ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Road Accident: ತುಮಕೂರಿನಲ್ಲಿ ಭೀಕರ ಅಪಘಾತ: ಲಾರಿಗೆ ಕಾರು ಡಿಕ್ಕಿಯಾಗಿ ಮೂವರು ದುರ್ಮರಣ

ನೆಲಹಾಳ್ ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಮಾರುತಿ ಎರಿಟಿಗಾ ಕಾರಿನಲ್ಲಿ ಬರುವಾಗ ನಿಲ್ಲಿಸಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲಿಸಿ, ಮೃತದೇಹಗಳನ್ನ ತುಮಕೂರು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದೆ.

ತುಮಕೂರಿನಲ್ಲಿ ಭೀಕರ ಅಪಘಾತ: ಲಾರಿಗೆ ಕಾರು ಡಿಕ್ಕಿಯಾಗಿ ಮೂವರು ದುರ್ಮರಣ

ತುಮಕೂರಿನ ಬಳಿ ಲಾರಿಗೆ ಕಾರು ಡಿಕ್ಕಿ -

ಹರೀಶ್‌ ಕೇರ
ಹರೀಶ್‌ ಕೇರ Jan 26, 2026 2:25 PM

ತುಮಕೂರು, ಜ.26: ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತಕ್ಕೆ (Road Accident) ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು (Tumkur) ತಾಲೂಕಿನ ನೆಲಹಾಳ್ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಅಪಘಾತದಲ್ಲಿ ಮೃತಪಟ್ಟವರು ಬೆಂಗಳೂರು ಮೂಲದವರು ಎನ್ನಲಾಗಿದ್ದು ಗೋಕರ್ಣ, ಮುರುಡೇಶ್ವರ, ಉಡುಪಿ ಕಡೆಗೆ ಪ್ರವಾಸಕ್ಕೆ ತೆರಳಿದ್ದರು. ಇಂದು ಬೆಳಗ್ಗೆ ಬೆಂಗಳೂರಿಗೆ ವಾಪಸ್‌ ಬರುತ್ತಿದ್ದರು.

ವಾಪಸ್‌ ಬರುವಾಗ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಓರ್ವ ಗಂಭೀರ ಗಾಯಗೊಂಡಿದ್ದು, ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ನೆಲಹಾಳ್ ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಮಾರುತಿ ಎರಿಟಿಗಾ ಕಾರಿನಲ್ಲಿ ಬರುವಾಗ ನಿಲ್ಲಿಸಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲಿಸಿ, ಮೃತದೇಹಗಳನ್ನ ತುಮಕೂರು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದೆ. ಘಟನಾ ಸ್ಥಳಕ್ಕೆ ತುಮಕೂರು ಎಸ್ಪಿ ಅಶೋಕ್ ಕೆವಿ ಹಾಗೂ ಕೋರಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ನಿಂತಿದ್ದ ಕಾರಿಗೆ ಕಂಟೈನರ್‌ ಡಿಕ್ಕಿ, ದಂಪತಿ ಸಾವು

ಬೆಳಗಾವಿ: ಕಂಟೇನರ್ ಲಾರಿ (Container Lorry) ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ (Car) ದಂಪತಿ ಮೃತಪಟ್ಟ ಘಟನೆ ಬೆಳಗಾವಿ (Belagavi) ನಿಪ್ಪಾಣಿ ತಾಲೂಕಿನ ಕೂಗನೋಳ್ಳಿ ಬಳಿ ನಡೆದಿದೆ. ಕೊಲ್ಲಾಪುರ ಮೂಲದ ಜಿಗರ್ ನಾಕ್ರಾನಿ ಮತ್ತು ಹೇತಿಕಾ ನಾಕ್ರಾನಿ ಮೃತಪಟ್ಟ ದುರ್ದೈವಿಗಳು. ಹುಬ್ಬಳ್ಳಿಯಿಂದ ಕೊಲ್ಲಾಪುರಕ್ಕೆ ತೆರಳುವ ವೇಳೆ ಕುಗನೋಳ್ಳಿ ಬಳಿ ಕಾರು ನಿಲ್ಲಿಸಲಾಗಿತ್ತು.

ಟಾಟಾ ಏಸ್-ಸ್ಕೂಟರ್‌ ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ಸ್ಥಳದಲ್ಲೇ ಸಾವು

ಈ ವೇಳೆ ರಭಸದಿಂದ ಬಂದ ಕಂಟೇನರ್ ವಾಹನ ಡಿಕ್ಕಿ ಹೊಡೆದಿದೆ. ಕೂಡಲೇ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಕಾರಿಯಾಗೇ ದೆ ಮೃತಪಟ್ಟಿದ್ದಾರೆ. ನಿಪ್ಪಾಣಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.