ತಿಪಟೂರು, ಆ.27: ಗ್ರಾಮೀಣ ಭಾಗದ ಜನರ ಅನುಕೂಲಕ್ಕೆಂದು ಕೆಎಸ್ಆರ್‌ಟಿಸಿ ವತಿಯಿಂದ ಹಳ್ಳಿಗಾಡುಗಳಲ್ಲಿ ಸಂಚರಿಸುವ ಬಸ್ಸುಗಳು ಪದೇ ಪದೇ ಕೆಟ್ಟು ನಿಲ್ಲುತ್ತಿರುವುದರಿಂದ ಪ್ರಯಾಣಿಕರು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದ್ದು, ಕೂಡಲೇ ಗ್ರಾಮೀಣ ಭಾಗದ ಜನರ ಅನುಕೂಲಕ್ಕಾಗಿ ಉತ್ತಮ ಗುಣಮಟ್ಟವುಳ್ಳ ಬಸ್ಸುಗಳ ಸೌಲಭ್ಯವನ್ನು ಕಲ್ಪಿಸಿಕೊಡಬೇಕು ಎಂದು ಪ್ರಯಾಣಿಕರು ಹಾಗೂ ಸಾರ್ವಜನಿಕರು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದಾರೆ.
ಸರ್ಕಾರವು ದೂರದ ಊರುಗಳಿಗೆ ಹಾಗೂ ನಗರ ಪ್ರದೇಶಗಳಲ್ಲಿ ಸಂಚರಿಸುತ್ತಿದ್ದ ಬಸ್ಸುಗಳು ತಮ್ಮ ಸದೃಢತೆಯನ್ನು (ವೆಹಿಕಲ್ ಫಿಟ್ನೆಸ್ ) ಕಳೆದುಕೊಂಡಿರುವಂತಹ ಬಸ್ಸುಗಳಿಗೆ ಹೊಸದಾಗಿ ಸುಣ್ಣ ಬಣ್ಣ ಬಳೆದು ಗ್ರಾಮೀಣ ಭಾಗದ ರಸ್ತೆಗಳಲ್ಲಿ ಸಂಚರಿಸಲು ಬಿಟ್ಟಿದ್ದು,ಅದರಲ್ಲಿ ಕೆಲವೊಂದಷ್ಟು ಬಸ್ಸುಗಳು ತಿಂಗಳಿಗೆ 3-4 ಬಾರಿ ಎಲ್ಲೆಂದರಲ್ಲಿ ಕೈ ಕೊಟ್ಟು ನಿಲ್ಲುತ್ತಿವೆ,ಇದರಿಂದಾಗಿ ಬಹಳಷ್ಟು ತೊಂದರೆಯಾಗುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
Yuva Samvada; ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ ಅತ್ಯಗತ್ಯ: ಡಿಸಿ ಶುಭ ಕಲ್ಯಾಣ್
ಬಸ್‌ಗಳು ಪದೇ ಪದೇ ಕೆಟ್ಟು ನಿಲ್ಲುವುದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುವಂತಾಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ. ಪ್ರಯಾಣಿಕರು ಸರಿಯಾದ ಸಮಯಕ್ಕೆ ತಮ್ಮ ತಮ್ಮ ಊರು ಮತ್ತು ಮನೆ ಸೇರಲು ಆಗದೆ ಸಾಕಷ್ಟು ತೊಂದರೆಯಾಗುತ್ತಿದೆ, ಕೂಡಲೇ ಗ್ರಾಮೀಣ ಭಾಗದ ಜನರ ಅನುಕೂಲಕ್ಕಾಗಿ ಉತ್ತಮ ಗುಣಮಟ್ಟವುಳ್ಳ ಬಸ್ಸುಗಳ ಸೌಲಭ್ಯವನ್ನು ಕಲ್ಪಿಸಿಕೊಡಬೇಕು ಎಂದು ಪ್ರಯಾಣಿಕರು ಹಾಗೂ ಸಾರ್ವಜನಿಕರು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದಾರೆ.