Gruha Lakshmi Scheme: ಗೃಹಲಕ್ಷ್ಮಿ ಎರಡು ತಿಂಗಳ ಹಣ ಒಂದೇ ಸಲ ಜಮೆ: ಲಕ್ಷ್ಮಿ ಹೆಬ್ಬಾಳ್ಕರ್
ಪಂಚ ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮಿ ಯೋಜನೆ ಅತಿ ದೊಡ್ಡ ಯೋಜನೆಯಾಗಿದೆ. 1.22 ಕೋಟಿ ಫಲಾನುಭವಿಗಳಿಗೆ ಇದುವರೆಗೂ 34 ಸಾವಿರ ಕೋಟಿ ರೂಪಾಯಿ ಹಣವನ್ನು ಹಾಕಲಾಗಿದೆ. ಈ ಯೋಜನೆಯನ್ನು ಜಾರಿಗೆ ತಂದಿರುವುದಕ್ಕೆ ನನಗೆ ಹೆಮ್ಮೆಯಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯದ ಗೃಹ ಲಕ್ಷ್ಮೀ ಯೋಜನೆಯ (Gruha Lakshmi Scheme) ಫಲಾನುಭವಿಗಳಿಗೆ ಗುಡ್ ನ್ಯೂಸ್ (Good news) ನೀಡಲಾಗಿದೆ. ಮಾರ್ಚ್ 31ರ ನಂತರ ಯೋಜನೆಯ ಎರಡು ಕಂತುಗಳ ಹಣವನ್ನು ಬಿಡುಗಡೆ ಮಾಡಲಾಗುತ್ತಿದೆ. ಈ ಕುರಿತಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (minister Lakshmi Hebbalkar) ಮಾಹಿತಿ ಹಂಚಿಕೊಂಡಿದ್ದು, ಗೃಹಲಕ್ಷ್ಮಿ ಯೋಜನೆಯ ಎರಡು ಕಂತುಗಳ ಹಣವನ್ನು ಮಾರ್ಚ್ 31ರ ನಂತರ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಹಣವನ್ನು ಖಾತೆಗೆ ಜಮಾ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.
ಎಲ್ಲರಿಗೂ ಅನ್ನ, ಅಕ್ಷರ, ವಿದ್ಯೆಯನ್ನು ಕೊಟ್ಟಿದ್ದು ಕಾಂಗ್ರೆಸ್ ಪಕ್ಷ. ದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಈಗ ಹಿನ್ನಡೆಯಾಗಿರಬಹುದು. ಯಾರೂ ಧೈರ್ಯಗೇಡಬೇಕಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಒಳ್ಳೆಯ ದಿನಗಳು ಬರಲಿವೆ. ದೇಶದಲ್ಲಿ ಕಾಂಗ್ರೆಸ್ ಪಕ್ಷ ಸದೃಢವಾಗಲಿದೆ ಎಂದು ಸಚಿವರು ಹೇಳಿದರು.
ಮಹಿಳೆಯರು ಇವತ್ತು ಯಾವುದರಲ್ಲೂ ಹಿಂದೆ ಇಲ್ಲ. ಸಮಾಜದಲ್ಲಿ ಮಹಿಳೆಯರನ್ನು ಬಿಟ್ಟು ಇರುವುದಕ್ಕೂ ಸಾಧ್ಯವಿಲ್ಲ. ಮಹಿಳಾ ಮೀಸಲಾತಿ ಜಾರಿಗೆ ಬಂದರೆ, ಕರ್ನಾಟಕ ವಿಧಾನಸಭೆಯಲ್ಲಿ 70 ರಿಂದ 78 ರವರೆಗೆ ಶಾಸಕಿಯರು ಇರಲಿದ್ದಾರೆ. ಮಹಿಳೆಯರು ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದರು.
ಕಾಂಗ್ರೆಸ್ ಪಕ್ಷ ಬದ್ಧತೆಗೆ ಹೆಸರಾಗಿರುವ ಪಕ್ಷ. ಪಂಚ ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮಿ ಯೋಜನೆ ಅತಿ ದೊಡ್ಡ ಯೋಜನೆಯಾಗಿದೆ. 1.22 ಕೋಟಿ ಫಲಾನುಭವಿಗಳಿಗೆ ಇದುವರೆಗೂ 34 ಸಾವಿರ ಕೋಟಿ ರೂಪಾಯಿ ಹಣವನ್ನು ಹಾಕಲಾಗಿದೆ. ಈ ಯೋಜನೆಯನ್ನು ಜಾರಿಗೆ ತಂದಿರುವುದಕ್ಕೆ ನನಗೆ ಹೆಮ್ಮೆಯಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
1999ರಲ್ಲಿ ನಾನು ಕೂಡ ಸಾಮಾನ್ಯ ಕಾರ್ಯಕರ್ತೆಯಾಗಿ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡೆ. ನಮ್ಮ ಹಿರಿಯ ನಾಯಕಿ ಮಾರ್ಗರೇಟ್ ಅಳ್ವ ಅವರೇ ನನಗೆ ಸ್ಫೂರ್ತಿ. ಹಂತ ಹಂತವಾಗಿ ಮೇಲೆ ಬಂದು ಇಂದು ಸರ್ಕಾರದಲ್ಲಿ ಸಚಿವರಾಗಿರುವೆ. ಕಾಂಗ್ರೆಸ್ ಪಕ್ಷ ಸಾಮಾನ್ಯರನ್ನು ಗುರುತಿಸುವ ಕೆಲಸ ಮಾಡುತ್ತಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಇದನ್ನೂ ಓದಿ: Gruha Lakshmi Scheme: ಗೃಹಲಕ್ಷ್ಮಿ ಹಣ ಕೂಡಿಟ್ಟು ಸರ್ಕಾರಿ ಶಾಲೆಗೆ ವಾಟರ್ ಫಿಲ್ಟರ್ ಕೊಡುಗೆ ನೀಡಿದ ಗೃಹಿಣಿ