ತಿಪಟೂರು, ಸೆ.16: ಜಿಲ್ಲಾಮಟ್ಟದ ವಿವಿಧ ಕ್ರೀಡಾಕೂಟಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ತಿಪಟೂರು ತಾಲೂಕಿನ ವಿದ್ಯಾರ್ಥಿಗಳು ಇದೀಗ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗುವ ಮೂಲಕ ತಿಪಟೂರಿನ (Tiptur News) ಕೀರ್ತಿಯನ್ನು ಮತ್ತಷ್ಟು ಹೆಚ್ಚಿಸಿದ್ದಾರೆ. ರಾಜ್ಯ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕಿ ವೇದಾವತಿ ಹಾಗೂ ಶಾಲಾ ಆಡಳಿತ ಮಂಡಳಿ ವತಿಯಿಂದ ಬಹುಮಾನ ನೀಡಿ ಅಭಿನಂದಿಸಲಾಯಿತು.
ತಿಪಟೂರು ತಾಲೂಕಿನ ಶ್ರೀ ವಿದ್ಯಾಪೀಠ ಎಸ್‌ವಿಪಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಾದ ಲೋಮಿತ್, ಮೋಹಿತ್ ಹಾಗೂ ಯೋಗಾನಂದ್ ಅವರು ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇದೇ ವೇಳೆ ವಿದ್ಯಾರ್ಥಿನಿ ಚಂದನ ಅವರು ಜಿಲ್ಲಾ ಮಟ್ಟದ ಟೇಕ್ವಾಂಡೋ ಸ್ಪರ್ಧೆಯಲ್ಲಿ ಉತ್ತಮ ಗೆಲುವನ್ನು ಸಾಧಿಸಿ ರಾಜ್ಯ ಮಟ್ಟದ ಟೇಕ್ವಾಂಡೋ ಕ್ರೀಡೆಗೆ ಆಯ್ಕೆಯಾಗಿದ್ದಾರೆ. ಈ ವಿದ್ಯಾರ್ಥಿಗಳ ಸಾಧನೆಯ ಮೂಲಕ ತಿಪಟೂರು ತಾಲೂಕು ಹಾಗೂ ಶ್ರೀ ವಿದ್ಯಾಪೀಠ ಶಾಲೆಯ ಕೀರ್ತಿ ಮತ್ತಷ್ಟು ಹೆಚ್ಚಾಗಿದೆ.
ಕಸಬಾ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಎಸ್‌ವಿಪಿ ಹಾಗೂ ಸುಮತಿ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ ಎಲ್ಲಾ ಆಟೋಟ ಸ್ಪರ್ಧೆಗಳಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನಗಳನ್ನು ಪಡೆದು ಸಮಗ್ರ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ ಹಾಗೂ ಬಾಲಕರ ವಿಭಾಗದಿಂದ ವೈಯಕ್ತಿಕ ಚಾಂಪಿಯನ್ ಶಿಪ್ ಅನ್ನು ಮಹಮ್ಮದ್ ಆಸಿಫ್, ಸಿದ್ದರಾಜು, ಸಾತ್ವಿಕ್ ಆರ್ ಶೆಟ್ಟಿ, ಯೂಸುಫ್, ಹಾಗೂ ಭುವನ ಅವರು ಪಡೆದಿದ್ದಾರೆ.
BESCOM Online Services: ಸಾಫ್ಟ್‌ವೇರ್ ಅಳವಡಿಕೆ: ಬೆಸ್ಕಾಂನ 20 ಪಟ್ಟಣಗಳಲ್ಲಿ ಸೆ.17ರವರೆಗೆ ಆನ್‌ಲೈನ್ ಸೇವೆ ಅಲಭ್ಯ
ಶ್ರೀ ವಿದ್ಯಾಪೀಠ SVP ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಕಸಬಾ ಹೋಬಳಿ ಮಟ್ಟ ಹಾಗೂ ಜಿಲ್ಲಾ ಮಟ್ಟದ ಕ್ರೀಡಾಕೂಟಗಳಲ್ಲಿ ವಿಜೇತರಾದ SVP ಶಾಲೆ ಹಾಗೂ ಸುಮತಿ ಶಾಲೆಯ ವಿದ್ಯಾರ್ಥಿ–ವಿದ್ಯಾರ್ಥಿನಿಯರಿಗೆ ಕ್ರೀಡಾ ಪ್ರಮಾಣಪತ್ರ, ಪದಕ ಹಾಗೂ ಕಪ್‌ಗಳನ್ನು ನೀಡಿ ಗೌರವಿಸಿ ಅಭಿನಂದಿಸಿದರು. ವಿದ್ಯಾರ್ಥಿಗಳ ಕ್ರೀಡಾ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಶಿಕ್ಷಕರು ಹಾಗೂ ಗಣ್ಯರು ಹರ್ಷ ವ್ಯಕ್ತಪಡಿಸಿದ್ದಾರೆ.