ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Ilaiyaraaja: ಕೊಲ್ಲೂರು ಮೂಕಾಂಬಿಕೆಗೆ 4 ಕೋಟಿ ರೂ.ನ ವಜ್ರದ ಕಿರೀಟ ಅರ್ಪಿಸಿದ ಸಂಗೀತ ಮಾಂತ್ರಿಕ ಇಳಯರಾಜ

Kolluru Mookambika: ಕೊಲ್ಲೂರು ಮೂಕಾಂಬಿಕೆಯ ಪರಮ ಭಕ್ತರಾಗಿರುವ ಇಳಯರಾಜ, ಈ ಹಿಂದೆಯೂ ದೇಗುಲಕ್ಕೆ ಹಲವು ಬಗೆಯ ಆಭರಣಗಳನ್ನು ಅರ್ಪಿಸಿ ತಮ್ಮ ಭಕ್ತಿಭಾವವನ್ನು ತೋರಿದ್ದಾರೆ. ಈ ಬಾರಿ ಅವರು ದೇವಿಗೆ ವಜ್ರದ ಕಿರೀಟದ ಜೊತೆಗೆ ಇತರ ಆಭರಣಗಳನ್ನು ಸಮರ್ಪಿಸಿದ್ದಾರೆ.

ಕೊಲ್ಲೂರು ಮೂಕಾಂಬಿಕೆಗೆ 4 ಕೋಟಿ ರೂ.ನ ವಜ್ರದ ಕಿರೀಟ ಅರ್ಪಿಸಿದ ಇಳಯರಾಜ

-

ಹರೀಶ್‌ ಕೇರ ಹರೀಶ್‌ ಕೇರ Sep 11, 2025 7:51 AM

ಉಡುಪಿ: ಸಂಗೀತ ಲೋಕದ ದಿಗ್ಗಜ, ಸ್ವರ ಮಾಂತ್ರಿಕ ಇಳಯರಾಜ (Ilaiyaraaja) ಅವರು ಕೊಲ್ಲೂರು ಶ್ರೀ ಮೂಕಾಂಬಿಕಾ (Kolluru Mookambika) ದೇವಿಯ ಮೇಲಿನ ತಮ್ಮ ಭಕ್ತಿಯನ್ನು ಮತ್ತೊಮ್ಮೆ ಪ್ರದರ್ಶಿಸಿದ್ದಾರೆ. ತಮ್ಮ ಆರಾಧ್ಯ ದೇವಿಯಾದ ಮೂಕಾಂಬಿಕೆಗೆ ಅವರು ಸುಮಾರು 4 ಕೋಟಿ ರೂಪಾಯಿ ಮೌಲ್ಯದ ವಜ್ರಖಚಿತ ಕಿರೀಟ (Dimond crown) ಮತ್ತು ವಿವಿಧ ಆಭರಣಗಳನ್ನು ಸಮರ್ಪಿಸಿ ಭಕ್ತಿ ಸಮರ್ಪಿಸಿದ್ದಾರೆ.

ಕೊಲ್ಲೂರು ಮೂಕಾಂಬಿಕೆಯ ಪರಮ ಭಕ್ತರಾಗಿರುವ ಇಳಯರಾಜ, ಈ ಹಿಂದೆಯೂ ದೇಗುಲಕ್ಕೆ ಹಲವು ಬಗೆಯ ಆಭರಣಗಳನ್ನು ಅರ್ಪಿಸಿ ತಮ್ಮ ಭಕ್ತಿಭಾವವನ್ನು ತೋರಿದ್ದಾರೆ. ಈ ಬಾರಿ ಅವರು ದೇವಿಗೆ ವಜ್ರದ ಕಿರೀಟದ ಜೊತೆಗೆ ಇತರ ಆಭರಣಗಳನ್ನು ಸಮರ್ಪಿಸಿದ್ದಾರೆ. ಇದರ ಜೊತೆಗೆ, ವೀರಭದ್ರ ದೇವರಿಗೆ ರಜತ ಕಿರೀಟ ಮತ್ತು ಖಡ್ಗವನ್ನೂ ಅರ್ಪಿಸಿದ್ದಾರೆ.

ಆಭರಣಗಳನ್ನು ದೇಗುಲಕ್ಕೆ ಅರ್ಪಿಸುವ ಮುನ್ನ ದೇವಾಲಯದ ಆಡಳಿತ ಮಂಡಳಿ ಮತ್ತು ಅರ್ಚಕರು ಇಳಯರಾಜ ಅವರೊಂದಿಗೆ ಮೆರವಣಿಗೆಯಲ್ಲಿ ಭಾಗಿಯಾದರು. ಈ ಸಂದರ್ಭದಲ್ಲಿ ಇಳಯರಾಜ ಅವರು ಭಕ್ತಿಪರವಶರಾಗಿ ತಮ್ಮ ಜೀವನದಲ್ಲಿ ದೇವಿಯ ಅನುಗ್ರಹದಿಂದ ನಡೆದ ಪವಾಡಗಳನ್ನು ನೆನಪಿಸಿಕೊಂಡು ಭಾವುಕರಾದರು. ಮೂಕಾಂಬಿಕೆ ದೇವಿಯಿಂದ ತಮ್ಮ ಜೀವನದಲ್ಲಿ ಅಸಾಮಾನ್ಯ ಬೆಳವಣಿಗೆಗಳು ನಡೆದಿವೆ ಎಂದು ಅವರು ಹೇಳಿಕೊಂಡಿದ್ದಾರೆ.

ದೇವಾಲಯಕ್ಕೆ ಈ ಮಹಾನ್ ಕೊಡುಗೆಗಳನ್ನು ನೀಡಿದ ಇಳಯರಾಜ ಅವರಿಗೆ, ದೇಗುಲದ ವತಿಯಿಂದ ಗೌರವಾರ್ಪಣೆ ಮಾಡಿ ಕೃತಜ್ಞತೆ ಸಲ್ಲಿಸಲಾಯಿತು. ದೇಶದ ಖ್ಯಾತ ಸಂಗೀತ ನಿರ್ದೇಶಕರಿಂದ ದೇಗುಲಕ್ಕೆ ಇಷ್ಟು ದೊಡ್ಡ ಪ್ರಮಾಣದ ದೇಣಿಗೆ ಬಂದಿರುವುದು ಭಕ್ತರಲ್ಲಿ ಸಂತೋಷ ಮೂಡಿಸಿದೆ. ಈ ಮಹಾನ್ ಕಲಾವಿದ ತಮ್ಮ ಆರಾಧ್ಯ ದೇವಿಯಾಗಿರುವ ಕೊಲ್ಲೂರು ಮೂಕಾಂಬಿಕೆಯ ಕ್ಷೇತ್ರಕ್ಕೆ ಆಗಾಗ ಭೇಟಿ ನೀಡುತ್ತಿರುತ್ತಾರೆ. ಗಾಯಕ ಕೆಜೆ ಯೇಸುದಾಸ್‌ ಅವರು ಸಹ ಕೊಲ್ಲೂರಿಗೆ ಭೇಟಿ ನೀಡುತ್ತಿರುತ್ತಾರೆ.

ಇದನ್ನೂ ಓದಿ: Ilaiyaraaja: ಕೃತಿಚೌರ್ಯ ಆರೋಪ; 'ಗುಡ್ ಬ್ಯಾಡ್ ಅಗ್ಲಿ' ಚಿತ್ರತಂಡಕ್ಕೆ 5 ಕೋಟಿ ರೂ. ಡಿಮ್ಯಾಂಡ್ ಇಟ್ಟ ಸಂಗೀತ ನಿರ್ದೇಶಕ ಇಳಯರಾಜ