ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Self Harming: ನೀರಿನ ಸಂಪ್​ಗೆ ಬಿದ್ದು ಇಬ್ಬರು ಮಕ್ಕಳ ಜತೆ ತಾಯಿ ಆತ್ಮಹತ್ಯೆ, ಕಾರಣವೇನು?

ಸಿಂಗೋನಹಳ್ಳಿ ಗ್ರಾಮದಲ್ಲಿ ಮೃತ ವಿಜಯಲಕ್ಷ್ಮಿ ಕುಟುಂಬ ನೆಲಸಿತ್ತು. ಗಂಡ ಹೆಂಡತಿ ಮತ್ತು ಇಬ್ಬರು ಮಕ್ಕಳು ಒಟ್ಟಿಗೆ ಜೀವನ ಮಾಡುತ್ತಿದ್ದರು. ಆದರೆ ಕೌಟುಂಬಿಕ ಕಲಹ ಹಿನ್ನೆಲೆ ತಾಯಿ ವಿಜಯಲಕ್ಷ್ಮೀ ಆತ್ಮಹತ್ಯೆಯ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಇಬ್ಬರು ಮಕ್ಕಳನ್ನು ನೀರಿನ ಸಂಪ್​ಗೆ ತಳ್ಳಿ ಬಳಿಕ ತಾನೂ ಸಂಪ್​ಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನೀರಿನ ಸಂಪ್​ಗೆ ಬಿದ್ದು ಇಬ್ಬರು ಮಕ್ಕಳ ಜತೆ ತಾಯಿ ಆತ್ಮಹತ್ಯೆ, ಕಾರಣವೇನು?

ತುಮಕೂರಿನಲ್ಲಿ ತಾಯಿ- ಮಕ್ಕಳು ಆತ್ಮಹತ್ಯೆ -

ಹರೀಶ್‌ ಕೇರ
ಹರೀಶ್‌ ಕೇರ Jan 7, 2026 7:07 AM

ತುಮಕೂರು, ಜ.07 : ಇಬ್ಬರು ಮಕ್ಕಳ ಜತೆ ತಾಯಿ ಆತ್ಮಹತ್ಯೆಗೆ ಶರಣಾಗಿರುವ (Self Harming) ಘಟನೆ ತಾಲೂಕಿನ (Tumkur news) ಕ್ಯಾತಸಂದ್ರದ ಬಳಿ ಇರುವ ಸಿಂಗೋನಹಳ್ಳಿ ಗ್ರಾಮದಲ್ಲಿ ನಡೆದಿದೆ. ತಾಯಿ ವಿಜಯಲಕ್ಷ್ಮಿ (26), ಮಕ್ಕಳಾದ ಚೈತನ್ಯ (6) ಚೇತನ್ (5) ಸಾವನ್ನಪ್ಪಿರುವ ದುರ್ದೈವಿಗಳು. ಆತ್ಮಹತ್ಯೆಗೆ ಕೌಟುಂಬಿಕ ಕಲಹ ಕಾರಣ ಎನ್ನಲಾಗಿದೆ.

ಇಬ್ಬರು ಮಕ್ಕಳನ್ನ ಮೊದಲ ಸಂಪ್​ ಗೆ ತಳ್ಳಿದ ತಾಯಿ ವಿಜಯಲಕ್ಷ್ಮೀ ಬಳಿಕ ತಾನೂ ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತದೇಹಗಳನ್ನು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದ್ದು, ಸ್ಥಳಕ್ಕೆ‌ ಪೊಲೀಸ್ ವರಿಷ್ಟಾಧಿಕಾರಿ ಅಶೋಕ್ ಕೆ.ವಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಿಂಗೋನಹಳ್ಳಿ ಗ್ರಾಮದಲ್ಲಿ ಮೃತ ವಿಜಯಲಕ್ಷ್ಮಿ ಕುಟುಂಬ ನೆಲಸಿತ್ತು. ಗಂಡ ಹೆಂಡತಿ ಮತ್ತು ಇಬ್ಬರು ಮಕ್ಕಳು ಒಟ್ಟಿಗೆ ಜೀವನ ಮಾಡುತ್ತಿದ್ದರು. ಆದರೆ ಕೌಟುಂಬಿಕ ಕಲಹ ಹಿನ್ನೆಲೆ ತಾಯಿ ವಿಜಯಲಕ್ಷ್ಮೀ ಆತ್ಮಹತ್ಯೆಯ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಇಬ್ಬರು ಮಕ್ಕಳನ್ನು ನೀರಿನ ಸಂಪ್​ಗೆ ತಳ್ಳಿ ಬಳಿಕ ತಾನೂ ಸಂಪ್​ಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಇಡೀ ಸಿಂಗೋನಹಳ್ಳಿಯನ್ನೇ ಬೆಚ್ಚಿ ಬೀಳಿಸಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ನೀರಿನ ಸಂಪ್ ನಿಂದ ಮೃತ ದೇಹಗಳನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಮೇಲೆತ್ತಿದ್ದಾರೆ.

ಡೆತ್​​ನೋಟ್​ನಲ್ಲಿ ಏನಿದೆ?

ಎರಡು ಮಕ್ಕಳ ಜತೆಯಲ್ಲಿ ಆತ್ಮಹತ್ಯೆ‌ ಮಾಡಿಕೊಂಡಿರುವ ತಾಯಿ ವಿಜಯಲಕ್ಷ್ಮೀ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಡೆತ್​ನೋಟ್​ ಬರೆದಿಟ್ಟು ಸಾವನ್ನಪ್ಪಿದ್ದಾರೆ. ಸದ್ಯ ಪೊಲೀಸರಿಗೆ ವಿಜಯಲಕ್ಷ್ಮೀ ಬರೆದಿಟ್ಟಿರುವ ಡೆತ್​ನೋಟ್​​ ಪತ್ತೆಯಾಗಿದ್ದು, ಡೆತ್​ನೋಟ್​ನಲ್ಲಿ ನಮ್ಮ ಸಾವಿಗೆ ನಾವೇ‌ ಕಾರಣ ಎಂದು ಬರೆದಿರುವ ಮಾಹಿತಿ ಲಭ್ಯವಾಗಿದೆ. ಜೀವನದಲ್ಲಿ ಬೇಸರವಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ, ನನ್ನ ಗಂಡನನ್ನು ಚೆನ್ನಾಗಿ ನೋಡಿಕೊಳ್ಳಿ ಎಂದು ಡೆತ್​ನೋಟ್​ನಲ್ಲಿ ಬರೆದಿದ್ದಾರೆ ಎಂದು ತಿಳಿದು ಬಂದಿದೆ.