ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Railway News: ಏಪ್ರಿಲ್‌ ಮೊದಲ ವಾರ 3 ದಿನ ರಜೆ; ಉಡುಪಿ, ಗೋವಾ, ಹುಬ್ಬಳ್ಳಿ, ಕೇರಳಕ್ಕೆ ವಿಶೇಷ ರೈಲು

ಏಪ್ರಿಲ್‌ ಮೂರರಂದು ಶುಕ್ರವಾರ ಗುಡ್‌ಫ್ರೈಡೇ ಸರ್ಕಾರಿ ರಜೆ ಇದೆ. ಆ ಬಳಿಕ ಶನಿವಾರ, ಭಾನುವಾರ ವಾರಾಂತ್ಯದ ರಜೆ ಸಿಗಲಿದೆ. ಈ ಮೂಲಕ ಒಂದೇ ವಾರದ ಅಂತರದಲ್ಲಿ ಮತ್ತೆ ಸರಣಿ ರಜೆ ಅವಕಾಶ ಬಂದಿದೆ. ಹೀಗಾಗಿ, ಪ್ರಯಾಣಿಕರ ಅನುಕೂಲಕ್ಕಾಗಿ ಎರಡು ವಿಶೇಷ ರೈಲುಗಳನ್ನು ಬೆಂಗಳೂರು- ಗೋವಾ- ಕೇರಳ ನಡುವೆ ಬಿಡಲಾಗಿದೆ.

ಸಾಂದರ್ಭಿಕ ಚಿತ್ರ

ಬೆಂಗಳೂರು, ಮಾ.31: ಏಪ್ರಿಲ್‌ ತಿಂಗಳ ಮೊದಲ ವಾರದಲ್ಲಿ ಮೂರು ದಿನ ಸರಣಿ ರಜೆ (holidays) ಸಿಗಲಿದೆ. ಈ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆಯು (Railway News) ಬೆಂಗಳೂರು ಉಡುಪಿ ಮಡಗಾಂವ್‌ (ಗೋವಾ), ಹುಬ್ಬಳ್ಳಿ ಬೆಂಗಳೂರು ಕೊಲ್ಲಂ (ಕೇರಳ) ನಡುವೆ ವಿಶೇಷ ರೈಲು ಓಡಿಸಲಿದ್ದು, ವೇಳಾಪಟ್ಟಿ ಬಿಡುಗಡೆ ಮಾಡಿದೆ.

ಏಪ್ರಿಲ್‌ ಮೂರರಂದು ಶುಕ್ರವಾರ ಗುಡ್‌ಫ್ರೈಡೇ ಸರ್ಕಾರಿ ರಜೆ ಇದೆ. ಆ ಬಳಿಕ ಶನಿವಾರ, ಭಾನುವಾರ ವಾರಾಂತ್ಯದ ರಜೆ ಸಿಗಲಿದೆ. ಈ ಮೂಲಕ ಒಂದೇ ವಾರದ ಅಂತರದಲ್ಲಿ ಮತ್ತೆ ಸರಣಿ ರಜೆ ಅವಕಾಶ ಬಂದಿದೆ. ಹೀಗಾಗಿ, ಪ್ರಯಾಣಿಕರ ಅನುಕೂಲಕ್ಕಾಗಿ ವಿಶೇಷ ರೈಲು ಬಿಡಲಾಗಿದೆ.

ಬೆಂಗಳೂರು ಮಡಗಾಂವ್ ವಿಶೇಷ ರೈಲು

ಗುಡ್ ಫ್ರೈಡೇ ಹಾಗೂ ಈಸ್ಟರ್ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಕಡಿಮೆ ಮಾಡಲು ನೈರುತ್ಯ ರೈಲ್ವೆಯು ಯಶವಂತಪುರ, ಮಡಗಾಂವ್ ಮತ್ತು ಬೆಂಗಳೂರು ಕಂಟೋನ್ಮೆಂಟ್ ನಡುವೆ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ ಎಂದು ರೈಲ್ವೆ ಇಲಾಖೆ ಮಾಹಿತಿ ನೀಡಿದೆ.

ರೈಲು ಸಂಖ್ಯೆ 06271 ಯಶವಂತಪುರ–ಮಡಗಾಂವ್ ವಿಶೇಷ ಎಕ್ಸ್‌ಪ್ರೆಸ್ ಏಪ್ರಿಲ್ 2ರಂದು ರಾತ್ರಿ 11.55ಕ್ಕೆ ಯಶವಂತಪುರದಿಂದ ಹೊರಟು, ಏಪ್ರಿಲ್ 3ರಂದು ಸಂಜೆ 5.30 ಕ್ಕೆ ಮಡಗಾಂವ್ ತಲುಪಲಿದೆ. ಹಿಂದಿರುಗುವ ಪ್ರಯಾಣದಲ್ಲಿ, ರೈಲು ಸಂಖ್ಯೆ 06272 ಮಡಗಾಂವ್–ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್‌ಪ್ರೆಸ್ ಏಪ್ರಿಲ್ 5ರಂದು ಬೆಳಿಗ್ಗೆ 11 ಗಂಟೆಗೆ ಮಡಗಾಂವ್ ನಿಂದ ಹೊರಡಲಿರುವ ಈ ರೈಲು, ಏಪ್ರಿಲ್ 6ರಂದು ಬೆಳಗಿನ ಜಾವ 5.20ಕ್ಕೆ ಬೆಂಗಳೂರು ಕಂಟೋನ್ಮೆಂಟ್ ತಲುಪಲಿದೆ.

Railways news: ಮಂಗಳೂರು-ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು 35 ದಿನ ಸಂಪೂರ್ಣ ರದ್ದು, ಹಲವು ಎಕ್ಸ್‌ಪ್ರೆಸ್‌ ರೈಲುಗಳ ಬದಲಾವಣೆ

ವಿಶೇಷ ರೈಲು ಎಲ್ಲೆಲ್ಲಿ ನಿಲುಗಡೆ?

ಈ ವಿಶೇಷ ರೈಲುಗಳು ಮಾರ್ಗಮಧ್ಯೆ ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು, ಬಂಟ್ವಾಳ, ಸುರತ್ಕಲ್, ಮುಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಬೈಂದೂರು, ಭಟ್ಕಳ, ಮುರ್ಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್, ಅಂಕೋಲಾ, ಕಾರವಾರ ಮತ್ತು ಕಾಣಕೋಣ ನಿಲ್ದಾಣಗಳಲ್ಲಿ ರೈಲು ನಿಲ್ಲಲಿದೆ.

ಹಿಂದಿರುಗುವ ಪ್ರಯಾಣದಲ್ಲಿ ರೈಲು ಸಂಖ್ಯೆ 06272 ಯಶವಂತಪುರ ನಿಲ್ದಾಣದಲ್ಲಿ ನಿಲುಗಡೆ ಇರುವುದಿಲ್ಲ. ಎಸ್ಎಂವಿಟಿ ಬೆಂಗಳೂರು ನಿಲ್ದಾಣದಲ್ಲಿ ರೈಲು ನಿಲ್ಲಲಿದೆ. ಈ ವಿಶೇಷ ರೈಲು ಒಟ್ಟು 19 ಬೋಗಿಗಳನ್ನು ಹೊಂದಿರಲಿದೆ. ಇದರಲ್ಲಿ ಎರಡು ಎಸಿ 2-ಟೈರ್, ಎರಡು ಎಸಿ 3-ಟೈರ್, 9 ಸ್ಲೀಪರ್ ಕ್ಲಾಸ್, 4 ಸಾಮಾನ್ಯ ದ್ವಿತೀಯ ದರ್ಜೆ ಹಾಗೂ 2 ಎಸ್ಎಲ್ಆರ್/ಡಿ ಬೋಗಿಗಳು ಇರಲಿವೆ.

ಹುಬ್ಬಳ್ಳಿ–ಕೊಲ್ಲಂ ವಿಶೇಷ ರೈಲು

ರೈಲು ಸಂಖ್ಯೆ 07347 ಎಸ್ಎಸ್ಎಸ್ ಹುಬ್ಬಳ್ಳಿ–ಕೊಲ್ಲಂ ವಿಶೇಷ ಎಕ್ಸ್ ಪ್ರೆಸ್ ರೈಲು ಏಪ್ರಿಲ್ 2ರಂದು ಬೆಳಿಗ್ಗೆ 7:05ಕ್ಕೆ ಹುಬ್ಬಳ್ಳಿಯಿಂದ ಹೊರಟು, ಏಪ್ರಿಲ್ 3ರಂದು ಬೆಳಿಗ್ಗೆ 7 ಗಂಟೆಗೆ ಕೊಲ್ಲಂ ತಲುಪಲಿದೆ. ಮರುಪಯಣದಲ್ಲಿ, ರೈಲು ಸಂಖ್ಯೆ 07348 ಕೊಲ್ಲಂ–ಎಸ್ಎಸ್ಎಸ್ ಹುಬ್ಬಳ್ಳಿ ವಿಶೇಷ ಎಕ್ಸ್ ಪ್ರೆಸ್ ರೈಲು ಏಪ್ರಿಲ್ 3ರಂದು ಬೆಳಿಗ್ಗೆ 10:45ಕ್ಕೆ ಕೊಲ್ಲಂನಿಂದ ಹೊರಡಲಿದ್ದು, ಏಪ್ರಿಲ್ 4ರಂದು ಬೆಳಿಗ್ಗೆ 10:40ಕ್ಕೆ ಹುಬ್ಬಳ್ಳಿ ಆಗಮಿಸಲಿದೆ.

Namma Metro Yellow Line: ಇಂದಿನಿಂದ ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ನಾಲ್ಕನೇ ರೈಲು ಓಡಾಟ, 19 ನಿಮಿಷಕ್ಕೊಂದು ರೈಲು

ಎಲ್ಲೆಲ್ಲಿ ನಿಲುಗಡೆ?

ಈ ವಿಶೇಷ ರೈಲು ಮಾರ್ಗಮಧ್ಯೆ ಎಸ್ಎಂಎಂ ಹಾವೇರಿ, ರಾಣೇಬೆನ್ನೂರು, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು, ಎಸ್ಎಂವಿಟಿ ಬೆಂಗಳೂರು, ಕೃಷ್ಣರಾಜಪುರಂ, ಬಂಗಾರಪೇಟೆ, ಕುಪ್ಪಂ, ಸೇಲಂ, ಈರೋಡ್, ತಿರುಪ್ಪೂರ್, ಪೋಡನೂರು, ಪಾಲಕ್ಕಾಡ್, ತ್ರಿಶೂರ್, ಆಲುವಾ, ಎರ್ನಾಕುಲಂ ಟೌನ್, ಕೊಟ್ಟಾಯಂ, ಚಂಗನಾಸೇರಿ, ತಿರುವಲ್ಲಾ, ಚೆಂಗನ್ನೂರ್, ಮಾವೇಲಿಕರ ಮತ್ತು ಕಾಯಂಕುಲಂ ನಿಲ್ದಾಣಗಳಲ್ಲಿ ನಿಲ್ಲಲಿದೆ.

ಈ ವಿಶೇಷ ರೈಲು ಒಟ್ಟು 17 ಬೋಗಿಗಳನ್ನು ಹೊಂದಿರಲಿದೆ. ಇದರಲ್ಲಿ ಒಂದು ಎಸಿ 2-ಟೈರ್, ಮೂರು ಎಸಿ 3-ಟೈರ್, 7 ಸ್ಲೀಪರ್ ಕ್ಲಾಸ್, 4 ಸಾಮಾನ್ಯ ದ್ವಿತೀಯ ದರ್ಜೆ ಹಾಗೂ 2 ಎಸ್ಎಲ್ಆರ್/ಡಿ ಬೋಗಿಗಳು ಇರಲಿವೆ.

ಹರೀಶ್‌ ಕೇರ

View all posts by this author