Tumkur News: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಾತ್ಸಲ್ಯ ಮನೆ ಹಸ್ತಾಂತರ
Tumkur News: ತುಮಕೂರು ತಾಲೂಕಿನ ಹೆಗ್ಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಕ್ಕೋಡಿಯಲ್ಲಿ ವಾಸವಾಗಿರುವ ವಿಶಾಲಾಕ್ಷಮ್ಮ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಿರ್ಮಿಸಿಕೊಟ್ಟಿರುವ ವಾತ್ಸಲ್ಯ ಮನೆಯನ್ನು ಸೋಮವಾರ ಹಸ್ತಾಂತರ ಮಾಡಲಾಯಿತು. ಈ ಕುರಿತ ವಿವರ ಇಲ್ಲಿದೆ.

-

ತುಮಕೂರು: ತಾಲೂಕಿನ ಹೆಗ್ಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಕ್ಕೋಡಿಯಲ್ಲಿ (Tumkur News) ವಾಸವಾಗಿರುವ ವಿಶಾಲಾಕ್ಷಮ್ಮ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಿರ್ಮಿಸಿಕೊಟ್ಟಿರುವ ವಾತ್ಸಲ್ಯ ಮನೆಯನ್ನು ಸೋಮವಾರ ಹಸ್ತಾಂತರ ಮಾಡಲಾಯಿತು. ಗ್ರಾಮಾಭಿವೃದ್ಧಿ ಯೋಜನೆ ಪ್ರಾದೇಶಿಕ ನಿರ್ದೇಶಕ ಶೀನಪ್ಪ, ಮನೆ ಹಸ್ತಾಂತರ ನೆರವೇರಿಸಿ ಮಾತನಾಡಿ, ರಾಜ್ಯದಲ್ಲಿ ಸಾವಿರಕ್ಕೂ ಹೆಚ್ಚು ಮನೆಯನ್ನು ನಿರ್ಮಾಣ ಮಾಡಲಾಗಿದೆ. ಜಿಲ್ಲೆಯಲ್ಲಿ ಈ ವರ್ಷದಲ್ಲಿ ಒಟ್ಟು 34 ಮನೆ ಕಟ್ಟಿಕೊಡುವ ಯೋಜನೆಯಿದ್ದು ತುಮಕೂರು ಗ್ರಾಮಾಂತರ ಯೋಜನಾ ಕಚೇರಿ ವ್ಯಾಪ್ತಿಯಲ್ಲಿ ನಾಲ್ಕು ಮನೆ ರಚನೆ ತಯಾರಿ ನಡೆಸಲಾಗಿದೆ ಎಂದು ತಿಳಿಸಿದರು.
ಜನಜಾಗೃತಿ ವೇದಿಕೆ ಸದಸ್ಯ ಕಾಮರಾಜ್ ಮಾತನಾಡಿ, ವೀರೇಂದ್ರ ಹೆಗ್ಗಡೆ ಅವರ ದೂರದೃಷ್ಟಿಯ ಈ ಕಾರ್ಯಕ್ರಮ ರಾಜ್ಯಕ್ಕೆ ಮಾದರಿ ಎಂದು ತಿಳಿಸಿದರು. ಜಿಲ್ಲಾ ನಿರ್ದೇಶಕ ಸತೀಶ್ ಸುವರ್ಣ ಮಾತನಾಡಿದರು. ಪಂಚಾಯತ್ ಸದಸ್ಯ ಗಿರೀಶ್ ಗ್ರಾಮದ ಪರವಾಗಿ ಪೂಜ್ಯರಿಗೆ ಧನ್ಯವಾದ ಸಮರ್ಪಿಸಿದರು.
ಈ ಸುದ್ದಿಯನ್ನೂ ಓದಿ | Bengaluru Power Cut: ಸೆ. 9, 10ರಂದು ಬೆಂಗಳೂರಿನ ಈ ಏರಿಯಾಗಳಲ್ಲಿ ಕರೆಂಟ್ ಇರಲ್ಲ
ಈ ಸಂದರ್ಭದಲ್ಲಿ ತಾಲೂಕಿನ ಯೋಜನಾಧಿಕಾರಿ ಸಂದೇಶ್, ಮುಖಂಡ ರಂಗಧಾಮಯ್ಯ, ಸಮನ್ವಯಾಧಿಕಾರಿ ಧನಲಕ್ಷ್ಮೀ, ಮೇಲ್ವಿಚಾರಕ ಮನೋಜ್ ಹೆಗ್ಡೆ ಹಾಗೂ ಸೇವಾಪ್ರತಿನಿಧಿಗಳು, ಸ್ವ ಸಹಾಯ ಸಂಘದ ಸದಸ್ಯರು ಉಪಸ್ಥಿತರಿದ್ದರು.