರ್‌ನ್ಯಾಷನಲ್‌ ಬುಕ್ ಆಫ್ ರೆಕಾರ್ಡ್ಸ್ʼ ಸೇರಿದ ಸೊರಬದ ಬಾಲಕ ವಿರಾಟ್!

ತಾಲೂಕಿನ ಒಟ್ಟು ಹತ್ತನೇ ತರಗತಿಯಲ್ಲಿ ವಾಸಂಗ ಮಾಡುತ್ತಿರುವ 1,800 ವಿದ್ಯಾರ್ಥಿಗಳಿಗೆ ಒಟ್ಟು 3,600 ಪುಸ್ತಕಗಳನ್ನು ವಿತರಿಸಲಾಗುತ್ತದೆ. ಈ ಸಂದರ್ಭದಲ್ಲಿ ರೋಟರಿ ಗುಲ್ಮೊಹರ್ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಡಾ. ಮುರಳಿ ಕೃಷ್ಣ, ಕಾರ್ಯನಿರ್ವಹಣಾಧಿಕಾರಿ ಸುದರ್ಶನ್, ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಮಣಿ, ಉಮೇಶ್, ಕೃಷ್ಣಪ್ರಸಾದ್, ಕೈವಲ್ಯ ಸೇರಿದಂತೆ ಸಿಬ್ಬಂದಿ ಹಾಜರಿದ್ದರು.