ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Tumkur news: ಪೊಲೀಸರ ವಶದಲ್ಲಿದ್ದಾಗ ವ್ಯಕ್ತಿಯ ಸಾವು, ಕೆರಳಿದ ಗ್ರಾಮಸ್ಥರಿಂದ ಪ್ರತಿಭಟನೆ

ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಆಕ್ರೋಶಗೊಂಡ ಯಳನಾಡು ಗ್ರಾಮಸ್ಥರು ಠಾಣೆಗೆ ಮುತ್ತಿಗೆ ಹಾಕಿ, ಶವವನ್ನು ಠಾಣೆಯೊಳಗೇ ಇಟ್ಟು ಪೊಲೀಸರ ವಿರುದ್ಧ ಘೋಷಣೆ ಕೂಗಿದರು. ಘಟನಾ ಸ್ಥಳಕ್ಕೆ ಮಾಜಿ ಸಚಿವ ಮಾಧುಸ್ವಾಮಿ ಭೇಟಿ ನೀಡಿ ಗ್ರಾಮಸ್ಥರ ಅಹವಾಲು ಆಲಿಸಿದರು. ತುಮಕೂರು ಎಸ್ಪಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪೊಲೀಸರ ವಶದಲ್ಲಿದ್ದಾಗ ವ್ಯಕ್ತಿಯ ಸಾವು, ಕೆರಳಿದ ಗ್ರಾಮಸ್ಥರಿಂದ ಪ್ರತಿಭಟನೆ

ಮೃತ ಕಾಂತರಾಜು -

ಹರೀಶ್‌ ಕೇರ
ಹರೀಶ್‌ ಕೇರ Mar 20, 2026 7:59 AM

ತುಮಕೂರು, ಮಾ.20: ಜಿಲ್ಲೆಯ (tumkur news) ಚಿಕ್ಕನಾಯಕನಹಳ್ಳಿ (chikkanayakanahalli) ತಾಲೂಕಿನ ಹುಳಿಯಾರು ಪೊಲೀಸ್ ಠಾಣೆಯಲ್ಲಿ (police station) ವಿಚಾರಣೆಗೆಂದು ಕರೆತಂದಿದ್ದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು, ಪೊಲೀಸರ ಹಲ್ಲೆಯಿಂದಲೇ ಸಾವು (death) ಸಂಭವಿಸಿದೆ ಎಂದು ಆರೋಪಿಸಿ ಗ್ರಾಮಸ್ಥರು ಠಾಣೆಯೊಳಗೆ ಶವವಿಟ್ಟು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.

ಯುಗಾದಿ ಹಬ್ಬದ ಸಂಭ್ರಮದಲ್ಲಿದ್ದ ಯಳನಾಡು ಗ್ರಾಮದಲ್ಲಿ ನಿನ್ನೆ ಸಂಜೆ ಜೂಜಾಟ ನಡೆಯುತ್ತಿದೆ ಎಂಬ ದೂರು ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಧಾವಿಸಿದ ಹುಳಿಯಾರು ಪೊಲೀಸರು, ಸಿದ್ಧರಾಮೇಶ್ವರ ದೇವಸ್ಥಾನದ ಗುಡಿಗೌಡರಾದ ಕಾಂತರಾಜು ಸೇರಿದಂತೆ ಆರು ಮಂದಿಯನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದಿದ್ದರು. ಪೊಲೀಸರು ವಿಚಾರಣೆ ನಡೆಸುವ ವೇಳೆ ಕಾಂತರಾಜು ಅವರ ಮೇಲೆ ಹಲ್ಲೆ ಮಾಡಿದ್ದಾರೆ, ಇದರಿಂದ ಅವರು ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎಂಬುದು ಮೃತನ ಗೆಳೆಯರು ಮತ್ತು ಗ್ರಾಮಸ್ಥರ ಗಂಭೀರ ಆರೋಪವಾಗಿದೆ.

ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಆಕ್ರೋಶಗೊಂಡ ಯಳನಾಡು ಗ್ರಾಮಸ್ಥರು ಠಾಣೆಗೆ ಮುತ್ತಿಗೆ ಹಾಕಿ, ಶವವನ್ನು ಠಾಣೆಯೊಳಗೇ ಇಟ್ಟು ಪೊಲೀಸರ ವಿರುದ್ಧ ಘೋಷಣೆ ಕೂಗಿದರು. ಘಟನಾ ಸ್ಥಳಕ್ಕೆ ಮಾಜಿ ಸಚಿವ ಮಾಧುಸ್ವಾಮಿ ಭೇಟಿ ನೀಡಿ ಗ್ರಾಮಸ್ಥರ ಅಹವಾಲು ಆಲಿಸಿದರು. ತುಮಕೂರು ಎಸ್ಪಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇರಾನ್ ಯುದ್ಧದ ಮಧ್ಯೆ ದಾರಿ ತಪ್ಪಿಸುವ ಪೋಸ್ಟ್‌: ಯುಎಇಯಲ್ಲಿ 19 ಮಂದಿ ಭಾರತೀಯರ ಬಂಧನ

ಪೊಲೀಸರ ಮಾಹಿತಿ ಪ್ರಕಾರ, ಸಂಜೆ 5 ಗಂಟೆಗೆ ಆರು ಮಂದಿಯನ್ನು ಕರೆತರಲಾಗಿತ್ತು. ರಾತ್ರಿ 8:30ಕ್ಕೆ ವಿಚಾರಣೆ ಮುಗಿಸಿ ಕಳುಹಿಸಿದ ಬಳಿಕ ಕಾಂತರಾಜು ಅವರು ಠಾಣೆಯಿಂದ ಹೊರಬಂದ ಮೇಲೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಸದ್ಯ ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ ನಡೆಯುತ್ತಿದ್ದು, ಮೃತರ ಕುಟುಂಬಸ್ಥರಿಂದ ದೂರು ಪಡೆಯುವ ಪ್ರಕ್ರಿಯೆ ಮುಂದುವರಿದಿದೆ ಎಂದು ಹೇಳಿದ್ದಾರೆ.