ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Yuva Samvada; ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ ಅತ್ಯಗತ್ಯ: ಡಿಸಿ ಶುಭ ಕಲ್ಯಾಣ್

Tumkur News: ತುಮಕೂರು ವಿಶ್ವವಿದ್ಯಾನಿಲಯದ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ತುಮಕೂರು ವಿವಿ ಕಲಾ ಕಾಲೇಜು, ಮಹಿಳಾ ಅಧ್ಯಯನ ಕೇಂದ್ರ ಹಾಗೂ ಪ್ರೆಸ್ ಕ್ಲಬ್ ವತಿಯಿಂದ ಜಿಲ್ಲಾಧಿಕಾರಿಗಳೊಂದಿಗೆ ಯುವ ಸಂವಾದ ಕಾರ್ಯಕ್ರಮವನ್ನು ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಉದ್ಘಾಟಿಸಿ, ಮಾತನಾಡಿದರು.

ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ ಅತ್ಯಗತ್ಯ: ಡಿಸಿ ಶುಭ ಕಲ್ಯಾಣ್

ತು ತುಮಕೂರು ವಿಶ್ವವಿದ್ಯಾನಿಲಯದ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾತನಾಡಿದರು. -

Profile
Siddalinga Swamy Aug 25, 2026 6:39 PM

ತುಮಕೂರು, ಆ. 25: ಯುಪಿಎಸ್‌ಸಿ ಪರೀಕ್ಷೆ ಎದುರಿಸುವ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ, ನಿರಂತರ ಅಧ್ಯಯನ ಮತ್ತು ಶಿಸ್ತು ಅತ್ಯಂತ ಅಗತ್ಯ ಎಂದು ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಭಿಪ್ರಾಯಪಟ್ಟರು. ತುಮಕೂರು ವಿಶ್ವವಿದ್ಯಾನಿಲಯದ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ (Tumkur News) ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ತುಮಕೂರು ವಿವಿ ಕಲಾ ಕಾಲೇಜು, ಮಹಿಳಾ ಅಧ್ಯಯನ ಕೇಂದ್ರ ಹಾಗೂ ಪ್ರೆಸ್ ಕ್ಲಬ್ ವತಿಯಿಂದ ಆಯೋಜಿಸಿದ್ದ ಜಿಲ್ಲಾಧಿಕಾರಿಯೊಂದಿಗೆ ಯುವ ಸಂವಾದವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳೊಂದಿಗೆ ‘ಸತ್ಯಮೇವ ಜಯತೆʼ ಎಂಬ ಸಂದೇಶ ಬರೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಅವರು, ಮೊದಲ ಪ್ರಯತ್ನದಲ್ಲಿ ಸೋತರೂ ಧೃತಿಗೆಡದೆ ತಮ್ಮ ತಪ್ಪುಗಳನ್ನು ವಿಶ್ಲೇಷಿಸಿ, ಅವು ಮರುಕಳಿಸದಂತೆ ಎಚ್ಚರಿಕೆ ವಹಿಸಿ ಮತ್ತಷ್ಟು ಪರಿಶ್ರಮದಿಂದ ಮುನ್ನಡೆಯುವುದೇ ನಿಜವಾದ ಕಾರ್ಯಕ್ಷಮತೆ ಎಂದರು.

ಅಭಿವೃದ್ಧಿ ಯೋಜನೆಗಳ ಮಾಹಿತಿ

ಸರ್ಕಾರಿ ಅಧಿಕಾರಿಗಳು ಕೇವಲ ಕಚೇರಿಗೆ ಸೀಮಿತರಾಗದೆ ಜನರ ಬಳಿಗೆ ತೆರಳಿ ಸಮಸ್ಯೆಗಳನ್ನು ಆಲಿಸಬೇಕು ಎಂದ ಜಿಲ್ಲಾಧಿಕಾರಿ, ಜಿಲ್ಲೆಯಲ್ಲಿ 30 ಸಾವಿರ ಕುಟುಂಬಗಳಿಗೆ ಏಕಕಾಲದಲ್ಲಿ ಹಕ್ಕುಪತ್ರ ವಿತರಿಸಿ ದಾಖಲೆ ಬರೆದಿರುವುದನ್ನು ಸ್ಮರಿಸಿದರು. ಅಲ್ಲದೆ, ಮುಂದಿನ ಐದು ವರ್ಷಗಳಲ್ಲಿ ಎತ್ತಿನಹೊಳೆ ಯೋಜನೆ ಮೂಲಕ ನೀರು ಪೂರೈಕೆ, ತುಮಕೂರಿಗೆ ಮೆಟ್ರೋ ವಿಸ್ತರಣೆ, ವೈದ್ಯಕೀಯ ಕಾಲೇಜು ಸ್ಥಾಪನೆ ಹಾಗೂ 130 ಕೋಟಿ ರುಪಾಯಿ ವೆಚ್ಚದಲ್ಲಿ ಜಿಲ್ಲಾಸ್ಪತ್ರೆಯನ್ನು ಆಧುನೀಕರಣಗೊಳಿಸಲಾಗುತ್ತಿದೆ ಎಂದು ಪ್ರಮುಖ ಅಭಿವೃದ್ಧಿ ಯೋಜನೆಗಳ ಮಾಹಿತಿ ಹಂಚಿಕೊಂಡರು.

ವಿದ್ಯಾರ್ಥಿಗಳಿಗೆ ಕಿವಿಮಾತು

ಗ್ರಾಮೀಣ ವಿದ್ಯಾರ್ಥಿಗಳು ಮೊಬೈಲ್ ಬಳಕೆ ಕಡಿಮೆ ಮಾಡಿ ಓದಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಅಲ್ಲದೆ, ಸರಿಯಾದ ದಿನಚರಿ ನಿರ್ವಹಣೆಯ ಮೂಲಕ ಪರೀಕ್ಷಾ ಒತ್ತಡವನ್ನು ಸಮರ್ಥವಾಗಿ ನಿಭಾಯಿಸಬೇಕು ಎಂದು ಸಲಹೆ ನೀಡಿದ ಅವರು, ಇತ್ತೀಚಿನ ದಿನಗಳಲ್ಲಿ ಅತ್ಯುತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಸರ್ಕಾರಿ ಶಾಲೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಮುಂದಿನ ವರ್ಷದಿಂದ ಸರ್ಕಾರಿ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ನೋಟ್‌ಬುಕ್‌ ವಿತರಣೆ: ಸಚಿವ ಮಧು ಬಂಗಾರಪ್ಪ

ತುಮಕೂರು ವಿಶ್ವವಿದ್ಯಾನಿಲಯದ ಪರೀಕ್ಷಾಂಗ ಕುಲಸಚಿವ ಡಾ. ಮೋಹನ್ ಎಚ್.ಎಸ್., ಕಲಾ ಕಾಲೇಜಿನ ಪ್ರಾಂಶುಪಾಲೆ ಡಾ. ಜಿ. ದಾಕ್ಷಾಯಿಣಿ, ಪ್ರಾಧ್ಯಾಪಕ ಶೇಟ್ ಪ್ರಕಾಶ್, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಲ್. ಯೋಗೀಶ್ ಹಾಗೂ ಪ್ರೆಸ್ ಕ್ಲಬ್ ಅಧ್ಯಕ್ಷ ಶಶಿಧರ್ ದೋಣಿಹಕ್ಲು ಮತ್ತಿತರರು ಉಪಸ್ಥಿತರಿದ್ದರು.