ಗುಬ್ಬಿ: 186 ನೇ ವಿಶ್ವ ಛಾಯಾಗ್ರಹಣ ದಿನಾಚರಣೆ ಅಂಗವಾಗಿ ಹಿರಿಯ ಛಾಯಾಗ್ರಾಹಕರಿಗೆ ಗೌರವ ಸಮರ್ಪಣೆ ಹಾಗೂ ಸಂಘದ ಸರ್ವ ಸದಸ್ಯರ ಮಹಾಸಭೆಯನ್ನು ಇದೇ ತಿಂಗಳ 7 ರಂದು ಪಟ್ಟಣದ ಹೊರ ವಲಯ ಹೇರೂರು ಗ್ರಾಮದ ಶ್ರೀ ಗುರು ಸಿದ್ಧರಾಮೇಶ್ವರ ಸಮುದಾಯ ಭವನದಲ್ಲಿ ಆಯೋಜಿಸಲಾಗಿದೆ ಎಂದು ತಾಲ್ಲೂಕು ಛಾಯಾಗ್ರಾಹಕರ ಸಂಘ ತಿಳಿಸಿದೆ.
ಇದನ್ನೂ ಓದಿ: Gubbi News: ನವಂಬರ್ ಮಾಹೆಯಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ : ಕಸಾಪ ಪೂರ್ವಭಾವಿ ಸಭೆಯಲ್ಲಿ ಚಿಂತನೆ
ಬೆಳಿಗ್ಗೆ 10 ಗಂಟೆಗೆ ನಡೆಯುವ ಕಾರ್ಯಕ್ರಮವನ್ನು ಸಂಘದ ಸಂಸ್ಥಾಪಕ ಅಧ್ಯಕ್ಷ ವೆಂಕಟೇಶ್ ಉದ್ಘಾಟಿಸುವರು. ಸಂಘದ ಅಧ್ಯಕ್ಷ ಇಂದ್ರಣ್ಣ (ಮಲ್ಲೇಶ್) ಕಾರ್ಯಕ್ರಮದ ಅಧ್ಯಕ್ಷತೆ ವಹಿಸ ಲಿದ್ದಾರೆ. ನಂತರ ಸಂಘದ ಸದಸ್ಯರ ಮಕ್ಕಳಲ್ಲಿ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ.
ವೇದಿಕೆ ಕಾರ್ಯಕ್ರಮ ನಂತರ ಪ್ಯಾನೋಸಾನಿಕ್ ವಿಡಿಯೋ ಕ್ಯಾಮರಾ ಬಗ್ಗೆ ಮಾಹಿತಿ ಕಾರ್ಯ ಗಾರ ನಡೆಯಲಿದೆ. ಅಂಚೆ ಇಲಾಖೆ ವಿಮಾ ಪಾಲಿಸಿ ಬಗ್ಗೆ ಮಾಹಿತಿ, ಕಾರ್ಮಿಕ ಇಲಾಖೆಯ ಸವಲತ್ತು ಮಾಹಿತಿ, ಹೊಸ ಸದಸ್ಯರ ನೋಂದಣಿ ಹಾಗೂ ಗುರುತಿನ ಕಾರ್ಡ್ ವಿತರಣೆ, ಹಿರಿಯ ಛಾಯಾಗ್ರಾಹಕರಿಗೆ ಗೌರವ ಸಮರ್ಪಣೆ ಹಾಗೂ ಸಂಘದ ಸರ್ವ ಸದಸ್ಯರ ಸಭೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.