ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಚಿಕ್ಕಮಾಲೂರು ಗ್ರಾಪಂಗೆ ಜಿಪಂ ಸಿಇಒ ಜಿ. ಪ್ರಭು ದಿಢೀರ್‌ ಭೇಟಿ; ಕಡತಗಳಲ್ಲಿ ನ್ಯೂನ್ಯತೆ ಕಂಡು ಸಿಬ್ಬಂದಿಗೆ ತರಾಟೆ

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಚಿಕ್ಕಮಾಲೂರು ಗ್ರಾಮ ಪಂಚಾಯಿತಿಗೆ ಮಂಗಳವಾರ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಆಕಸ್ಮಿಕ ಭೇಟಿ ನೀಡಿದರು. ಈ ವೇಳೆ ಗ್ರಾಮ ಪಂಚಾಯಿತಿಯ ಅಧಿಕಾರಿಗಳು ಕಚೇರಿಯಲ್ಲಿ ಇಲ್ಲದೆ ಇರುವುದನ್ನು ಗಮನಿಸಿ, ಕಡತಗಳನ್ನು, ಕ್ರಿಯಾ ಯೋಜನೆಯನ್ನು ವಿವಿಧ ವಹಿಗಳನ್ನು ಖುದ್ದು ಪರಿಶೀಲಿಸಿದರು.

ಚಿಕ್ಕಮಾಲೂರು ಗ್ರಾಮ ಪಂಚಾಯತಿಗೆ ಆಕಸ್ಮಿಕ ಭೇಟಿ ನೀಡಿದ ಜಿ.ಪಂ. ಸಿಇಓ ಜಿ. ಪ್ರಭು.

ತುಮಕೂರು, ಡಿ.16: ಜಿಲ್ಲೆಯ ಮಧುಗಿರಿ ತಾಲೂಕಿನ ಚಿಕ್ಕಮಾಲೂರು ಗ್ರಾಮ ಪಂಚಾಯತಿಗೆ ಮಂಗಳವಾರ (Tumkur News) ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ದಿಢೀರ್‌ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಯ ಅಧಿಕಾರಿಗಳು ಕಚೇರಿಯಲ್ಲಿ ಇಲ್ಲದೆ ಇರುವುದನ್ನು ಗಮನಿಸಿ, ಕಡತಗ, ಕ್ರಿಯಾ ಯೋಜನೆ ಹಾಗೂ ವಿವಿಧ ವಹಿಗಳನ್ನು ಖುದ್ದು ಪರಿಶೀಲಿಸಿದರು.

ಸದರಿ ಕಡತಗಳಲ್ಲಿ ಹೆಚ್ಚು ನ್ಯೂನ್ಯತೆಗಳು ಕಂಡುಬಂದಿದ್ದು, ದಾಖಲಾತಿಗಳನ್ನು ಸರಿಯಾಗಿ ನಿರ್ವಹಿಸದೆ ಇರುವುದನ್ನು ಗಮನಿಸಿದ ತರಾಟೆಗೆ ತೆಗೆದುಕೊಂಡ ಜಿಪಂ ಸಿಇಒ ಅವರು, ಕಾರ್ಯದರ್ಶಿಗಳು, ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳ ಕಾರ್ಯಲೋಪದ ಕುರಿತಂತೆ ಕೂಡಲೇ ಪರಿಶೀಲಿಸಿ ವರದಿ ಸಲ್ಲಿಸುವಂತೆ ಜಿಲ್ಲಾ ಪಂಚಾಯಿತಿಯಿಂದ ಆಗಮಿಸಿದ್ದ ಅಧಿಕಾರಿಗಳಿಗೆ ಹಾಗೂ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಂತರ ಸಾರ್ವಜನಿಕರ ಅಹವಾಲನ್ನು ಆಲಿಸಿ ಸೂಕ್ತ ಕ್ರಮವಹಿಸಲು ಸೂಚಿಸಿದರಲ್ಲದೆ, ಚಿಕ್ಕಮಾಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಗೆ ಭೇಟಿ ನೀಡಿ, ಮಕ್ಕಳು ಪಾಠಗಳನ್ನು ಅರ್ಥೈಸಿಕೊಳ್ಳುವ ನಿಟ್ಟಿನಲ್ಲಿ ಓದುವ ವಿದ್ಯಾಭ್ಯಾಸ ಕ್ರಮವನ್ನು ಮಕ್ಕಳಿಗೆ ತಿಳಿಸಲಾಯಿತು. ಮುಖ್ಯ ಶಿಕ್ಷಕರಿಗೆ ಮಕ್ಕಳ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸುವಂತೆ ಸೂಚಿಸಿದರಲ್ಲದೆ, ಶಾಲೆಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸೂಕ್ತ ಕ್ರಮ ವಹಿಸುವಂತೆ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಲಾಯಿತು. ‌

ತುಮಕೂರು ಡಿಸಿ ಕಚೇರಿಗೆ ಬಾಂಬ್ ಬೆದರಿಕೆ: ಪೊಲೀಸರಿಂದ ಪರಿಶೀಲನೆ

ನಂತರ ಹೋಬಳಿ ಕೇಂದ್ರ ಪಂಚಾಯಿತಿಗಳಾದ ಪುರವರ ಗ್ರಾಮ ಪಂಚಾಯತಿ ಮತ್ತು ತೋವಿನಕೆರೆ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ, ಮುಖ್ಯಮಂತ್ರಿ ಅವರ ವಿಶೇಷ ಅನುದಾನದಲ್ಲಿ ಕೈಗೊಳ್ಳಲು ಉದ್ದೇಶಿಸಲಾಗಿರುವ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನದ ಕುರಿತು ನೀಲಿ ನಕ್ಷೆಯೊಂದಿಗೆ ಸ್ಥಳ ಪರಿಶೀಲನೆ ನಡೆಸಿ, ಅಧಿಕಾರಿಗಳಿಗೆ ನಿರ್ದೇಶನವನ್ನು ನೀಡಿದರು.