ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Chikkanayakanahalli News: ​ಮಹಿಳೆಗೆ ಮಹಿಳೆಯೇ ಸ್ಫೂರ್ತಿ: ತಹಸೀಲ್ದಾರ್ ಮಮತಾ ಎಂ.

ಮಹಿಳೆಯರು ತಮಗೆ ಸಿಗುವ ಅವಕಾಶಗಳನ್ನು ಬಳಸಿಕೊಂಡು ಪ್ರತಿಯೊಂದು ಕ್ಷೇತ್ರದಲ್ಲಿ ಸಾಧನೆ ಮಾಡುವ ಮೂಲಕ ತಮ್ಮ ಶಕ್ತಿಯನ್ನು ಬಿಂಬಿಸಿಕೊಳ್ಳಬೇಕು. ಹೆಣ್ಣು ಮತ್ತು ಗಂಡು ಎಂಬ ಭೇದ ಭಾವ ಮಾಡದೆ, ಮನೆಯ ಗಂಡು ಮಕ್ಕಳಿಗೆ ನೀಡುವ ಗೌರವ ಹಾಗೂ ಸ್ಥಾನಮಾನಗಳನ್ನು ಹೆಣ್ಣು ಮಕ್ಕಳಿಗೂ ನೀಡುವಂತಹ ಮನಸ್ಥಿತಿಯನ್ನು ಬೆಳೆಸಿಕೊಳ್ಳಬೇಕು

​ಮಹಿಳೆಗೆ ಮಹಿಳೆಯೇ ಸ್ಫೂರ್ತಿ: ತಹಸೀಲ್ದಾರ್ ಮಮತಾ ಎಂ.

-

Ashok Nayak
Ashok Nayak Dec 28, 2025 10:22 AM

​ಚಿಕ್ಕನಾಯಕನಹಳ್ಳಿ: "ಸಮಾಜದಲ್ಲಿ ಪ್ರತಿಯೊಂದು ಹೆಣ್ಣಿಗೂ ತಾಳ್ಮೆ, ಸಹನೆ, ಧೈರ್ಯ ಮತ್ತು ಮನೋಸ್ಥೈರ್ಯದ ಮೂಲಕ ಕುಟುಂಬ ಹಾಗೂ ದೇಶವನ್ನು ಕಟ್ಟುವ ಮಹತ್ತರ ಜವಾಬ್ದಾರಿ ಯಿದೆ. ಮಹಿಳೆಗೆ ಮಹಿಳೆಯೇ ಸ್ಫೂರ್ತಿಯಾಗಬೇಕು," ಎಂದು ತಹಸೀಲ್ದಾರ್ ಮಮತಾ ಎಂ. ತಿಳಿಸಿದರು.

​ಪಟ್ಟಣದ ಶ್ರೀ ಬನಶಂಕರಿ ಪ್ರಾರ್ಥನಾ ಮಂದಿರದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ, ಸ್ವ-ಉದ್ಯೋಗ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ವಿವಿಧ ಸ್ಪರ್ಧೆಗಳನ್ನು ಉದ್ಘಾಟಿಸಿ ಮಾತನಾಡಿ ದರು.

ಮಹಿಳೆಯರು ತಮಗೆ ಸಿಗುವ ಅವಕಾಶಗಳನ್ನು ಬಳಸಿಕೊಂಡು ಪ್ರತಿಯೊಂದು ಕ್ಷೇತ್ರದಲ್ಲಿ ಸಾಧನೆ ಮಾಡುವ ಮೂಲಕ ತಮ್ಮ ಶಕ್ತಿಯನ್ನು ಬಿಂಬಿಸಿಕೊಳ್ಳಬೇಕು. ಹೆಣ್ಣು ಮತ್ತು ಗಂಡು ಎಂಬ ಭೇದ ಭಾವ ಮಾಡದೆ, ಮನೆಯ ಗಂಡು ಮಕ್ಕಳಿಗೆ ನೀಡುವ ಗೌರವ ಹಾಗೂ ಸ್ಥಾನಮಾನಗಳನ್ನು ಹೆಣ್ಣು ಮಕ್ಕಳಿಗೂ ನೀಡುವಂತಹ ಮನಸ್ಥಿತಿಯನ್ನು ಬೆಳೆಸಿಕೊಳ್ಳಬೇಕು ಎಂದು ಅವರು ಕಿವಿಮಾತು ಹೇಳಿದರು.

ಇದನ್ನೂ ಓದಿ: Chikkanayakanahalli News: ಪೂರ್ವಜರ ಮಾದರಿಯ ಸಾವಯವ ಕೃಷಿಗೆ ಶಾಸಕ ಸಿ.ಬಿ.ಸುರೇಶಬಾಬು ಕರೆ

ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ್ ಮಾತನಾಡಿ, "ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿ ಗಳಾದಾಗ ಮಾತ್ರ ಕುಟುಂಬ ಮತ್ತು ಸಮಾಜದಲ್ಲಿ ಬದಲಾವಣೆ ಸಾಧ್ಯ. ಬಾಲ್ಯವಿವಾಹ ತಡೆ ಹಾಗೂ 'ಬೇಟಿ ಬಚಾವೋ ಬೇಟಿ ಪಡಾವೋ' ಘೋಷಣೆಗಳು ಕೇವಲ ಮಾತಿಗೆ ಸೀಮಿತವಾಗದೆ ಕಾರ್ಯಗತಗೊಳ್ಳಬೇಕು," ಎಂದರು.

​ಸಂಸ್ಕಾರದ ಕೊರತೆ ಬೇಡ: ವಿಶೇಷ ಉಪನ್ಯಾಸ ನೀಡಿದ ಕಾಚಪುರ ರಂಗಪ್ಪ ಅವರು, ಆಧುನಿಕತೆ ಮತ್ತು ಪಾಶ್ಚಿಮಾತ್ಯ ಸಂಸ್ಕೃತಿಗೆ ಮರುಳಾಗಿ ಮಕ್ಕಳ ಭವಿಷ್ಯವನ್ನು ಹಾಳು ಮಾಡಬಾರದು. ಪೋಷಕರು ಮಕ್ಕಳನ್ನು ಸರಿಯಾದ ದಾರಿಯಲ್ಲಿ ನಡೆಸದಿದ್ದರೆ ಅವರು ದುಶ್ಚಟಗಳಿಗೆ ಬಲಿಯಾ ಗುವ ಸಾಧ್ಯತೆಯಿದೆ ಎಂದು ಎಚ್ಚರಿಸಿದರು.

​ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಲಕ್ಷ್ಮಿ ಮಾತನಾಡಿ, ಧರ್ಮಸ್ಥಳ ಯೋಜನೆಯು ಮಹಿಳೆ ಯರಿಗೆ ಸ್ವಾವಲಂಬಿ ಜೀವನ ರೂಪಿಸಿಕೊಳ್ಳಲು ಭದ್ರ ಬುನಾದಿ ಹಾಕಿಕೊಟ್ಟಿದೆ ಎಂದರು.

​ಕಾರ್ಯಕ್ರಮದ ಅಂಗವಾಗಿ ರಂಗೋಲಿ ಸ್ಪರ್ಧೆ, ಪುಷ್ಪಗುಚ್ಛ ತಯಾರಿಕೆ ಹಾಗೂ ಗುಡಿ ಕೈಗಾರಿಕೆ ಉತ್ಪನ್ನಗಳ ಪ್ರದರ್ಶನ ಆಯೋಜಿಸಲಾಗಿತ್ತು. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳ ಮಹಿಳಾ ಸಾಧಕರನ್ನು ಗೌರವಿಸಲಾಯಿತು. ವೇದಿಕೆಯಲ್ಲಿ ಯೋಜನಾ ನಿರ್ದೇಶಕ ಪ್ರೇಮಾನಂದ್ ಜನಜಾಗೃತಿ ವೇದಿಕೆ ಸದಸ್ಯ ಜಯಪ್ರಭ, ಕವಿತಾ ಹಾಗೂ ಸಂಘದ ಮೇಲ್ವಿಚಾರಕರು ಮತ್ತು ಮಹಿಳಾ ಪ್ರತಿನಿಧಿಗಳು ಉಪಸ್ಥಿತರಿದ್ದರು.