ವಿದೇಶ ಫ್ಯಾಷನ್‌ ಲೋಕ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್‌ ಹೌಸ್‌ ಸಂಪಾದಕೀಯ

Tumkur News: ಸಾಕುನಾಯಿಯನ್ನು ಸದ್ದಿಲ್ಲದಂತೆ ಹೊತ್ತೊಯ್ದ ಚಿರತೆ: ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

ಮನೆ ಮುಂದೆ ಹಾಕಲಾಗಿದ್ದ ತೆಂಗಿನಕಾಯಿ ರಾಶಿಯಲ್ಲಿ ಮಲಗಿದ್ದ ನಾಯಿಯ ಮೇಲೆ ಚಿರತೆಯೊಂದು ದಾಳಿ ನಡೆಸಿ ಹೊತ್ತೊಯ್ದಿರುವ ಘಟನೆ ತುಮಕೂರಿನ ತುರುವೇಕೆರೆ ತಾಲೂಕಿನ ಆನೇಕೆರೆ ಗ್ರಾಮ ಪಂಚಾಯತ್‌ ವ್ಯಾಪ್ತಿಯ ತೊರೆಮಾವಿನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹೀಗಾಗಿ ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ.

ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ: ಸಿಸಿ ಕ್ಯಾಮೆರಾದಲ್ಲಿ ಸೆರೆ

Profile Siddalinga Swamy Mar 1, 2025 5:04 PM

ತುರುವೇಕೆರೆ: ರಾತ್ರಿ ಮನೆ ಮುಂದೆ ಹಾಕಲಾಗಿದ್ದ ತೆಂಗಿನಕಾಯಿ ರಾಶಿಯಲ್ಲಿ ಮಲಗಿದ್ದ ನಾಯಿ ಮೇಲೆ ಚಿರತೆಯೊಂದು ದಾಳಿ (Leopard Attack) ನಡೆಸಿ ಹೊತ್ತೊಯ್ದಿರುವ ಘಟನೆ (Tumkur News) ತಾಲೂಕಿನ ತೊರೆಮಾವಿನಹಳ್ಳಿ ಗ್ರಾಮದಲ್ಲಿ ನಡೆದಿದೆ. ಆನೇಕೆರೆ ಗ್ರಾಮ ಪಂಚಾಯತ್‌ ವ್ಯಾಪ್ತಿಯ ತೊರೆಮಾವಿನಹಳ್ಳಿ ಗ್ರಾಮದ ಕಲ್ಲೇಶ್ವರಸ್ವಾಮಿ ದೇವಾಲಯದ ಸಮೀಪವಿರುವ ಶಂಕರಪ್ಪ ಎಂಬುವರ ಮನೆ ಮುಂದೆ ತೆಂಗಿನ ಕಾಯಿ ರಾಶಿ ಹಾಕಲಾಗಿತ್ತು. ಈ ತೆಂಗಿನ ರಾಶಿ ಪಕ್ಕದಲ್ಲೇ ಇವರು ಸಾಕಿದ್ದ ನಾಯಿ ಮಲಗಿತ್ತು. ಮಧ್ಯರಾತ್ರಿ ಇದನ್ನು ಹೊಂಚು ಹಾಕಿರುವ ಚಿರತೆ ನಿಧಾನವಾಗಿ ಸದ್ದುಗದ್ದಲ ಇಲ್ಲದೆ ಮೆಲ್ಲನೆ ಹೋಗಿ ನಾಯಿ ಮೇಲೆ ದಾಳಿ ಮಾಡಿ ಹೊತ್ತುಕೊಂಡು ಹೋಗಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಗ್ರಾಮದ ಹೃದಯ ಭಾಗಕ್ಕೆ ಚಿರತೆ ನುಗ್ಗಿ ಮನೆ ಮುಂದೆ ಮಲಗಿದ್ದ ನಾಯಿಯನ್ನು ಹೊತ್ತುಕೊಂಡು ಹೋಗಿರುವುದರಿಂದ ಗ್ರಾಮಸ್ಥರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ರಾತ್ರಿ ಮತ್ತು ಹಗಲು ವೇಳೆ ಗ್ರಾಮದ ಹೊರ ಭಾಗದಲ್ಲಿ ಜಮೀನುಗಳು, ತೋಟಗಳಿಗೆ ಹೋಗಲು ರೈತರು ಹಿಂದೇಟು ಹಾಕುವಂತಾಗಿದೆ. ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಇತ್ತಕಡೆ ಗಮನ ಹರಿಸಿ ಈ ಭಾಗದ ಜನರ ನಿದ್ದೆಗೆಡಿಸಿರುವ ಚಿರತೆಯನ್ನು ಸೆರೆ ಹಿಡಿಯಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | Murder Case: ಬೆಂಗಳೂರಲ್ಲಿ ಮತ್ತೊಂದು ಬರ್ಬರ ಹತ್ಯೆ, ಸೆಕ್ಯೂರಿಟಿ ಗಾರ್ಡ್ ಕೊಲೆ

ಸಂಡೂರಿನಲ್ಲಿ ಹಕ್ಕಿ ಜ್ವರದಿಂದ 2,000 ಕೋಳಿಗಳು ಸಾವು

ಸಂಡೂರು: ನೆರೆಯ ಆಂಧ್ರಪ್ರದೇಶ ಮತ್ತು ತೆಲಂಗಾಣದಿಂದ ಬಳ್ಳಾರಿ ಜಿಲ್ಲೆಯ ಸಂಡೂರಿಗೆ ಸಾಗಿಸುತ್ತಿದ್ದ ಸುಮಾರು 2,100 ಕೋಳಿಗಳು (chickens) ಹಕ್ಕಿ ಜ್ವರದಿಂದ (Bird Flu) ಸಾವನ್ನಪ್ಪಿವೆ ಎಂದು ಪಶುಸಂಗೋಪನಾ ಇಲಾಖೆ ಅಧಿಕಾರಿಗಳು ದೃಢಪಡಿಸಿದ್ದಾರೆ. ಒಂದು ವಾರದಲ್ಲಿ 2,100 ಪಕ್ಷಿಗಳು ಮೃತಪಟ್ಟಿವೆ. ಈ ಪೈಕಿ 1,100 ಮಂದಿ ಹಕ್ಕಿ ಜ್ವರ ಎಂದು ದೃಢಪಡಿಸಿದ ನಂತರ ಮೃತಪಟ್ಟಿವೆ.

“ಸುಮಾರು 20ರಿಂದ 30 ಪಕ್ಷಿಗಳು ಕೇಂದ್ರದಲ್ಲಿ ಸತ್ತಿವೆ ಅಥವಾ ಸಾಯುವ ಹಂತದಲ್ಲಿವೆ. ಪ್ರತಿದಿನ ಸುಮಾರು 100ರಿಂದ 200 ಪಕ್ಷಿಗಳು ಸಾಯುತ್ತಿದ್ದವು. ನಾವು ಸತ್ತ ಕೋಳಿಗಳ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಿದ್ದೇವೆ ಮತ್ತು ಅಲ್ಲಿ ನಡೆಸಿದ ಪರೀಕ್ಷೆಗಳಿಂದ, ಅವು ಹಕ್ಕಿ ಜ್ವರದಿಂದ ಸಾವನ್ನಪ್ಪಿರುವುದು ದೃಢಪಟ್ಟಿದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಇಲಾಖೆಯ ಉಪ ನಿರ್ದೇಶಕ ವಿನೋದ್ ಕುಮಾರ್, ʼʼಒಂದು ವಾರದಲ್ಲಿ 2,100 ಪಕ್ಷಿಗಳು ಮೃತಪಟ್ಟಿವೆ. ಈ ಪೈಕಿ 1,100 ಮಂದಿ ಹಕ್ಕಿ ಜ್ವರ ಎಂದು ದೃಢಪಡಿಸಿದ ನಂತರ ಮೃತಪಟ್ಟಿವೆ. ಸೋಂಕನ್ನು ತಡೆಗಟ್ಟಲು ನಾವು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ” ಎಂದರು. ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಸಾರಿಗೆ ಕೇಂದ್ರಕ್ಕೆ ಭೇಟಿ ನೀಡಿದರು.