ಬ್ರಹ್ಮಾವರ: ಉಡುಪಿ (Udupi news) ಜಿಲ್ಲೆಯ ಕಾರ್ಕಳದ (Karkala) ಮಾಜಿ ಶಾಸಕ ದಿ. ಗೋಪಾಲ ಭಂಡಾರಿಯವರ (Ex MLA Gopala Bhandari) ಪುತ್ರ ಸುದೀಪ್ ಭಂಡಾರಿ (48) ಬ್ರಹ್ಮಾವರ ಸಮೀಪದ ಬಾರ್ಕೂರು ಬಳಿ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ (Self Harming) ಮಾಡಿಕೊಂಡ ಘಟನೆ ಸೋಮವಾರ ರಾತ್ರಿ ನಡೆದಿದೆ. ಮೃತ ಸುದೀಪ್ ಭಂಡಾರಿ ಹೆಬ್ರಿಯಲ್ಲಿ ವೈನ್ ಶಾಪ್ ನಡೆಸಿಕೊಂಡಿದ್ದು ಅತ್ಯಂತ ಸರಳ ವ್ಯಕ್ತಿತ್ವದವರಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ
ಮೃತ ಸುದೀಪ್ ಭಂಡಾರಿ ತಾಯಿ, ಪತ್ನಿ, ಇಬ್ಬರು ಮಕ್ಕಳು, ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ. ಸ್ಥಳಕ್ಕೆ ಬ್ರಹ್ಮಾವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸಜ್ಜನ ರಾಜಕಾರಣಿ ಎಂದೇ ಖ್ಯಾತರಾಗಿದ್ದ ಗೋಪಾಲ ಭಂಡಾರಿ ಅವರು ಕಾರ್ಕಳ ಕ್ಷೇತ್ರದಿಂದ ಎರಡು ಬಾರಿ (1999-2004 ಮತ್ತು 2008-2013) ಆಯ್ಕೆಯಾಗಿ ಸೇವೆ ಸಲ್ಲಿಸಿದ್ದರು. ಅವರು ಜುಲೈ 4, 2019 ರಂದು ಬೆಂಗಳೂರಿನಿಂದ ಮಂಗಳೂರಿಗೆ ವೋಲ್ವೋ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಹೃದಯಾಘಾತದಿಂದ ನಿಧನರಾಗಿದ್ದರು.
ಇದನ್ನೂ ಓದಿ: Self Harming: 3 ತಿಂಗಳಿಂದ ಸಂಬಳ ದೊರೆಯದ್ದಕ್ಕೆ ಗ್ರಂಥಪಾಲಕಿ ಆತ್ಮಹತ್ಯೆ