ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Tiptur News: ತಿಪಟೂರಿನ ಕಲ್ಪತರು ಕ್ರೀಡಾಂಗಣದಲ್ಲಿ ಹಾಸ್ಟೆಲ್ ವಿದ್ಯಾರ್ಥಿಗಳ ಕ್ರೀಡಾಕೂಟ

Tiptur News: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಮೆಟ್ರಿಕ್ ನಂತರ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳಿಗೆ ತಿಪಟೂರಿನ ಕಲ್ಪತರು ಕ್ರೀಡಾಂಗಣದಲ್ಲಿ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗಿತ್ತು. ವಿಜೇತ ತಂಡಗಳಿಗೆ ನಗದು ಬಹುಮಾನ, ಟ್ರೋಫಿ ವಿತರಿಸಲಾಗಿದೆ.

ತಿಪಟೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಮೆಟ್ರಿಕ್ ನಂತರ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳಿಗೆ ಇಲ್ಲಿನ ಕಲ್ಪತರು ಕ್ರೀಡಾಂಗಣದಲ್ಲಿ (Tiptur News) ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗಿತ್ತು.

ಕ್ರೀಡಾಕೂಟದಲ್ಲಿ ಕಬ್ಬಡಿ ಮತ್ತು ಥ್ರೋ ಬಾಲ್ ಕ್ರೀಡೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಬ್ಬಡಿಯಲ್ಲಿ ಪ್ರಥಮ ಬಹುಮಾನವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್‌ನ ವಿದ್ಯಾರ್ಥಿಗಳು ಪಡೆದುಕೊಂಡಿದ್ದು. ದ್ವಿತೀಯ ಬಹುಮಾನವನ್ನು ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್‌ನ ವಿದ್ಯಾರ್ಥಿಗಳು ಪಡೆದುಕೊಂಡಿದ್ದಾರೆ. ಇನ್ನು ಥ್ರೋ ಬಾಲ್‌ನಲ್ಲಿ ಪ್ರಥಮ ಬಹುಮಾನವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್‌ನ ವಿದ್ಯಾರ್ಥಿಗಳು ಪಡೆದಿದ್ದಾರೆ. ಪ್ರಥಮ ಬಹುಮಾನವಾಗಿ 5000 ನಗದು, ಟ್ರೋಫಿ ಮತ್ತು ಪದಕ, ದ್ವಿತೀಯ ಬಹುಮಾನವಾಗಿ 2,000 ನಗದು ಟ್ರೋಫಿ ಮತ್ತು ಪದಕವನ್ನು ವಿಜೇತರಿಗೆ ನೀಡಲಾಯಿತು.‌



ಈ ಸುದ್ದಿಯನ್ನೂ ಓದಿ | WCD Dakshina Kannada Recruitment 2025: ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿಯಲ್ಲಿದೆ 277 ಹುದ್ದೆ; ಎಸ್‌ಎಸ್‌ಎಲ್‌ಸಿ ಪಾಸಾದವರು ಅಪ್ಲೈ ಮಾಡಿ

ಈ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಜಲಜಮ್ಮ, ಶಿವರಾಜ್ ಯಲಿಗಾರ, ಮಂಜುನಾಥ್, ಸಮಾಜ ಕಲ್ಯಾಣ ಇಲಾಖೆಯ ಮಹೇಶ್, ಶೋಭಾ, ಸುಮಲತಾ, ಮಂಜುನಾಥ್ ಮತ್ತು ಸಿಬ್ಬಂದಿ ವರ್ಗ ಹಾಜರಿದ್ದರು.