ಉಡುಪಿ: ಜಿಲ್ಲೆಯ ಮಣಿಪಾಲದ ಕೊಡಂಗೆ ದೇವಸ್ಥಾನದ ಸಮೀಪ ಇಂದು ಬೆಳಿಗ್ಗೆ ಶಾಲಾ ಬಸ್ ಪಲ್ಟಿಯಾದ ಪರಿಣಾಮ ಏಳು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ನಡೆದಿದೆ. ಗಾಯಗೊಂಡ ಮಕ್ಕಳನ್ನು ಸ್ಥಳೀಯರ ನೆರವಿನಿಂದ ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಯಾವುದೇ ಪ್ರಾಣಾಪಾಯವಿಲ್ಲ ಎಂದು ತಿಳಿದುಬಂದಿದೆ.
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ಪೊಲೀಸರು ಹಾಗೂ ಸ್ಥಳೀಯರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ಕೈಗೊಂಡಿದ್ದಾರೆ. ಬಸ್ ಹೇಗೆ ಪಲ್ಟಿಯಾಯಿತು ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ಚಾಲಕನ ನಿಯಂತ್ರಣ ತಪ್ಪಿದ್ದೇ ಅಥವಾ ಬೇರೆ ಕಾರಣವಿದೆಯೇ ಎಂಬುದು ತನಿಖೆಯ ಬಳಿಕ ಸ್ಪಷ್ಟವಾಗಲಿದೆ.
ಸುರತ್ಕಲ್‌ನಲ್ಲಿ ಅಕ್ರಮವಾಗಿ ನೆಲೆಸಿದ್ದ 6 ಬಾಂಗ್ಲಾದೇಶಿಗರ ಪತ್ತೆ
ಮಂಗಳೂರು: ನಗರದ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಆರು ಮಂದಿ ಬಾಂಗ್ಲಾದೇಶಿ ಪ್ರಜೆಗಳನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಮಂಗಳೂರು ನಗರ ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ಅವರು, ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಆರು ಮಂದಿ ಬಾಂಗ್ಲಾದೇಶಿ ಪ್ರಜೆಗಳನ್ನು ಅಧಿಕಾರಿಗಳು ಗುರುತಿಸಿದ್ದಾರೆ. ಈ ಸಂಬಂಧ ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿಗೆ (FRRO) ವರದಿ ಕಳುಹಿಸಲಾಗುತ್ತಿದೆ. ಬಾಂಗ್ಲಾ ಪ್ರಜೆಗಳನ್ನು ವಶಕ್ಕೆ ಪಡೆಯಲು ಎಫ್‌ಆರ್‌ಆರ್‌ಒ ಆದೇಶ ಹೊರಡಿಸಲಿದೆ ಹಾಗೂ ಸ್ವದೇಶಕ್ಕೆ ಗಡಿಪಾರು ಮಾಡಲು ಮುಂದಿನ ಕಾನೂನು ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.
ಆಧಾರ್ ದುರ್ಬಳಕೆ ಮಾಡಿ ನಕಲಿ ಸಿಮ್‌ಗಳ ಜಾಲ: KBC ಲಾಟರಿ ವಂಚನೆ, ಸೆಕ್ಸ್‌ಟಾರ್ಷನ್ ಪ್ರಕರಣದಲ್ಲಿ ಇಬ್ಬರ ಬಂಧನ
ಅಕ್ರಮ ವಲಸಿಗರ ಪತ್ತೆಗಾಗಿ ಕರಾವಳಿ ಭಾಗದಲ್ಲಿ ಪೊಲೀಸರು ತಪಾಸಣೆ ತೀವ್ರಗೊಳಿಸಿದ್ದಾರೆ. ಈ ಕಾರ್ಯಾಚರಣೆ ಮೂಲಕ ಸುರತ್ಕಲ್‌ನಲ್ಲಿ ದಾಖಲೆಗಳಿಲ್ಲದೇ ಅಕ್ರಮವಾಗಿ ನೆಲೆಸಿದ್ದ ವಿದೇಶಿ ಪ್ರಜೆಗಳ ಜಾಲವನ್ನು ಅಧಿಕಾರಿಗಳು ಭೇದಿಸಿದ್ದಾರೆ. ಸದ್ಯ ಬಂಧಿತರನ್ನು ತನಿಖೆಗೆ ಒಳಪಡಿಸಲಾಗುತ್ತಿದ್ದು, ಎಫ್‌ಆರ್‌ಆರ್‌ಒ ಆದೇಶದ ಬೆನ್ನಲ್ಲೇ ಗಡಿಪಾರು ಪ್ರಕ್ರಿಯೆ ಆರಂಭವಾಗಲಿದೆ.