ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Ramanath Rai's Car accident: ಕಾರ್ಕಳದಲ್ಲಿ ಮಾಜಿ ಸಚಿವ ರಮಾನಾಥ ರೈ ಕಾರು- ಬಸ್ ನಡುವೆ ಭೀಕರ ಅಪಘಾತ; ಇಬ್ಬರಿಗೆ ಗಾಯ

ಉಡುಪಿ ಜಿಲ್ಲೆ ಕಾರ್ಕಳದ ಸಾಣೂರು ರಾಮಮಂದಿರ ಡಿವೈಡರ್ ಕ್ರಾಸ್‌ನಲ್ಲಿ ಭಾನುವಾರ ಅಪಘಾತ ನಡೆದಿದೆ. ಕಾರ್ಕಳ - ಮೂಡುಬಿದಿರೆ ಹೆದ್ದಾರಿಯಲ್ಲಿ ಕಾರು ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಎರಡೂ ವಾಹನಗಳ ಮುಂಭಾಗ ಜಖಂಗೊಂಡಿದೆ.

ಕಾರ್ಕಳ: ಮಾಜಿ ಸಚಿವ ರಮಾನಾಥ ರೈ ಅವರಿದ್ದ ಕಾರು ಮತ್ತು ಬಸ್ ನಡುವೆ ಅಪಘಾತ ಸಂಭವಿಸಿ, ಇಬ್ಬರು ಗಾಯಗೊಂಡ ಘಟನೆ (Ramanath Rai's Car accident) ಕಾರ್ಕಳದ ಸಾಣೂರು ರಾಮಮಂದಿರ ಡಿವೈಡರ್ ಕ್ರಾಸ್‌ನಲ್ಲಿ ಭಾನುವಾರ ನಡೆದಿದೆ. ಘಟನೆಯಲ್ಲಿ ರಮಾನಾಥ ರೈ ಅವರು ಅಪಾಯದಿಂದ ಪಾರಾಗಿದ್ದಾರೆ. ಆದರೆ ಅವರ ಕಾರು ಚಾಲಕ ಮತ್ತು ಆಪ್ತ ಸಹಾಯಕ ಗಾಯಗೊಂಡಿದ್ದಾರೆ.

ಕಾರ್ಕಳ - ಮೂಡುಬಿದಿರೆ ಹೆದ್ದಾರಿಯಲ್ಲಿ ಕಾರು ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಎರಡೂ ವಾಹನಗಳ ಮುಂಭಾಗ ಜಖಂಗೊಂಡಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದ್ದು, ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ವ್ಹೀಲಿಂಗ್ ಹುಚ್ಚಾಟಕ್ಕೆ ಟಿಟಿ ವಾಹನ ಅಪಘಾತ; ಒಬ್ಬ ಸಾವು, ಐವರಿಗೆ ಗಾಯ

ಬೆಂಗಳೂರು: ವ್ಹೀಲಿಂಗ್​​​​ ಮಾಡುತ್ತಿದ್ದ ಪುಂಡರ ಹುಚ್ಚಾಟಕ್ಕೆ ಅಮಾಯಕನೊಬ್ಬ ಬಲಿಯಾದರೆ, ಐವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ದಾರುಣ ಘಟನೆ ಶನಿವಾರ ರಾತ್ರಿ ನಗರದಲ್ಲಿ ಸಂಭವಿಸಿದೆ.

ಅನ್ನಪೂರ್ಣೇಶ್ವರಿ ನಗರ ಠಾಣೆ ವ್ಯಾಪ್ತಿಯ ಹೊರವರ್ತುಲ ರಸ್ತೆಯ ಮಹದೇಶ್ವರ ದೇವಸ್ಥಾನದ ಬಳಿ ಸಂಭವಿಸಿದ ಅಪಘಾತದಲ್ಲಿ ಟೆಂಪೋ ಟ್ರಾವೆಲರ್​​​ (ಟಿಟಿ) ವಾಹನ ಪಲ್ಟಿಯಾಗಿದ್ದು, ಲಗ್ಗೆರೆಯ ನಿವಾಸಿಯಾದ ಮನೋಜ್​ ಎಂಬ ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಚಾಲಕ ಸೇರಿದಂತೆ ಐವರು ತೀವ್ರವಾಗಿ ಗಾಯಗೊಂಡಿದ್ದಾರೆ.

ಏಳು ಜನ ಪ್ರಯಾಣಿಕರಿದ್ದ ಟೆಂಪೋ ಟ್ರಾವೆಲರ್​ ವಾಹನ ತಡರಾತ್ರಿ ರಿಂಗ್​ ರಸ್ತೆಯ ಮೂಲಕ ನಾಯಂಡಹಳ್ಳಿ ಕಡೆಗೆ ಸಂಚರಿಸುತ್ತಿತ್ತು. ರವಿ ಎಂಬುವವರು ಟಿಟಿ ವಾಹನ ಚಾಲನೆ ಮಾಡುತ್ತಿದ್ದರು. ಮಾಳಗಾಳ ಸಮೀಪದ ಮಹದೇಶ್ವರ ದೇವಸ್ಥಾನದ ಬಳಿ ಸಾಗುತ್ತಿದ್ದಾಗ ದಿಢೀರನೆ ಎದುರಿಗೆ ವ್ಹೀಲಿಂಗ್ ಮಾಡುತ್ತ ಬಂದ ಪುಂಡರನ್ನು ತಪ್ಪಿಸಲು ಚಾಲಕ ರವಿ ಯತ್ನಿಸಿದ್ದಾರೆ.

ಕೊಡಲಿಯಿಂದ ಕೊಚ್ಚಿ ಕೊಚ್ಚಿ ಪತ್ನಿ-ಮೂವರು ಮಕ್ಕಳನ್ನು ಕೊಂದ ಪಾಪಿ ಪತಿ

ಈ ವೇಳೆ ನಿಯಂತ್ರಣ ತಪ್ಪಿದ ಟಿಟಿ ವಾಹನ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ.​ ಅಪಘಾತದ ತೀವ್ರತೆಗೆ ವಾಹನದಲ್ಲಿದ್ದ ಮನೋಜ್ ಸ್ಥಳದಲ್ಲೇ ಕೊನೆಯುಸಿರೆಳೆದರೆ, ಗಾಯಗೊಂಡ ಚಾಲಕ ರವಿ ಸೇರಿದಂತೆ ಐವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಜ್ಞಾನಭಾರತಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.